Agriculture
ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಉದ್ಯೋಗಾಸಕ್ತರಿಗೆ ಕರ್ನಾಟಕ ಕೃಷಿ ಇಲಾಖೆ ಕಡೆಯಿಂದ ಒಂದು ಗುಡ್ ನ್ಯೂಸ್ ಇದೆ. 2008ರ ಬಳಿಕ ಹಾಗೂ ಇದೇ ಮೊದಲ ಬಾರಿಗೆ ಕೃಷಿ ಇಲಾಖೆಯಲ್ಲಿ (Department of Agriculture) ದೊಡ್ಡ ಮಟ್ಟದ ನೇಮಕಾತಿ (Recruitment) ನಡೆಯುತ್ತಿದೆ.
ಕೃಷಿ ಸಚಿವರಾಗಿ ಕಳೆದ ವರ್ಷ ಅಧಿಕಾರ ಸ್ವೀಕರಿಸುವಾಗಲೇ ಇಲಾಖೆಯಲ್ಲಿ 60%ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇರುವ ಪರಿಸ್ಥಿತಿಯನ್ನು ಅರಿತ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ರವರು ಮುಖ್ಯಮಂತ್ರಿಗಳ ಮನವೊಲಿಸಿ ಆರ್ಥಿಕ ಇಲಾಖೆಯ ಅನುಮೋದನೆ ಪಡೆದು KPSC ಗೆ ಪ್ರಸ್ತಾವನೆ ಕಳುಹಿಸಿದ್ದರು.
ಈ ಪ್ರಯತ್ನದ ಫಲವಾಗಿ 945 ಗ್ರೂಪಿ ಬಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು? ಮನದಂಡಗಳೇನು? ಅರ್ಜಿ ಸಲ್ಲಿಸುವುದು ಹೇಗೆ? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ? ಕೊನೆ ದಿನಾಂಕ ಎಂದು ಇತ್ಯಾದಿ ವಿವರ ಹೀಗಿದೆ ನೋಡಿ.!
ಈ ಸುದ್ದಿ ಓದಿ:- Ration Card: ಇನ್ಮುಂದೆ ಮನೆಯಲ್ಲೇ ಕುಳಿತು ರೇಷನ್ ಕಾರ್ಡ್ ಪಡೆಯಬಹುದು.!
ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಸಂಸ್ಥೆ:- ಕರ್ನಾಟಕ ಕೃಷಿ ಇಲಾಖೆ
ಹುದ್ದೆ ಹೆಸರು:- ಗ್ರೂಪ್ ಬಿ ವರ್ಗದ ಹುದ್ದೆಗಳು (Group B)
* ಕೃಷಿ ಅಧಿಕಾರಿ
* ಸಹಾಯಕ ಕೃಷಿ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ:- 945 ಹುದ್ದೆಗಳು
ಹುದ್ದೆಗಳ ವಿವರ:-
1. ಉಳಿಕೆ ಮೂಲ ಮೂಲವೃಂದ
* ಕೃಷಿ ಅಧಿಕಾರಿ – 86
* ಸಹಾಯಕ ಕೃಷಿ ಅಧಿಕಾರಿ – 586
2. ಹೈದರಾಬಾದ್ ಕರ್ನಾಟಕ
* ಕೃಷಿ ಅಧಿಕಾರಿ – 42
* ಸಹಾಯಕ ಕೃಷಿ ಅಧಿಕಾರಿ – 231
ಉದ್ಯೋಗ ಸ್ಥಳ:- ಕರ್ನಾಟಕ
ವೇತನ ಶ್ರೇಣಿ:-
* ಕೃಷಿ ಅಧಿಕಾರಿ – ರೂ.43,100 ರಿಂದ ರೂ.83,900
* ಸಹಾಯಕ ಕೃಷಿ ಅಧಿಕಾರಿ – ರೂ.40,900 ರಿಂದ ರೂ.78,200
ಶೈಕ್ಷಣಿಕ ವಿದ್ಯಾರ್ಹತೆ:-
* B.tech (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ, ಅಗ್ರಿಕಲ್ಚರಲ್ ಎಂಜಿನಿಯರಿಂಗ್, ಜೈವಿಕ ತಂತ್ರಜ್ಞಾನ)
* B.Sc (ಆಹಾರ ತಂತ್ರಜ್ಞಾನ, ಕೃಷಿ ಮಾರುಕಟ್ಟೆ ಮತ್ತು ಸಹಕಾರ,
ಕೃಷಿ ಜೈವಿಕ ತಂತ್ರಜ್ಞಾನ, ಅಗ್ರಿಕಲ್ಚರಲ್ ಎಂಜಿನಿಯರಿಂಗ್
* B.Sc Hons (ಕೃಷಿ ಮಾರಾಟ ಮತ್ತು ಸಹಕಾರ, ಅಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್)
ಈ ಸುದ್ದಿ ಓದಿ:- Home ವಸತಿ ಭಾಗ್ಯ ಯೋಜನೆ ಮೂಲಕ ಮನೆ ಇಲ್ಲದವರಿಗೆ ಮನೆ ಭಾಗ್ಯ.!
ವಯೋಮಿತಿ:-
* ಅರ್ಜಿ ಸಲ್ಲಿಸಲು ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ ಕನಿಷ್ಠ ವಯೋಮಿತಿ 18 ವರ್ಷಗಳು
* ರಾಜ್ಯ ಸರ್ಕಾರವು ಸೆಪ್ಟೆಂಬರ್ 10 ರಂದು ಜಾರಿ ಮಾಡಿರುವ ಆದೇಶದಲ್ಲಿ ಎಲ್ಲಾ ಪ್ರವರ್ಗಗಳಿಗೆ ಒಂದು ಬಾರಿಗೆ ಅನ್ವಯಿಸುವಂತೆ ವಯೋಮಿತಿಯಲ್ಲಿ 03 ವರ್ಷಗಳ ಸಡಿಲಿಕೆ ನೀಡಿರುತ್ತದೆ. ಆ ಪ್ರಕಾರವಾಗಿ ಗರಿಷ್ಠ ವಯೋಮಿತಿ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 38 ವರ್ಷಗಳು
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ 41 ವರ್ಷ
* ಪ.ಜಾ, ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ 43 ವರ್ಷ
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ನಲ್ಲಿ KPSC website ವೆಬ್ಸೈಟ್ಗೆ ಭೇಟಿ ನೀಡಿ ಕೃಷಿ ಇಲಾಖೆಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಶುಲ್ಕ:-
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600
* ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳಿಗೆ ರೂ.300
* ಪ.ಜಾ, ಪ.ಪಂ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
ಈ ಸುದ್ದಿ ಓದಿ:- Subadra Yojana: ಸುಭದ್ರ ಯೋಜನೆ ಎಲ್ಲಾ ಮಹಿಳೆಯರಿಗೆ ಸರ್ಕಾರದಿಂದ 10,000 ಸಿಗಲಿದೆ.!
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ನೇರ ಸಂದರ್ಶನ
* ದಾಖಲೆಗಳ ಪರಿಶೀಲನೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 07-10-2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 07-11-2024