Army
ಭಾರತದ ಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೀರ ಸೈನಿಕರು ಹಾಗೂ ಇತರೆ ಆರ್ಮಿ ಸಿಬ್ಬಂದಿ ಗಳ ಮಕ್ಕಳಿಗೆ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಭಾರತದಾದ್ಯಂತ ಹಲವು ಕಡೆಗಳಲ್ಲಿ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯಿಂದ (Army Welfare Education Society) ಆರ್ಮಿ ಶಾಲೆಗಳನ್ನು ತೆರೆಯಲಾಗಿದೆ.
ಹೀಗೆ ಸ್ಥಾಪಿಸಲ್ಪಟ್ಟಿರುವ ಈ ಶಿಕ್ಷಣ ಸಂಸ್ಥೆಯಲ್ಲಿ ( Army School Teachers recruitment) ಪ್ರತಿವರ್ಷವು ತೆರವಾಗುವ ಸಾವಿರಾರು ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೂಡ ನಡೆಯುತ್ತದೆ. ಅಂತೆಯೇ 2024-25 ನೇ ಸಾಲಿನಲ್ಲಿ ಸುಮಾರು 8,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು ಈ ಸಂಬಂಧ ಅಧಿಕೃತ ಅಧಿಸೂಚನೆ ಕೂಡ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸುವವರಿಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ಈ ಅಂಕಣದಲ್ಲಿ ಹುದ್ದೆಗಳ ಕುರಿತ ಪ್ರಮುಖ ಸಂಗತಿಗಳ ಬಗ್ಗೆ ಮಾಹಿತಿ ತಿಳಿಸುತ್ತಿದ್ದೇವೆ, ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ಈ ಸುದ್ದಿ ಓದಿ:- Teacher 2,439 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ.! SSLC, PUC ಆದವರು ಅರ್ಜಿ ಹಾಕಿ.!
ನೇಮಕಾತಿ ಸಂಸ್ಥೆ:- ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿ (AWES)
ಹುದ್ದೆ ಹೆಸರು:- ಟೀಚರ್ಸ್ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 8000+
ಹುದ್ದೆಗಳ ವಿವರ:-
* ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGT)
* ಟ್ರೈನ್ ಡ್ ಗ್ರಾಜುಯೇಟ್ ಟೀಚರ್ಸ್ (TGT)
* ಪ್ರೈಮರಿ ಟೀಚರ್ಸ್ (PRT)
ಉದ್ಯೋಗ ಸ್ಥಳ:- ಭಾರತದಾದ್ಯಂತ ವಿವಿಧ ಭಾಗಗಳಲ್ಲಿ ಇರುವ ಆರ್ಮಿ ಶಾಲೆಗಳಲ್ಲಿ
ಶೈಕ್ಷಣಿಕ ವಿದ್ಯಾರ್ಹತೆ:-
* ಪೋಸ್ಟ್ ಗ್ರಾಜುಯೇಟ್ ಟೀಚರ್ಸ್ (PGT) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.ed ಜೊತೆಗೆ ಸಂಬಂಧಪಟ್ಟ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಉತ್ತೀರ್ಣರಾಗಿರಬೇಕು
* ಟ್ರೈನ್ ಡ್ ಗ್ರಾಜುಯೇಟ್ ಟೀಚರ್ಸ್ (TGT) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು B.ed ಜೊತೆಗೆ ಸಂಬಂಧಪಟ್ಟ ವಿಷಯದಲ್ಲಿ ಪದವಿ ಉತ್ತೀರ್ಣರಾಗಿಬೇಕು (ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ವಿನಾಯಿತಿ ಇದೆ)
* ಪ್ರೈಮರಿ ಟೀಚರ್ಸ್ (PRT) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ ಜೊತೆಗೆ D.ed / B.ed ಉತ್ತೀರ್ಣರಾಗಿರಬೇಕು
* ಈ ಮೇಲಿನ ಎಲ್ಲಾ ಹುದ್ದೆಗಳಿಗೂ B.ed ನಲ್ಲಿ ಕನಿಷ್ಠ 50% ಅಂಕ ಪಡೆದವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ
* ಇದರೊಂದಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ CTET /TET ಅರ್ಹತೆ ಕಡ್ಡಾಯಗೊಳಿಸಲಾಗಿದೆ
* ಇಂಗ್ಲೀಷ್ ಮಾಧ್ಯಮದಲ್ಲಿ ಬೋಧನಾ ಸಾಮರ್ಥ್ಯ ಹೊಂದಿರುವವರು ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರುವವರಿಗೆ ಹೆಚ್ಚಿನ ಆದ್ಯತೆ ಇರುತ್ತದೆ.
ಈ ಸುದ್ದಿ ಓದಿ:- cash withdrawal: ನಿಮ್ಮ ಬ್ಯಾಂಕ್ ಖಾತೆಯಿಂದ ಎಷ್ಟು ಹಣ ಡ್ರಾ ಮಾಡಬಹುದು.? ಇಲ್ಲಿವೆ ಬ್ಯಾಂಕ್ ನಿಯಮಗಳು
ವಯೋಮಿತಿ:-
* ಕನಿಷ್ಠ ವಯೋಮಿತಿ 18 ವರ್ಷಗಳು
* ಗರಿಷ್ಠ ವಯೋಮಿತಿ ಇದೇ ಮೊದಲ ಬಾರಿಗೆ ಈ ಕ್ಷೇತ್ರದ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತಿರುವವರಿಗೆ 40 ವರ್ಷಗಳು
* ಕನಿಷ್ಠ ಐದು ವರ್ಷಗಳಾದರೂ ಶಿಕ್ಷಕರಾಗಿ ಕೆಲಸ ಮಾಡಿ ಕೆಲಸದ ಅನುಭವ ಹೊಂದಿರುವವರಿಗೆ 57 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ನಲ್ಲಿ https://awesindia.com/ website ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು
ಆಯ್ಕೆ ವಿಧಾನ:-
* CBS / ಆರ್ಮಿ ಪಬ್ಲಿಕ್ ಸ್ಕೂಲ್ ಗಳ ನೇಮಕಾತಿ ನಿಯಮಾವಳಿಗಳ ಪ್ರಕಾರವಾಗಿ ನೇಮಕಾತಿ ನಡೆಯುತ್ತದೆ.
* ಆನ್ಲೈನ್ ನಲ್ಲಿ ಸ್ಕ್ರೀನಿಂಗ್ ಟೆಸ್ಟ್
* ಮುಂದಿನ ಹಂತದಲ್ಲಿ ಶಾಲೆ ಆಡಳಿತ ಮಂಡಳಿಯಿಂದ ಬೋಧನ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅರ್ಹರನ್ನು ಆಯ್ದುಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಈಗಾಗಲೇ ಆರಂಭವಾಗಿದೆ
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 25 ಅಕ್ಟೊಬರ್, 2024
* ಆನ್ಲೈನ್ ನಲ್ಲಿ ಸ್ಕ್ರೀನಿಂಗ್ ಟೆಸ್ಟ್ ನಡೆಯುವ ನಿರೀಕ್ಷಿತ ದಿನಾಂಕ – ನವೆಂಬರ್ 23 ರಿಂದ 25.
ಹೆಚ್ಚಿನ ಮಾಹಿತಿಗಾಗಿ:-
* ಸಹಾಯವಾಣಿ ಸಂಖ್ಯೆ – 91 – 7969049941
* ವೆಬ್ಸೈಟ್ ವಿಳಾಸ – https://awesindia.com/