Annabhagya Yojana: ಪಡಿತರ ಫಲಾನುಭವಿಗಳಿಗೆ ಬಿಗ್‌ ಶಾಕ್ ಇನ್ಮುಂದೆ ನಿಮಗೆ 5 ಕೆಜಿ ಅಕ್ಕಿ ಹಣ ಸಿಗಲ್ಲ.!

Anna Bhagya

ಕರ್ನಾಟಕ ಕಾಂಗ್ರೆಸ್ ಸರ್ಕಾರ (Karnataka Congress Govt)ದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆ (Annabhagya Yojana)ಯಡಿ 10 ಕೆ.ಜಿ. ಅಕ್ಕಿ(rice) ಪೈಕಿ 05 ಕೆ.ಜಿ ಅಕ್ಕಿಗೆ ಬದಲಾಗಿ ನಗದು (money) ನೀಡಲಾಗುತ್ತಿತ್ತು. ಆದರೆ, ಮುಂದಿನ ದಿನಗಳಲ್ಲಿ ಜನರ ಇಷ್ಟದಂತೆ ದವಸ ಧಾನ್ಯಗಳು(Cereal grains), ಇಲ್ಲವೇ ಅಡುಗೆ ಎಣ್ಣೆ(cooking oil) ನೀಡಲು ರಾಜ್ಯ ಸರ್ಕಾರ (State Govt) ಚಿಂತನೆ ನಡೆಸಿದೆ.

ಈ ಸುದ್ದಿ ಓದಿ:-Railway Jobs : ಭಾರತೀಯ ರೈಲ್ವೆ ಇಲಾಖೆಯಲ್ಲಿ 11,250 ಟಿಕೆಟ್ ಕಲೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಈ ಕುರಿತು ಅಂತಿಮ ಹಂತದ ತಿರ್ಮಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಜೊತೆಗೆ ಚರ್ಚಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌.ಮುನಿಯಪ್ಪ (KH Muniappa) ತಿಳಿಸಿದ್ದಾರೆ.

WhatsApp Group Join Now
Telegram Group Join Now

ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ(Annabhagya Yojana)ಯು ಒಂದು. ಇದು ಬಡವರಿಗೆ ಹತ್ತು ಅಕ್ಕಿಯನ್ನು ಈ ಗ್ಯಾರೆಂಟಿಯಡಿ ನೀಡುವುದಾಗಿ ಘೋಷಿಸಿದ್ದ ರಾಜ್ಯ ಸರ್ಕಾರವು ಐದು ಕೆ.ಜಿ. ಅಕ್ಕಿಯನ್ನು ನೀಡುತ್ತಿದೆ. ಉಳಿದ ಐದು ಕೆ.ಜಿ. ಅಕ್ಕಿಯ ಬದಲಾಗಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ನಗದು ಹಣ ಹಾಕುತ್ತಿತ್ತು.

ಶೀಘ್ರವೇ ನಿರ್ಧಾರ ಪ್ರಕಟ ಸಾಧ್ಯತೆ

ಆದರೆ, ಫಲಾನುಭವಿಗಳು ನಗದು ಹಣದ ಬದಲಾಗಿ ದವಸ ಧಾನ್ಯಗಳು ಇಲ್ಲವೇ ಅಡುಗೆ ಎಣ್ಣೆಯನ್ನು ಪಡೆಯಲು ಆಸಕ್ತಿ ಹೊಂದಿದ್ದಾರೆ. ಈ ಕುರಿತು ಸಚಿವರೇ ಅಧಿಕೃತ ಮಾಹಿತಿ ನೀಡಿದ್ದಾರೆ. ಫಲಾನುಭವಿಗಳ ಇಷ್ಟದಂತೆ ಅಡುಗೆ ಎಣ್ಣೆ, ಧಾನ್ಯ, ಬೇಳೆ ಕಾಲುಗಳು, ಸಕ್ಕರೆ ಇಲ್ಲವೇ ಇನ್ನಿತರ ದಿನಸಿ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಶೀಘ್ರವೇ ಚರ್ಚಿಸಿ ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಇದು ಸಾಧ್ಯವಾದರೆ ಮುಂದಿನ ದಿನಗಳಲ್ಲಿ ಐದು ಕೆಜಿಗೆ ಅಕ್ಕಿ ಬದಲಾಗಿ ನಗದು ಪಡೆಯುತ್ತಿರುವ ಬಡತನ ರೇಖೆಗಿಂತ ಕೆಳಗಿನ ಪಡಿತರ ಚೀಟಿ ಹೊಂದಿರುವ ಅರ್ಹ ಫಲಾನುಭವಿಗಳಿಗೆ ಹಣಕ್ಕೆ ಬದಲಾಗಿ ಅಡುಗೆ ಎಣ್ಣೆ, ಬೇಳೆಕಾಳುಗಳು, ಸಕ್ಕರೆ ಸಿಗಲಿದೆ. ಸದ್ಯ ನಗದು ಪಡೆಯುತ್ತಿರುವ ಶೇಕಡಾ 90ಕ್ಕೂ ಅಧಿಕ ಪಡಿತರು ಹಣಕ್ಕೆ ಬದಲಾಗಿ ಈ ಮೇಲಿನ ವಸ್ತುಗಳನ್ನೇ ಸ್ವೀಕರಿಸಲು ಬಯಸುತ್ತಿದ್ದಾರೆ ಎಂದು ಸಮೀಕ್ಷೆಯೊಂದು ಸರ್ಕಾರಕ್ಕೆ ಇಲಾಖೆಗೆ ಮಾಹಿತಿ ನೀಡಿದೆ.

ಈ ಸುದ್ದಿ ಓದಿ:-Indian Oil: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ‌.!

ಹೌದು, ನಾವು ರಾಜ್ಯದಲ್ಲಿ ಸರ್ವೇ ಮಾಡಿರುವ ಪ್ರಕಾರ ಗ್ರಾಹಕರು ಐದು ಕೆಜಿ ಅಕ್ಕಿ ಜೊತೆಗೆ ಬೇಳೆ, ಎಣ್ಣೆ ,ಸಕ್ಕರೆ ಮುಂತಾದ ಆಹಾರ ಸಾಮಗ್ರಿಗಳನ್ನು (ಪದಾರ್ಥಗಳನ್ನು) ಕೊಟ್ಟರೆ ಅನುಕೂಲವಾಗುತ್ತದೆ ಎಂದು ರಾಜ್ಯದ 93 ಪರ್ಸೆಂಟ್‌ ಜನ ಅಭಿಪ್ರಾಯಪಟ್ಟಿದ್ದಾರೆ. ನಾನು ಇದನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಉಪ ಮುಖ್ಯಮಂತ್ರಿ ,ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಜೊತೆ ಚರ್ಚಿಸಿ ಯಾವ ರೀತಿ ಮಾಡಬೇಕು ಅನ್ನೋದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಕರ್ನಾಟಕದಲ್ಲಿ 13 ಲಕ್ಷ ಬಿಪಿಎಲ್ ಪಡಿತರ ಕಾರ್ಡುಗಳನ್ನು ಹೊಂದಿದ್ದು ಅಂದರೆ 40 ರಿಂದ 50 ಲಕ್ಷ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಅಕ್ಕಿಯನ್ನು ಕೊಡುತ್ತಿದ್ದೆ. ಅದಕ್ಕೆ ನಾವು ಕೇಂದ್ರ ಸ್ವಾಮ್ಯದ ಕೇಂದ್ರೀಯ ಭಂಡಾರ ಎನ್.ಸಿ.ಸಿ.ಎಫ್ ಅವರ ಮುಖಾಂತರ ಅಕ್ಕಿಯನ್ನು ಖರೀದಿ ಮಾಡುತ್ತಿದ್ದೇವೆ. ಈಗ ಅದು ಕೇಂದ್ರ ಸರ್ಕಾರ ಮುಂದೆ ಬಂದಿದ್ದು, 28 ರೂಪಾಯಿಗೆ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದಾರೆ.

ಕೇಂದ್ರಕ್ಕೆ ಅಕ್ಕಿ ಪೂರೈಸುವಂತೆ ಸಚಿವರ ಮನವಿ

ಇದೇ ವಿಚಾರವಾಗಿ ರಾಜ್ಯ ಸಚಿವ ಎಚ್‌ ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಭೇಟಿ ಮಾಡಿದ್ದಾರೆ. ಅಲ್ಲಿ ಅಗತ್ಯ ಅಕ್ಕಿಯನ್ನು ರಾಜ್ಯಕ್ಕೆ ಒದಗಿಸುವಂತೆ ಅವರು ಮನವಿ ಮಾಡಿದ್ದಾರೆ. ಇದಕ್ಕೆ ಪ್ರಹ್ಲಾದ್ ಜೋಶಿಯವರು ಅಕ್ಕಿ ವಿತರಿಸುವ ಕುರಿತು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಕೇಂದ್ರ ಬಿಜೆಪಿ ಸರ್ಕಾರ ಈಗಾಗಲೇ ಪಿಎಂ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಅರ್ಹರಿಗೆ ತಲಾ ಐದು ಕೆಜಿ ಅಕ್ಕಿ ನೀಡುತ್ತಿದೆ. ಇದೇ ವೇಳೆ ರಾಜ್ಯ ಸರ್ಕಾರವು ಐದು ಕೆ.ಜಿ. ಅಕ್ಕಿ, ಇಲ್ಲವೇ ದವಸ ಧಾನ್ಯ ನೀಡಿದರೆ ಫಲಾನುಭವಿಗಳಿಗೆ ಇನ್ನಷ್ಟು ಅನುಕೂಲವಾಗಲಿದೆ ಸಂಗತಿಯನ್ನು ಮುನಿಯಪ್ಪ ತಿಳಿಸಿದರು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment