PDO
ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ಒಂದು ಸಿಹಿ ಸುದ್ದಿ ಇದೆ. ಅದೇನೆಂದರೆ, ಕೆಲವು ತಿಂಗಳ ಹಿಂದೆಯಷ್ಟೇ ಕರ್ನಾಟಕ ಲೋಕಸೇವಾ ಆಯೋಗವು(KPSC) ಪಂಚಾಯತ್ ರಾಜ್ ಮತ್ತು ಗ್ರಾಮೀಣಭಿವೃದ್ಧಿ ಇಲಾಖೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿತ್ತು ಮತ್ತು ಅರ್ಜಿ ಸಲ್ಲಿಕೆಗೆ ನೀಡಿದ್ದ ಕೊನೆ ದಿನಾಂಕ ಕೂಡ ಮುಗಿದಿತ್ತು.
ಆದರೆ ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗಾಗಿ ಒಂದು ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇನೆಂದರೆ, ಸೆಪ್ಟೆಂಬರ್ 10.2024ರ CSE 166 SEN 2014 ಪ್ರಕಾರ ಒಂದು ಬಾರಿಗೆ ಅನ್ವಯವಾಗುವಂತೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ ಮೂರು ವರ್ಷಗಳ ಕಾಲ ಹೆಚ್ಚಿನ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಹೀಗಾಗಿ PDO ಹುದ್ದೆಗಳಿಗೆ KPSC ಮತ್ತೊಮ್ಮೆ ಅರ್ಜಿ ಆಹ್ವಾನ ಮಾಡಿದೆ. ಕಾರಣಾಂತರಗಳಿಂದ ಈ ಹಿಂದೆ ಅರ್ಜಿ ಸಲ್ಲಿಸಲಾಗದವರು ಹಾಗೂ ವಯಸ್ಸಿನ ಮಿತಿ ಹೆಚ್ಚಿದ್ದ ಕಾರಣದಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದೆ ನಿರಾಸರಾಗಿದ್ದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು. ಅರ್ಜಿ ಸಲ್ಲಿಸುವ ಆಸಕ್ತರಿಗಾಗಿ ಹುದ್ದೆ ಕುರಿತ ಹೆಚ್ಚಿನ ವಿವರ ಹೀಗಿದೆ ನೋಡಿ.
ಈ ಸುದ್ದಿ ಓದಿ:- Labour Card: ಲೇಬರ್ ಕಾರ್ಡ್ ಇದ್ದವರಿಗೆ ಸರ್ಕಾರದಿಂದ ಸಿಗಲಿದೆ 60,000 ಸಹಾಯಧನ.!
ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಸಂಸ್ಥೆ:- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
ಹುದ್ದೆ ಹೆಸರು:- ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)
ಒಟ್ಟು ಹುದ್ದೆಗಳ ಸಂಖ್ಯೆ:- 247 ಹುದ್ದೆಗಳು
ಹುದ್ದೆಗಳ ವಿವರ:-
* ಹೈದರಬಾದ್ ಕರ್ನಾಟಕ – 97 ಹುದ್ದೆಗಳು
* ಸಾಮಾನ್ಯ – 150 ಹುದ್ದೆಗಳು
ಉದ್ಯೋಗ ಸ್ಥಳ:- ಕರ್ನಾಟಕದ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಅತ್ಯುತ್ತಮ ವೇತನ ಶ್ರೇಣಿಯೊಂದಿಗೆ ಇತರೆ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತವೆ
ಶೈಕ್ಷಣಿಕ ವಿದ್ಯಾರ್ಹತೆ:-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಭಾಗದಲ್ಲಿ ಪದವಿ ಉತ್ತೀರ್ಣರಾಗಿರಬೇಕು.
ಈ ಸುದ್ದಿ ಓದಿ:- Scholarship: SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ.!
ವಯೋಮಿತಿ ಮತ್ತು ವಯೋಮಿತಿ ಸಡಿಲಿಕೆ:-
* ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ ಕನಿಷ್ಠ ವಯೋಮಿತಿ 18 ವರ್ಷಗಳು
* ರಾಜ್ಯ ಸರ್ಕಾರವು ಸೆಪ್ಟೆಂಬರ್ 10 ರಂದು ಜಾರಿ ಮಾಡಿರುವ ಆದೇಶದಲ್ಲಿ ಎಲ್ಲಾ ಪ್ರವರ್ಗಗಳಿಗೆ ಒಂದು ಬಾರಿಗೆ ಅನ್ವಯಿಸುವಂತೆ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ ನೀಡಿರುತ್ತದೆ. ಆ ಪ್ರಕಾರವಾಗಿ ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳು
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 41 ವರ್ಷ
* ಪ.ಜಾ, ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 43 ವರ್ಷ
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ವಿಧಾನದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
* KPSC website ಗೆ ಭೇಟಿ ನೀಡಿ PDO ಅಪ್ಲಿಕೇಶನ್ ವಿಭಾಗಕ್ಕೆ ತೆರಳಿ, ಲಿಂಕ್ ಕ್ಲಿಕ್ ಮಾಡಿ ಕೇಳಲಾಗುವ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು
* ಪೂರಕ ದಾಖಲೆಗಳನ್ನು ಕೂಡ ಸೂಚನೆ ಪ್ರಕಾರವಾಗಿ ಸಲ್ಲಿಸಬೇಕು
* ನಿಮ್ಮ ವರ್ಗಕ್ಕೆ ಅನುಕೂಲವಾಗುವ ಅರ್ಜಿ ಶುಲ್ಕ ಪಾವತಿಸಿ, ಇ-ರಸೀದಿ ಪಡೆಯಿರಿ
* ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೆ ಅರ್ಜಿ ಸ್ವೀಕೃತಿ ಪಡೆದುಕೊಳ್ಳಿ.
ಈ ಸುದ್ದಿ ಓದಿ:- Railway:- ರೈಲ್ವೇ ನೇಮಕಾತಿ, PUC ಪಾಸ್ ಆಗಿದ್ದರೆ ಸಾಕು ಅರ್ಜಿ ಹಾಕಿ.! 1,12,400 ಮಾಸಿಕ ವೇತನ/-
ಅರ್ಜಿ ಶುಲ್ಕ:-
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ.300
* ಪ.ಜಾ, ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ನೇರ ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03-10-2024.