Anganwadi Teacher
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ(Department of Women and Child Development)ಯಿಂದ ಹಾಸನ ಜಿಲ್ಲೆ(Hassan District)ಯ ಅಂಗನವಾಡಿ ಕೇಂದ್ರ(Anganwadi Centre)ಗಳಲ್ಲಿ ಅಗತ್ಯವಿರುವ ಅಂಗನವಾಡಿ ಕಾರ್ಯಕರ್ತೆ(Anganwadi worker) ಹಾಗೂ ಸಹಾಯಕಿ ಹುದ್ದೆ(Assistant post)ಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ(Application)ಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಈ ಸುದ್ದಿ ಓದಿ:- Pan Card: ಇನ್ಮುಂದೆ ಮಕ್ಕಳಿಗೂ ಪ್ಯಾನ್ ಕಾರ್ಡ್ ಕಡ್ಡಾಯ.!
– ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು
– ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 734 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅಂದ್ರೆ,
– ಅಂಗನವಾಡಿ ಕಾರ್ಯಕರ್ತೆಯರು- 168
– ಅಂಗನವಾಡಿ ಸಹಾಯಕಿಯರು – 566
ಕರ್ತವ್ಯ ಸ್ಥಳ : ಹಾಸನ ಜಿಲ್ಲೆಯಲ್ಲಿ ಹಾಸನ, ಚನ್ನರಾಯಪಟ್ಟಣ, ಹೊಳೆನರಸೀಪುರ, ಬೇಲೂರು, ಸಕಲೇಶಪುರ, ಆಲೂರು, ಅರಸೀಕೆರೆ, ಅರಕಲಗೂಡು ತಾಲೂಕಿನಲ್ಲಿ ಹುದ್ದೆಗಳು ಖಾಲಿ ಇದೆ.
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ
– ಅಂಗನವಾಡಿ ಕಾರ್ಯಕರ್ತೆ – ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
– ಅಂಗನವಾಡಿ ಸಹಾಯಕಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ : ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ವಿಧಾನ
ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದ ಅಂಕ ಮತ್ತು ಬೋನಸ್ ಅಂಕಗಳನ್ನು ಒಳಗೊಂಡಂತೆ ಪಡೆದ ಒಟ್ಟು ಅಂಕಗಳಿಗನುಸಾರವಾಗಿ ಕ್ರೂಡೀಕೃತ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹತೆ ಮತ್ತು ಮೆರಿಟ್ ಗೆ ಅನುಸಾರವಾಗಿ ಪರಿಶೀಲಿಸಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
https://karnemakaone.kar.nic.in/abcd
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಆನ್‌ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
• ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
• ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
• ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
• ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
• ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
• ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
• ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ
– ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 08, 2024
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 04, 2024