Ayushman Card 5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ಸಿಗಲಿದೆ.! ಆಯುಷ್ಮಾನ್ ಆರೋಗ್ಯ ಕಾರ್ಡ್ ಮೊಬೈಲ್ ನಲ್ಲಿಯೇ ಪಡೆಯುವ ವಿಧಾನ.!

Ayushman Card

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ (Ayushman Bharath – Arogya Karnataka Health card) ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್ ಗಳನ್ನ ಸಿಎಂ ಸಿದ್ದರಾಮಯ್ಯ (CM Siddaramaih) ಮೊನ್ನೆ ಬೆಂಗಳೂರಿನ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಿದ್ದಾರೆ.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್ ಗೆ ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಎಂದು ಹೆಸರಿಸಲಾಗಿದ್ದು ರಾಜ್ಯದ ಪ್ರತಿಯೊಬ್ಬ ಜನಸಾಮಾನ್ಯರಿಗೆ ಕೂಡ ಉತ್ತಮ ಆರೋಗ್ಯ ಸೇವೆ ಹಾಗೂ ಚಿಕಿತ್ಸೆಗಳನ್ನ ಒದಗಿಸಬೇಕು ಎಂಬುದು ಸರ್ಕಾರದ ಗುರಿಯಾಗಿದೆ.

WhatsApp Group Join Now
Telegram Group Join Now

ಇನ್ನು ಆರು ತಿಂಗಳ ಒಳಗೆ ರಾಜ್ಯದ 5.9 ಕೋಟಿ ಜನರಿಗೆ ಹೆಲ್ತ್ ಕಾರ್ಡ್ ಗಳನ್ನ ವಿತರಿಸುವ ಗುರಿಯನ್ನ ಆರೋಗ್ಯ ಇಲಾಖೆ ಹಾಕಿಕೊಂಡಿದೆ.‌ ಈ ಯೋಜನೆಯಡಿ BPL ಪಡಿತರ ಚೀಟಿ ಹೊಂದಿರುವ ಬಡ ಕುಟುಂಬಗಳು ವಾರ್ಷಿಕ 5 ಲಕ್ಷ ಮೌಲ್ಯದ ಚಿಕಿತ್ಸೆಯನ್ನು ಕುಟುಂಬದ ಒಬ್ಬರು ಅಥವಾ ಹಲವರು ಆದ್ಯತೆ ಆಧಾರದ ಮೇಲೆ ಬಳಸಿಕೊಳ್ಳಬಹುದು.

ಒಟ್ಟು ಅನುದಾನದ ಪಾಲಿನಲ್ಲಿ ರಾಜ್ಯ ಸರ್ಕಾರವು 66% ರಷ್ಟು ನೀಡುತ್ತಿದ್ದರೆ, ಕೇಂದ್ರ ಸರ್ಕಾರವು 34% ನೀಡುತ್ತಿದೆ. APL ಕುಟುಂಬದವರಿಗೂ ಸಹ ಯೋಜನೆಯಲ್ಲಿ ಅವಕಾಶ ಕಲ್ಪಿಸಿರುವ ಮೊದಲ ರಾಜ್ಯ ಕರ್ನಾಟಕ ಎನ್ನುವ ಖ್ಯಾತಿಗೆ ರಾಜ್ಯ ಒಳಗಾಗಿದ್ದು APL ಕುಟುಂಬಗಳಿಗೆ 5 ಲಕ್ಷದ ಮೌಲ್ಯದ ಚಿಕಿತ್ಸೆಯಲ್ಲಿ ಗರಿಷ್ಠ ರೂ.1.5 ಲಕ್ಷ ವೆಚ್ಚವನ್ನ ರಾಜ್ಯ ಸರ್ಕಾರ ಪಾವತಿಸಲಿದೆ.

APL ಕಾರ್ಡ್ ದಾರರು 70%ರಷ್ಟು ಚಿಕಿತ್ಸಾ ವೆಚ್ಚವನ್ನ ಪಾವತಿಸಿದರೆ, ಉಳಿದ 30%ರಷ್ಟು ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಲಿದೆ. ಆಯುಷ್ಮಾನ್ ಗುರುತಿನ ಚೀಟಿಗಳನ್ನು ರಾಷ್ಟ್ರೀಯ ಆರೋಗ್ಯ ಐಡಿ (ABHA ID) ಯೊಂದಿಗೆ ಜೋಡಿಸಲಾಗುತ್ತಿರುವುದರಿಂದ ಫಲಾನುಭವಿಗಳ ವ್ಯೆದ್ಯಕೀಯ ದಾಖಲೆಗಳನ್ನು ಸಂರಕ್ಷಿಸಿ ಸುಲಭ ಮತ್ತು ಪರಿಣಾಮಕಾರಿ ಚಿಕಿತ್ಸೆ ನೀಡಲು ನೆರವಾಗುತ್ತದೆ.

ಈ ಯೋಜನೆಯ ಪ್ರಯೋಜನಗಳನ್ನು ಮುಂದಿನ ಹಂತಗಳಲ್ಲಿ ಇನ್ನಷ್ಟು ವಿಸ್ತರಿಸುವ ಸಾಧ್ಯತೆ ಇದೆ. ಹಾಗಾಗಿ ಪ್ರತಿಯೊಬ್ಬ ಅರ್ಹ ಫಲಾನುಭವಿಯು ತಪ್ಪದೆ ಈ ಕಾರ್ಡ್ ಪಡೆದುಕೊಳ್ಳಿ.

ಆಯುಷ್ಮಾನ್ ಕಾರ್ಡ್ ಪಡೆದುಕೊಳ್ಳುವ ವಿಧಾನ:-

1. ರೇಷನ್ ಕಾರ್ಡ್ ಗೆ ಲಿಂಕ್ ಆಗಿರುವ ಆಧಾರ್‌ ಕಾರ್ಡ್ ಮಾಹಿತಿ ನೀಡಿ ಹತ್ತಿರದ ಗ್ರಾಮ-1 ಕೇಂದ್ರಗಳು ಅಥವಾ ನಾಗರೀಕ ಸೇವಾ ‌ಕೇಂದ್ರಗಳಲ್ಲಿ ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಗುರುತಿನ ಚೀಟಿಗಾಗಿ ಸುಲಭವಾಗಿ ನೊಂದಾಯಿಸಿ ಪಡೆದುಕೊಳ್ಳಬಹುದು.

2. ಮೊಬೈಲ್ ನಲ್ಲಿಯೂ ಕೂಡ ನೀವೇ ಆಯುಷ್ಮಾನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬಹುದು.
* ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಗೆ ಹೋಗಿ ಆಯುಷ್ಮಾನ್ ಆಪ್ (Ayushman App) ಡೌನ್ಲೋಡ್ ಮಾಡಿಕೊಳ್ಳಿ
* ಮೆನುವಿನಲ್ಲಿ ಹೊಸ ಸದಸ್ಯರನ್ನು ಸೇರಿಸಿ ಎನ್ನುವ ಆಯ್ಕೆ ಕ್ಲಿಕ್ ಮಾಡಿ ನಿಮ್ಮ ಆಧಾರ ಸಂಖ್ಯೆ ಕೇಳಲಾಗುತ್ತದೆ, ನಿಮ್ಮ ಆಧಾರ್ ಸಂಖ್ಯೆ ನಮೂದಿಸಿದರೆ ಆ ಸಂಖ್ಯೆಗೆ OTP ಬರುತ್ತದೆ, ಅದನ್ನು ಹಾಕುವ ಮೂಲಕ ಮುಂದುವರೆಯಿರಿ.

* ನಿಮ್ಮ ಹೆಸರು, ಲಿಂಗ, ಹುಟ್ಟಿದ ದಿನಾಂಕ, ವಿಳಾಸ ಈ ರೀತಿ ವೈಯಕ್ತಿಕ ವಿವರಗಳನ್ನು ಕೇಳಲಾಗಿರುತ್ತದೆ ಇವುಗಳಲ್ಲಿ ಸರಿಯಾದ ಮಾಹಿತಿ ತುಂಬಿಸಿ ಮತ್ತೊಮ್ಮೆ ಪರೀಕ್ಷಿಸಿ ಸಬ್ಮಿಟ್ ಕೊಡಿ.
* ನಿಮಗೆ ಒಂದು ರೆಫರೆನ್ಸ್ ಐಡಿ (Reference ID) ಸಿಗುತ್ತದೆ, ಅದಾದ ಸ್ವಲ್ಪ ದಿನಗಳ ಬಳಿಕ ನೀವು ರೆಫರೆನ್ಸ್ ಐಡಿ ಮೂಲಕ ಆಯುಷ್ಮಾನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳ ಬಹುದು.

* ಪರೀಕ್ಷಿತಗೊಂಡಿರುವ ಆಯುಷ್ಮಾನ್ ಕಾರ್ಡ್ ಪಡೆಯಲು ಆಯುಷ್ಮಾನ್ ಆಪ್ ಗೆ ಹೋಗಿ ಫಲಾನುಭವಿಗಳ ಲಿಸ್ಟ್ ನಲ್ಲಿ ನಿಮ್ಮ ಹೆಸರನ್ನು ಸರ್ಚ್ ಮಾಡಿ.
* ಆಧಾರ್ ಇ-ಕೆವೈಸಿ ಪೂರ್ತಿಗೊಳಿಸಿ ಮತ್ತು ಇನ್ನಿತರ ವಿವರಗಳನ್ನು ಭರ್ತಿ ಮಾಡಿ, ಆಯುಷ್ಮಾನ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಿ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment