Job ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ.! 10th ಪಾಸ್ ಆದವರು ಅರ್ಜಿ ಹಾಕಿ.!

Job

ರಾಜ್ಯದಾದ್ಯಂತ ಇರುವ ಎಲ್ಲಾ ಮಹಿಳಾ ಉದ್ಯೋಗಾಸಕ್ತ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಸಿಹಿ ಸುದ್ದಿ ಇದೆ. ಅದೇನೆಂದರೆ, ರಾಜ್ಯದ ಹಲವು ಜಿಲ್ಲೆಗಳ ವಿವಿಧ ಗ್ರಾಮಗಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇವೆ.

ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಆ ಪ್ರಕಾರವಾಗಿ ಸದ್ಯಕ್ಕೀಗ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ, ಇದರ ವಿವರ ಇಂತಿದೆ ನೋಡಿ.

WhatsApp Group Join Now
Telegram Group Join Now
ನೇಮಕಾತಿ ಸಂಸ್ಥೆ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಹುದ್ದೆ ಹೆಸರು:-
* ಅಂಗನವಾಡಿ ಕಾರ್ಯಕರ್ತೆಯರು
* ಅಂಗನವಾಡಿ ಸಹಾಯಕಿಯರು

ಹುದ್ದೆಗಳ ವಿವರ:-
1. ಬಾಗಲಕೋಟೆ ಜಿಲ್ಲೆ:-
* ಅಂಗನವಾಡಿ ಕಾರ್ಯಕರ್ತೆ – 106
* ಅಂಗನವಾಡಿ ಸಹಾಯಕಿ – 471
* ಒಟ್ಟು ಹುದ್ದೆಗಳು – 577

2. ವಿಜಯಪುರ ಜಿಲ್ಲೆ
* ಅಂಗನವಾಡಿ ಕಾರ್ಯಕರ್ತೆ – 42
* ಅಂಗನವಾಡಿ ಸಹಾಯಕಿ – 105
* ಒಟ್ಟು ಹುದ್ದೆಗಳು – 147

ವೇತನ ಶ್ರೇಣಿ:- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಗೌರವ ಸಂಭಾವನೆ ನೀಡಲಾಗುತ್ತದೆ

ಶೈಕ್ಷಣಿಕ ವಿದ್ಯಾರ್ಹತೆ:-

* ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗಳಿಗೆ ದ್ವಿತೀಯ PUC ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು
* ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ SSLC ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ವಯೋಮಿತಿ:-
* ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು

ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* SC / ST, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ 5 ವರ್ಷಗಳು
* ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಇನ್ನಿತರೆ ಪ್ರಮುಖ ಕಂಡಿಷನ್ ಗಳು:-

* ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ
* D.ed & ಮಾಂಟೇಸ್ಸರಿ ವಿದ್ಯಾರ್ಹತೆ ಹೊಂದಿದವರಿಗೆ ಕೂಡ ಆದ್ಯತೆ ಇರುತ್ತದೆ
* ಅಂಗವಿಕಲ ಅಭ್ಯರ್ಥಿಗಳು / ವಿಧವೆಯರು / ವಿಚ್ಛೇದಿತ ಮಹಿಳೆ / ಆಸಿಡ್ ದಾಳಿಗೆ ಒಳಗಾದವರು ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿ ಇತ್ಯಾದಿ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ

ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತ ಅಭ್ಯರ್ಥಿಗಳು ನೇರವಾಗಿ https://karnemakaone.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ
* ಅರ್ಜಿ ಲಿಂಕ್ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಿ
* ಪೂರಕ ದಾಖಲೆಗಳನ್ನು ಸಲ್ಲಿಸಿ ಸಬ್ಮಿಟ್ ಮಾಡಿ

ಆಯ್ಕೆ ವಿಧಾನ:-
* ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಮೆರಿಟ್ ಲಿಸ್ಟ್ ಆದರಿಸಿ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ

ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 15.10.2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 09.11.2024

ಬೇಕಾಗುವ ದಾಖಲೆಗಳು:-

* ಅಭ್ಯರ್ಥಿಯ ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ * * SSLC / PUC ಅಂಕಪಟ್ಟಿ.
* ವಾಸಸ್ಥಳ ದೃಢೀಕರಣ ಪತ್ರ.
* ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
* ವಿಕಲಚೇತನರಾಗಿದ್ದಲ್ಲಿ ಪ್ರಮಾಣ ಪತ್ರ
* ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
* ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
* ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
* ಇತರೆ ಅಗತ್ಯ ಮತ್ತು ಸಂಬಂಧಿತ ದಾಖಲೆಗಳು

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment