Anganawadi Recruitment: SSLC ಪಾಸಾದವರಿಗೆ ಅಂಗನವಾಡಿಯಲ್ಲಿ ಉದ್ಯೋಗಾವಕಾಶ.!

Anganawadi Recruitment

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು (Department of women and child development) ರಾಜ್ಯದ ವಿವಿಧ ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರ(Anganwadi center under District Child Development Plan)ಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ (Anganwadi Worker), ಮಿನಿ ಕಾರ್ಯಕರ್ತೆ (Mini Anganwadi Worker) ಹಾಗೂ ಸಹಾಯಕಿ (Anganwadi Helper) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸುತ್ತಿದೆ.

ಆಸಕ್ತ ಅಭ್ಯರ್ಥಿಗಳು(Interested candidates) ಕೊನೆವರೆಗೂ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ನೀವು ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಬಗ್ಗೆ ಓದಿ ಅರ್ಜಿ ಸಲ್ಲಿಸಿ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಮುಗಿದಿದ್ದು, ಇದೀಗ ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಅಂಗನವಾಡಿ ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆದಿದೆ.

WhatsApp Group Join Now
Telegram Group Join Now

ಈ ಜಿಲ್ಲೆಗಳಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಕನಿಷ್ಠ 19 ವರ್ಷದೊಳಗಿನ ಮಹಿಳಾ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿ ನಡೆಯಲಿದ್ದು; ಜಿಲ್ಲಾವಾರು ಹುದ್ದೆಗಳ ವಿವರ ಈ ಕೆಳಗಿನಂತಿದೆ.

– ಚಿಕ್ಕಮಗಳೂರು : 267
– ಚಿಕ್ಕಬಳ್ಳಾಪುರ : 285
– ಒಟ್ಟು ಹುದ್ದೆಗಳು : 552

ವಿದ್ಯಾರ್ಹತೆ ಎಷ್ಟಿರಬೇಕು?

ಮೊದಲೇ ಹೇಳಿದಂತೆ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕನ್ನಡವನ್ನು ಕಲಿತಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ, ವೇತನ ವಿವರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷದಿಂದ ಗರಿಷ್ಠ 35 ವರ್ಷದೊಳಗಿರಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನಿಯಮಾನುಸಾರ ಗೌರವ ಧನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಹೇಗೆ?

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ https://karnemakaone.kar.nic.in/abcd/ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯ ವೇಳೆ ಸಂಬಂಧಿಸಿದ ಎಲ್ಲ ದಾಖಲಾತಿಗಳನ್ನು ಅಪಲೋಡ್ ಮಾಡಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗೆ ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ

– ಚಿಕ್ಕಮಗಳೂರು ಜಿಲ್ಲೆ : 12-10-2024
– ಚಿಕ್ಕಬಳ್ಳಾಪುರ ಜಿಲ್ಲೆ : 19-10-2024

ಅರ್ಜಿ ಸಲ್ಲಿಕೆ ಲಿಂಕ್: https://karnemakaone.kar.nic.in/abcd/

ಅಪ್ಲಿಕೇಶನ್‌ ಸಲ್ಲಿಸಲು ಜನನ ಪ್ರಮಾಣ ಪತ್ರ ಅಥವಾ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಮೀಸಲಾತಿ ಕೋರುವ ದಾಖಲೆಗಳು ಅಗತ್ಯವಾಗಿ ಬೇಕು.

ಅಪ್ಲಿಕೇಶನ್‌ ಸಲ್ಲಿಸುವ ವೇಳೆ ಲಗತ್ತಿಸಬೇಕಾದ ದಾಖಲೆಗಳು

1. ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ.
2. ವಾಸಸ್ಥಳ ದೃಢೀಕರಣ ಪತ್ರ.
3. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
4. ಅಂಗನವಾಡಿ ಕಾರ್ಯಕರ್ತೆ ನೇಮಕಾತಿಗಳಲ್ಲಿ ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
5. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
6. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
7. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
8. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
9. ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
10. ಅಂಗವಿಕಲರಾಗಿದ್ದಲ್ಲಿ ಪ್ರಮಾಣ ಪತ್ರ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment