Bhagyalakshmi: ಹೆಣ್ಣು ಮಕ್ಕಳು ಇರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್.!

Bhagyalakshmi

ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆ (Bhagyalakshmi-Sukanya Prosperity Account Plan)ಯಡಿ ಬಿಪಿಎಲ್(BPL) ಕುಟುಂಬದ 2 ಹೆಣ್ಣು ಮಕ್ಕಳಿಗೆ(Females), ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ.3000 ದಂತೆ 15 ವರ್ಷಗಳವರೆಗೆ ಒಟ್ಟು ರೂ.45,000 ಗಳನ್ನು ಅಂಚೆ ಇಲಾಖೆ(Post Office)ಯಲ್ಲಿ ಸುಕನ್ಯಾ ಸಮೃದ್ಧಿ ಖಾತೆ ಯೋಜನೆ(Sukannya abundance account plan)ಯಡಿ ಠೇವಣಿ (Deposit)‌ ಹೂಡಲಾಗುತ್ತದೆ.

ಮಗುವಿಗೆ 21 ವರ್ಷ ಪೂರ್ಣಗೊಂಡ ನಂತರ ಪರಿಪಕ್ವ ಮೊತ್ತ ಅಂದಾಜು ರೂ.1.27 ಲಕ್ಷ ನೀಡಲಾಗುತ್ತದೆ. ಭಾಗ್ಯಲಕ್ಷ್ಮಿ ಯೋಜನೆ(Bhagyalakshmi Scheme)ಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

WhatsApp Group Join Now
Telegram Group Join Now

ಮಗುವನ್ನು ನೋಂದಾಯಿಸಲು ಅವಶ್ಯಕ ದಾಖಲೆಗಳು

ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಯೋಜನೆ ಅರ್ಜಿ ನಮೂನೆ, ಪೋಷಕರೊಂದಿಗೆ ಮಗುವಿನ ಭಾವಚಿತ್ರ, ಮಗುವಿನ ಮೂಲ ಜನನ ಪ್ರಮಾಣ ಪತ್ರ, ಆದ್ಯತಾ ಕುಟುಂಬ ಪಡಿತರ ಚೀಟಿಯ ಪ್ರತಿ(ಪಡಿತರ ಚೀಟಿಯಲ್ಲಿ ತಂದೆಯ ಹೆಸರು ಇರಬೇಕು). ಪೋಷಕರ ಆಧಾರ್ ಕಾರ್ಡ್, ಮಗುವಿನ ಆಧಾರ್ ಕಾರ್ಡ್ ಪ್ರತಿ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ್ದಲ್ಲಿ.

ಜಾತಿ ಪ್ರಮಾಣ ಪತ್ರ, ಪೋಷಕರ ಸ್ವಯಂ ಘೋಷಣಾ ವಿವಾಹ ದೃಢೀಕರಣ ಪತ್ರ(ನಮೂನೆ-6ರಲ್ಲಿ), ಭರ್ತಿ ಮಾಡಿದ ಅರ್ಜಿಯನ್ನು ಮಗು ಹುಟ್ಟಿದ ದಿನಾಂಕದಿಂದ 2 ವರ್ಷ ಪೂರ್ಣಗೊಳ್ಳುವ ಮೊದಲು ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅಂಗನವಾಡಿ ಕಾರ್ಯಕರ್ತೆಗೆ ನೀಡಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.‌

ಭಾಗ್ಯಲಕ್ಷ್ಮಿ-ಸುಕನ್ಯಾ ಸಮೃದ್ಧಿ ಖಾತೆ ಯೋಜನೆ 2006-07 ರಿಂದ 2019-20ನೇ ಸಾಲಿನವರೆಗೆ ಭಾರತೀಯ ಜೀವ ವಿಮಾ ನಿಗಮವು ಪಾಲುದಾರ ಹಣಕಾಸುಸಂಸ್ಥೆಯಾಗಿದ್ದು, 2020-21ನೇ ಸಾಲಿನಿಂದ ಆಡಳಿತಾತ್ಮಕ ಕಾರಣಗಳಿಂದ ಭಾಗ್ಯಲಕ್ಷ್ಮಿ ಯೋಜನೆಯನ್ನು ಸರ್ಕಾರದ ಆದೇಶ ದಿನಾಂಕ 11-10-2020ರಂತೆ ಅಂಚೆ ಇಲಾಖೆಯ ಮೂಲಕ ಅನುಷ್ಠಾನಗೊಳಿಲಾಗುತ್ತಿದೆ.

ಸದರಿ ಯೋಜನೆಯಡಿ ಬಿಪಿಎಲ್ ಕುಟುಂಬದ 2 ಹೆಣ್ಣು ಮಕ್ಕಳಿಗೆ ಪ್ರತಿ ಮಗುವಿನ ಹೆಸರಿನಲ್ಲಿ ವಾರ್ಷಿಕ ರೂ. 3000ದಂತೆ 15 ವರ್ಷಗಳವರೆಗೆ ಒಟ್ಟು ರೂ. 45,000ಗಳನ್ನು ಅಂಚೆ ಇಲಾಖೆಯ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯಡಿ ಠೇವಣಿ ಹೂಡಲಾಗುತ್ತದೆ. 10ನೇ ತರಗತಿ ನಂತರ ಉನ್ನತ ವಿದ್ಯಾಭ್ಯಾಸಕ್ಕಾಗಿ ಖಾತೆಯಲ್ಲಿರುವ ಮೊತ್ತದ ಶೇ.50ರಷ್ಟು ಭಾಗವನ್ನು ಹಿಂಪಡೆಯಲು ಯೋಜನೆಯಡಿ ಅವಕಾಶವಿರುತ್ತದೆ.

ಭಾಗ್ಯಲಕ್ಷ್ಮೀ ಯೋಜನೆಯ ಅಡಿಯಲ್ಲಿ ತೆರೆಯಲಾಗುವ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆಯುವ ಅರ್ಜಿಯನ್ನು ಭರ್ತಿ ಮಾಡುವ ವಿಧಾನ ಹಾಗೂ ಪಾಸ್ ಪುಸ್ತಕಗಳನ್ನು ಫಲಾನುಭವಿಗಳಿಗೆ ವಿತರಿಸುವುದರ ಬಗ್ಗೆಯೂ ಮಾಹಿತಿ ನೀಡಲಾಗಿದೆ. ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಖಾತೆಯ ಪಾಸ್ ಪುಸ್ತಕ ಬಟವಾಡೆ ಮಾಡುವ ಮೊದಲು ಕೈಗೊಳ್ಳಬೇಕಾದ ಕ್ರಮಗಳನ್ನು ವಿರಿಸಲಾಗಿದೆ.

* ಪಾಸ್ ಪುಸ್ತಕದಲ್ಲಿ ನಮುದಾಗಿರುವ ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಯ ಹೆಸರು ಮತ್ತು ಇತರೆ ವಿವರಗಳು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ದಾಖಲೆಗಳ ಪ್ರಕಾರ ಇದೆ ಅನ್ನುವುದನ್ನು ಖಾತ್ರಿ ಪಡಿಸಿಕೊಳ್ಳಿ.
* ಪಾಸ್ ಪುಸ್ತಕಕ್ಕೆ ಸಂಬಂಧಿಸಿದ ಸುಕನ್ಯಾ ಸಮೃದ್ಧಿ ಖಾತೆಯ ಭರ್ತಿ ಮಾಡಿದ ಅರ್ಜಿ ಸಹ ಬಂದಿರುತ್ತದೆಯೋ ಎಂದು ಪರಿಶೀಲಿಸಿ ಖಾತ್ರಿ ಪಡಿಸಿಕೊಳ್ಳಿ.

* ಫಲಾನುಭವಿಯ ಪೋಷಕರನ್ನು ಸಂಪರ್ಕಿಸಿ ಹಾಗೂ ಮಗುವಿನ ಹೆಸರಲ್ಲಿ ಈಗಾಗಲೇ ಇನ್ನೊಂದು ವೈಯಕ್ತಿಕವಾಗಿ ದೇಶದ ಯಾವುದೇ ಅಂಚೆ ಕಚೇರಿ ಅಥವಾ ರಾಷ್ಟ್ರೀಕೃತ ಬ್ಯಾಂಕ್ ನಲ್ಲಿ ಸುಕನ್ಯ ಸಮೃದ್ಧಿ ಖಾತೆ ತೆರೆದಿರುವುದಿಲ್ಲ ಎಂಬುದನ್ನು ಖಚಿತಪಡಿಸಿಕೊಳ್ಳಿ.
* ಈಗಾಗಲೇ ಫಲಾನುಭವಿ ಮಗುವಿನ ಹೆಸರಿನಲ್ಲಿ ವೈಯಕ್ತಿಕವಾಗಿ ಸುಕನ್ಯಾ ಸಮೃದ್ಧಿ ಖಾತೆಯನ್ನು ತೆರೆದಿದ್ದಾರೆ ಎಂದಾದಲ್ಲಿ ಅದರ ಪಾಸ್ ಪುಸ್ತಕವನ್ನು ತರಲು ಹೇಳಿ?

* ಸುಕನ್ಯಾ ಸಮೃದ್ಧಿ ಖಾತೆಯ ಅರ್ಜಿ ಭರ್ತಿ ಮಾಡುವ ಮೊದಲು ಸಂಬಂಧಿಸಿದ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿ ಇದೆಯಾ ಎಂದು ಖಚಿತ ಪಡಿಸಿಕೊಳ್ಳಿ. ಭಾಗ್ಯಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಗೆ ಹತ್ತಿರದ ಅಂಗನವಾಡಿ ಕೇಂದ್ರ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment