7th Pay Commission
ದೀಪಾವಳಿಗೂ (Diwali) ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ (Central Government Employees and Pensioners) ಕೇಂದ್ರ ಸರ್ಕಾರ (Central Govt) ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ(Employees’ Allowance – DA)ಯನ್ನು ಶೇ. 3 ರಷ್ಟು ಹೆಚ್ಚಳ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ (Union Cabinet meeting) ಅನುಮೋದನೆ (approval) ನೀಡಿದೆ.
ಹೌದು, ತುಟ್ಟಿ ಭತ್ಯೆ ಏರಿಕೆ ಮೂಲಕ ಕೇಂದ್ರ ಸರ್ಕಾರ ದೀಪಾವಳಿಗೂ ಮೊದಲೇ ತನ್ನ ನೌಕರರಿಗೆ ಉಡುಗೊರೆ ನೀಡಿದೆ. ನೌಕರರ ಡಿಎ ಏರಿಕೆ ಹಾಗೂ ಪಿಂಚಣಿದಾರರ ಡಿಆರ್ ಹೆಚ್ಚಳಕ್ಕೆ ಕಳೆದ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ತುಟ್ಟಿ ಭತ್ಯೆಯನ್ನು ಶೇ. 3ರಷ್ಟು ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ. ಇದರಿಂದ 1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
ಸಾಮಾನ್ಯವಾಗಿ ಕೇಂದ್ರ ಸರ್ಕಾರ ತನ್ನ ನೌಕರರ ತುಟ್ಟಿ ಭತ್ಯೆಯನ್ನು ವರ್ಷಕ್ಕೆ ಎರಡು ಬಾರಿ ಪರಿಷ್ಕರಣೆ ಮಾಡುತ್ತದೆ. ಜನವರಿಯಲ್ಲಿ ಹಾಗೂ ಜುಲೈನಿಂದ ಪೂರ್ವಾನ್ವಯವಾಗುವಂತೆ ನಂತರದ ತಿಂಗಳುಗಳಲ್ಲಿ ಡಿಎ ಪರಿಷ್ಕರಣೆ ನಡೆಸುವುದು ರೂಢಿ. ಈ ಮೂಲಕ ಹಾಲಿ ಕೇಂದ್ರ ಸರ್ಕಾರಿ ನೌಕರರು ಡಿಎ ಪಡೆದರೆ ಪಿಂಚಣಿದಾರರು ಡಿಆರ್ (ಡಿಯರ್‌ನೆಸ್ ರಿಲೀಫ್) ಸ್ವೀಕರಿಸುತ್ತಾರೆ.
ಮಾರ್ಚ್‌ನಲ್ಲಿ ತುಟ್ಟಿ ಭತ್ಯೆ 4% ಏರಿಕೆ
ಕಳೆದ ಮಾರ್ಚ್‌ನಲ್ಲಿ ಕೊನೆಯ ಬಾರಿ ಶೇ. 4ರಷ್ಟು ಡಿಎ ಹೆಚ್ಚಳ ಮಾಡಲಾಗಿತ್ತು. ಜನವರಿ 2024ರಿಂದ ಜಾರಿಗೆ ಬರುವಂತೆ ಈ ಏರಿಕೆ ನಡೆದಿತ್ತು. ಇದಾದ ಬಳಿಕ ಕೇಂದ್ರ ಸರ್ಕಾರಿ ನೌಕರರು ತಮ್ಮ ಮೂಲ ವೇತನದ ಶೇ. 50ರಷ್ಟು ಡಿಎ ಹಾಗೂ ಪಿಂಚಣಿದಾರರು ತಮ್ಮ ಮೂಲ ಪಿಂಚಣಿಯ ಶೇ. 50ರಷ್ಟು ಡಿಆರ್ ಅನ್ನು ಪಡೆಯಲು ಅರ್ಹರಾಗಿದ್ದರು.
ತುಟ್ಟಿ ಭತ್ಯೆ ಏರಿಕೆ ಅಂದಾಜು 1.15 ಕೋಟಿ ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಹೆಚ್ಚುತ್ತಿರುವ ಹಣದುಬ್ಬರದ ನಡುವೆ ಒಂದಿಷ್ಟು ರಿಲೀಫ್ ನೀಡಲಿದೆ.
ಉದ್ಯೋಗಿಗಳಿಗೆ ಹಣದುಬ್ಬರದ ಪರಿಣಾಮಗಳನ್ನು ತಗ್ಗಿಸುವ ಉದ್ದೇಶದಿಂದ ವೇತನದ ಒಂದು ಭಾಗವಾಗಿ ತುಟ್ಟಿ ಭತ್ಯೆ ನೀಡಲಾಗುತ್ತದೆ. ಡಿಎ ಹೆಚ್ಚಳವು ಸರ್ಕಾರಿ ನೌಕರರಿಗೆ ಅವರ ಖರೀದಿ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.
ಇತ್ತೀಚಿನ ಕೈಗಾರಿಕಾ ಕಾರ್ಮಿಕರಿಗೆ ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ-ಐಡಬ್ಲ್ಯೂ) ಆಧರಿಸಿ ಕೇಂದ್ರ ಸರ್ಕಾರಿ ನೌಕರರಿಗೆ ನೀಡಬೇಕಾದ ತುಟ್ಟಿ ಭತ್ಯೆಯನ್ನು ಲೆಕ್ಕ ಹಾಕಲಾಗುತ್ತದೆ. ಕಾರ್ಮಿಕ ಸಚಿವಾಲಯ ಪ್ರತಿ ತಿಂಗಳು ಈ ಅಂಕಿ-ಅಂಶಗಳನ್ನು ಬಿಡುಗಡೆ ಮಾಡುತ್ತದೆ.
7ನೇ ವೇತನ ಆಯೋಗದ ಅಡಿಯಲ್ಲಿ ಡಿಎ ಲೆಕ್ಕ ಹಾಕಲು ಈ ಸೂತ್ರವನ್ನು ಬಳಸಲಾಗುತ್ತದೆ, ತುಟ್ಟಿ ಭತ್ಯೆ = [{12 ತಿಂಗಳ ಸರಾಸರಿ ಗ್ರಾಹಕ ಬೆಲೆ ಸೂಚ್ಯಂಕ (ಮೂಲ ವರ್ಷ 2001=100) for – 261.42}/261.42×100]