HSRP ನಂಬರ್ ಪ್ಲೇಟ್ ಇಲ್ಲದಿದ್ರೂ ದಂಡ ಬೀಳಬಾರದು ಅಂದ್ರೆ ತಕ್ಷಣವೇ ಈ 2 ಕೆಲಸ ಮಾಡಿ.!

HSRP Number Plate

ರಾಜ್ಯದಲ್ಲಿ ಎಲ್ಲ ಹಳೆಯ ವಾಹನಗಳಿಗೆ (Old Vehicles) ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರಿಜಿಸ್ಪ್ರೇಷನ್‌ ನಂಬರ್‌ ಪ್ಲೇಟ್‌-High Security Registration Number Plate- HSRP) ಕಡ್ಡಾಯವಾಗಿ ಅಳವಡಿಸಬೇಕು ಎಂದು ಈಗಾಗಲೇ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿತ್ತು.

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ಗಾಗಿ (HSRP Number Plate) ಅರ್ಜಿ ಸಲ್ಲಿಸಲು ನ. 17 ಕೊನೇ ದಿನ ಎಂದು ತಿಳಿಸಲಾಗಿತ್ತು. ಇಲ್ಲದಿದ್ದರೆ ಪ್ರತಿ ಬಾರಿ ಪೊಲೀಸರು ಹಿಡಿದಾಗಲೂ 500 ರೂಪಾಯಿಯಿಂದ 1 ಸಾವಿರ ರೂಪಾಯಿ ವರೆಗೆ ದಂಡ ಕಟ್ಟಬೇಕಿತ್ತು. ಆದರೆ, ಈಗ ಆ ತಲೆಬಿಸಿ ಸದ್ಯದ ಮಟ್ಟಿಗೆ ತಪ್ಪಿದೆ. ಸರ್ಕಾರ ಈಗ ಗಡುವನ್ನು ವಿಸ್ತರಣೆ ಮಾಡಿದ್ದು, 2024ರ ಫೆಬ್ರವರಿ 17ರವರೆಗೂ ಕಾಲಾವಕಾಶ ನೀಡಿದೆ.

WhatsApp Group Join Now
Telegram Group Join Now

ಹಾಗಂತ ಇನ್ನೂ ಹಾಕಿಸದೇ ಕುಳಿತುಕೊಂಡಿರಬೇಡಿ. ಸಮಯ ಬೇಗ ಜಾರುತ್ತದೆ. ನಾಳಿನ ಕೆಲಸವನ್ನು ಇಂದೇ ಮಾಡಿ. ಶೀಘ್ರ ನೋಂದಣಿ ಮಾಡಿಸಿಕೊಂಡು ಬಿಡಿ. ರಾಜ್ಯದಲ್ಲಿನ ಹಳೇ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಹಾಕಿಸಲು ಇದೇ ನವೆಂಬರ್ 17 ಕೊನೆಯ ದಿನವಾಗಿತ್ತು.

ಆದರೆ, ನಾವು ಈಗ ಈ ಅವಧಿಯನ್ನು ವಿಸ್ತರಣೆ ಮಾಡಲು ಚಿಂತನೆ ನಡೆಸಿದ್ದೇವೆ.‌ನವೆಂಬರ್ 17ರ ಬದಲಿಗೆ 2024ರ ಫೆಬ್ರವರಿ 17ರವರೆಗೂ ಸಮಯಾವಕಾಶ ನೀಡಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದರು. ಹೀಗಾಗಿ ಇನ್ನು ನಿಮಗೆ ಸಿಗುವುದು ಕೇವಲ ಎರಡೂವರೆ ತಿಂಗಳು ಮಾತ್ರ ಎಂಬುದನ್ನು ಮರೆಯುವಂತಿಲ್ಲ.

ಒಂದು ವೇಳೆ ನೀವೇನಾದ್ರೂ ಸರ್ಕಾರ ನೀಡಿರುವ ಈ ಕಾಲಾವಕಾಶದ ಒಳಗೆ ನಂಬರ್ ಪ್ಲೇಟ್ ಅಳವಡಿಕೆ ಮಾಡಿಸದಿದ್ದಲ್ಲಿ ಅಂತಹ ವಾಹನ ಸವಾರರಿಗೆ ಸಂಚಾರಿ ಪೊಲೀಸರು ದಂಡ ವಿಧಿಸಲಿದ್ದಾರೆ. ಆದ್ರೆ, ನೀವು ನಂಬರ್ ಪ್ಲೇಟ್ ಅಳವಡಿಸಿಕೊಳ್ಳದೇ ಇದ್ರೂ ಕೂಡ ನಿಮಗೆ ದಂಡ ಬೀಳುವುದರಿಂದ ವಿನಾಯಿತಿ ಸಿಗಲಿದೆ. ಹೌದು, ಅದಕ್ಕಾಗಿ ನೀವು ಈ ಮೂರು ಕೆಲಸ ಮಾಡಿದ್ರೆ ಸಾಕು. ಅವುಗಳೆಂದರೆ.

1. ನೀವು ಡೀಲರ್ ಬಳಿ HSRP ನಂಬರ್ ಪ್ಲೇಟ್ ಬದಲಾಯಿಸಿಕೊಳ್ಳುವುದಕ್ಕೆ ಅಪ್ಲಿಕೇಶನ್ ಹಾಕಿದ್ದರೆ ಅವರು ನಿಮಗೆ ಒಂದು ಅಕ್ನಾಲೆಜ್ಮೆಂಟ್ ಕಾಪಿ ಕೂಡ ನೀಡಿರುತ್ತಾರೆ. ಕಾರಣಾಂತರಗಳಿಂದ ನೀವು ಆ ಸಮಯಕ್ಕೆ ಹೋಗಲು ಆಗಿರುವುದಿಲ್ಲ ಅಥವಾ ನಿಮಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ನೀಡಿದ ಸಮಯ ಫೆಬ್ರವರಿ 17ರ ನಂತರ ಇರಬಹುದು. ಹಾಗಾಗಿ, ನಿಮ್ಮ ಬಳಿ ನೀವು ಬಿಲ್ ಪೇ ಮಾಡಿದ ಆಥವಾ ಡೀಲರ್‌ನಿಂದ ಪಡೆದ ಎಕ್ನೋಲೆಜ್ಮೆಂಟ್ ಕಾಪಿ ಇಟ್ಟುಕೊಂಡಿದ್ದರೆ ಸಂಚಾರಿ ಪೊಲೀಸರು ತಡೆದಾಗ ಅದನ್ನೇ ತೋರಿಸಬಹುದು. ಆಗ ನಿಮಗೆ ಯಾವುದೇ ದಂಡ ಬೀಳುವುದಿಲ್ಲ!.

2. ನೀವು ಆನ್‌ಲೈನ್‌ನಲ್ಲಿ ಅಪ್ಲಿಕೇಶನ್ ಹಾಕಿದ್ದರೂ ಕೂಡ ನೀವು ‌HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದಕ್ಕೆ ಪೇಮೆಂಟ್ ಮಾಡಿರುವ ಸ್ಲಿಪ್, ಅಪ್ಲಿಕೇಶನ್ ಸಕ್ಸಸ್ ಆಗಿ ನೀಡಿರುವ ಅಕ್ನೋಲೆಜ್ಮೆಂಟ್ ಇದನ್ನು ತೋರಿಸುವ ಮೂಲಕ ಪಾರಾಗಬಹುದು.

3. ಒಂದು ವೇಳೆ ಯಾವುದೇ ಪ್ರಿಂಟ್ ಔಟ್ ಪಡೆಯಲು ಸಾಧ್ಯವಾಗದಿದ್ದರೂ ಕೂಡ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ನಂಬರ್ ಪ್ಲೇಟ್ ಅಳವಡಿಕೆ ಅಪ್ಲಿಕೇಶನ್ ಹಾಕುವ ಸಮಯದಲ್ಲಿ ನೀವು ಹಾಕಿದ ಅಪ್ಲಿಕೇಶನ್ ಸಕ್ಸಸ್ ಆಗಿರುವ ಸಂದೇಶ ಅಥವಾ OTP ಬಂದಿರುತ್ತದೆ. ಆ ಮೆಸೇಜ್ ತೋರಿಸುವ ಮೂಲಕ ದಂಡ ಬೀಳುವುದರಿಂದ ತಪ್ಪಿಸಿಕೊಳ್ಳಬಹುದು.

ಏನಿದು ಎಚ್ಎಸ್ಆರ್‌ಪಿ ನಂಬರ್‌ ಪ್ಲೇಟ್‌?

ಎಚ್‌ಎಸ್‌ಆರ್‌ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ಈ ಪ್ಲೇಟ್‌ನ ಮೇಲ್ಭಾಗದ ಎಡಬದಿಯಲ್ಲಿ ಅಶೋಕ ಚಕ್ರ ಮುದ್ರೆಯ 20X20 ಮಿ.ಮೀ ಅಳತೆಯ ಕ್ರೋಮಿಯಂ ಹೋಲೋಗ್ರಾಮ್‌ ಇರುತ್ತದೆ. ಇಂಗ್ಲಿಷ್ ಅಕ್ಷರಗಳು ಹಾಗೂ ನಂಬರ್‌ಗಳು ಉಬ್ಬಿಕೊಂಡಿರುವ ರೀತಿ ಅಚ್ಚಾಗಿರುತ್ತವೆ. ಈ ನಂಬರ್‌ ಪ್ಲೇಟ್‌ಗಳನ್ನು ಎರಡು ಲಾಕ್‌ ಪಿನ್‌ಗಳನ್ನು ಬಳಸಿ ಅಳವಡಿಸುತ್ತಾರೆ. ಇದರಿಂದ ಒರಿಜಿನಲ್‌ ಯಾವುದು, ನಕಲಿ ಯಾವುದು ಎಂದು ಸುಲಭವಾಗಿ ಗುರುತಿಸಬಹುದು.

ಎಚ್ಎಸ್ಆರ್‌ಪಿ ಪಡೆಯುವುದು ಹೇಗೆ?

– ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಸೊಸೈಟಿ ಆಫ್‌ ಇಂಡಿಯನ್‌ ಆಟೋಮೊಬೈಲ್‌ ಮ್ಯಾನುಫ್ಯಾಕ್ಚರರ್ಸ್‌ (ಎಸ್‌ಐಎಎಂ) ವೆಬ್‌ಸೈಟ್‌ ಭೇಟಿ ನೀಡಿ ಮತ್ತು Book HSRP ಅನ್ನು ಕ್ಲಿಕ್‌ ಮಾಡಿ.
– ನಿಮ್ಮ ವಾಹನ ತಯಾರಕರನ್ನು ಆಯ್ಕೆ ಮಾಡಿ.
– ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
– HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆ ಮಾಡಿ.

– HSRP ಶುಲ್ಕವನ್ನು ಅನ್‌ಲೈನ್‌ನಲ್ಲಿ ಪಾವತಿಸಿ, ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
– ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ ರವಾನಿಸಲಾಗುವುದು.
– ನಿಮ್ಮ ಅನುಕೂಲಕ್ಕೆ ತಕ್ಕಂತಹ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆ ಮಾಡಿ.
– ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.
– ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆಯನ್ನು ಹೊಂದಬಹುದು.

ಪ್ರಮುಖ ಅಂಶಗಳು

– ಕರ್ನಾಟಕ ಸಾರಿಗೆ ಇಲಾಖೆ ವೆಬ್‌ಸೈಟ್‌ ಅಥವಾ ಎಸ್‌ಐಎಎಂ ವೆಬ್‌ಸೈಟ್‌ ಮೂಲಕ HSRP ಅಳವಡಿಕೆಗೆ ಕಾಯ್ದಿರಿಸಿಕೊಳ್ಳಿ.
– ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹೊಲೊಗ್ರಾಮ್ / IND ಮಾರ್ಕ್ ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP, ಒಂದೇ ರೀತಿಯ ಪ್ಲೇಟ್‌ಗಳು, ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.

– HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು, ನಮೂದು, ರದ್ದತಿ, ಅರ್ಹತಾಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳಿಗೆ ಅನುಮತಿಸುವುದಿಲ್ಲ.
– ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ ಎಚ್‌ಎಸ್‌ಆರ್‌ಪಿ ರಸೀದಿಯನ್ನು ಪ್ರಸ್ತುತಪಡಿಸುವ ವಾಹನಗಳಿಗೆ ಯಾವುದೇ ದಂಡವಿರುವುದಿಲ್ಲ.
– HSRP ಅಳವಡಿಕೆಗೆ ನವೆಂಬರ್‌ 17 ಆಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ.

ಎಚ್‌ಎಸ್‌ಆರ್‌ಪಿ ಯಾಕೆ ಮತ್ತು ವಿಶೇಷತೆ ಏನು?

-HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ.
– ನಂಬರ್‌ ಪ್ಲೇಟ್‌ನ ಒಂದು ಬದಿಯಲ್ಲಿ ನೀಲಿ ಬಣ್ಣದ ಚಕ್ರವನ್ನು ಹೋಲುವ ಹಾಲೋಗ್ರಾಮ್‌ ಇರುತ್ತದೆ. ಇದರ ಕೆಳಗಡೆ 10 ನಂಬರಿನ ವಿಶಿಷ್ಟ ಗುರುತಿನ ಸಂಖ್ಯೆ ಇರುತ್ತದೆ. ಅಂಕಿಗಳ ಮೇಲೆ ಆಂಗ್ಲಭಾಷೆಯಲ್ಲಿ ‘ಇಂಡಿಯಾ’ ಎಂಬ ಪದ ಹಲವೆಡೆ ಇರುತ್ತದೆ.
– ಸುರಕ್ಷಿತ ನಂಬರ್‌ ಪ್ಲೇಟ್‌ನಲ್ಲಿ ನಂಬರ್‌ ಪ್ಲೇಟ್‌ ನಕಲು ಮಾಡುವುದು ಸಾಧ್ಯವಿಲ್ಲ.

– ವಾಹನಗಳ ಕಳವು, ಅವುಗಳನ್ನು ಬಳಸಿ ಅಪರಾಧ ಚಟುವಟಿಕೆ ಮಾಡಿದಾಗ ಪರಿಶೀಲಿಸಲು ಎಚ್‌ಎಸ್‌ಆರ್‌ಪಿ ಸಹಕಾರಿಯಾಗಲಿದೆ.
– ರಸ್ತೆಗಳಲ್ಲಿ ಸಂಚರಿಸುವ ಎಲ್ಲ ವಾಹನಗಳನ್ನು ಗುರುತಿಸಲು ಸಹಕಾರಿ.
ನೋಂದಣಿ ಫಲಕಗಳಲ್ಲಿ ಏಕರೂಪತೆ ಖಚಿತಪಡಿಸಿಕೊಳ್ಳಲು ಸಹಾಯ ಮಾಡುತ್ತವೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment