Anganawadi Recruitment
10ನೇ ಕ್ಲಾಸ್ ಪಾಸ್ ಆದ ಯುವತಿ ಅಥವಾ ಮಹಿಳೆಯರಿಗೆ(womens) ಗುಡ್ ನ್ಯೂಸ್. ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿ ಪ್ರಕ್ರಿಯೆ (Anganwadi Recruitment) ನಡೆಯುತ್ತಿದೆ. ಈಗಾಗಲೇ ಹಾಸನ, ದಾವಣಗೆರೆ, ಬಳ್ಳಾರಿ ಸೇರಿ ಹಲವು ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು,
ಅಂಗನವಾಡಿ ಕಾರ್ಯಕರ್ತರು (Anganwadi workers) ಹಾಗೂ ಅಂಗನವಾಡಿ ಸಹಾಯಕಿಯರ (Anganwadi helpers) ಹುದ್ದೆಗಳ ನೇಮಕ ಪ್ರಕ್ರಿಯೆ (Recruitment process of posts) ಮುಗಿದಿದೆ. ಇದೀಗ ಮತ್ತಷ್ಟು ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
461 ಹುದ್ದೆಗಳ ಭರ್ತಿಗೆ ಅರ್ಜಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ (Koppal District Anganwadi Recruitment 2024) 5 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪಾಸಾದ ಅರ್ಹ ಮಹಿಳಾ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ, ಯಲಬುರ್ಗಾ, ಕನಕಗಿರಿ, ಕುಷ್ಟಗಿ ಹಾಗೂ ಕೊಪ್ಪಳ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿನ ಅಂಗನವಾಡಿಗಳ ಒಟ್ಟು 461 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ನೇಮಕಾತಿ ಸಂಕ್ಷಿಪ್ತ ವಿವರ
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಮಹಿಳಾ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸರಿಯಾದ ಇ ಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ನೀಡಿ. ಗುರುತಿನ ಚೀಟಿ, ವಿದ್ಯಾರ್ಹತೆ, ವಯಸ್ಸು, ಸ್ವವಿವರ ಇನ್ನಿತರ ಅಗತ್ಯ ಮಾಹಿತಿಗಳಿಗೆ ಸಂಬ೦ಧಿಸಿದ೦ತೆ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿರಬೇಕು.
ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಗಳನ್ನು ಇತ್ತೀಚಿನ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸುವ ವೇಳೆ ಅಪ್‌ಲೋಡ್ ಮಾಡಬೇಕು. ನಿಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಬಹುದು.
– ನೇಮಕಾತಿ ಇಲಾಖೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ
– ಹುದ್ದೆಗಳ ಹೆಸರು : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರು
– ಒಟ್ಟು ಹುದ್ದೆಗಳ ಸಂಖ್ಯೆ : 374+87=461
– ಅರ್ಜಿ ಸಲ್ಲಿಕೆ : ಆನ್‌ಲೈನ್ ಮುಖಾಂತರ
– ಉದ್ಯೋಗ ಸ್ಥಳ : ಕೊಪ್ಪಳ ಜಿಲ್ಲೆ
ವಯೋಮಿತಿ, ವೇತನದ ವಿವರ
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಮತ್ತು ಗರಿಷ್ಠ 35 ವರ್ಷ ವಯಸ್ಸಾಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಕೆ ಇದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ನೇಮಕವಾಗುವ ಮಹಿಳೆಯರಿಗೆ ಇಲಾಖೆಯ ನಿಯಮಾನುಸಾರ ಗೌರವಧನ ನಿಗದಿಪಡಿಸಲಾಗಿದೆ.
ವಿದ್ಯಾರ್ಹತೆ ಏನಿರಬೇಕು?
ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಪಿಯುಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಮಹಿಳೆಯರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಿರ್ಣರಾಗಿರಬೇಕು. ಮೆರಿಟ್ ಪಟ್ಟಿಯ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ಅರ್ಹ ಮಹಿಳಾ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ಇವರನ್ನು ಸಂಪರ್ಕಿಸಿ
– ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಎಲ್.ಐ.ಸಿ ಆಫೀಸ್, ಹತ್ತಿರ ಹೊಸಳ್ಳಿ ರಸ್ತೆ, ಗಂಗಾವತಿ
– ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ನವಲಿ ರಸ್ತೆ, ಕನಕಗಿರಿ
– ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಕಿನ್ನಾಳ ರಸ್ತೆ ಕಿಲ್ಲೇದಾರ ಪೆಟ್ರೋಲ್ ಬಂಕ್ ಹತ್ತಿರ ಮುದಗರ್ಲ ಕಟ್ಟಡ ಕೊಪ್ಪಳ
– ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಕೃಷ್ಣಗಿರಿ ಕಾಲೊನಿ, ವಾರ್ಡ್ ನಂ.1 ಕುಷ್ಟಗಿ
– ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಮುಧೋಳ ರಸ್ತೆ, ಯಲಬುರ್ಗಾ
ಹೆಚ್ಚಿನ ಮಾಹಿತಿಗೆ ಮೇಲ್ಕಾಣಿಸಿದ ಕಚೇರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಸಲಿಕೆಯ ಕೊನೆಯ ದಿನಾಂಕ : 23-10-2024
ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್ : https://karnemakaone.kar.nic.in/abcd/