Crop Insurance:
ತೋಟಗಾರಿಕೆ ಇಲಾಖೆ (Department of Horticulture)ಯ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (Weather Based Crop Insurance Scheme)ಯಡಿ ವಿಮೆ ನೊಂದಣಿ (Insurance registration)ಗೆ ಸಂಬಂಧಿಸಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಭೆಯನ್ನು ನಡೆಸಲಾಗಿದ್ದು, ಜಿಲ್ಲೆಯಲ್ಲಿ ಫಸಲು ನೀಡುತ್ತಿರುವ ಅಡಿಕೆ (betelnut), ಮಾವು(Mango), ಕಾಳುಮೆಣಸು (pepper) ಮತ್ತು ಶುಂಠಿ ಬೆಳೆ (Ginger crop)ಗಳಿಗೆ ವಿಮೆ ಯೋಜನೆಯಡಿ ನೋಂದಾಯಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯಲ್ಲಿ ಅಡಿಕೆ ಪ್ರಮುಖ ಬೆಳೆಯಾಗಿದ್ದು, ಬೆಳೆ ಸಮೀಕ್ಷೆಯಲ್ಲಿ ರೈತರು ಬೆಳೆದಿರುವ ಅಡಿಕೆ ಬೆಳೆ ಕಂಡುಬರದಿದ್ದರೆ ಅಂತಹ ರೈತರು ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಮಾನ್ಯ ಜಿಲ್ಲಾಧಿಕಾರಿಗಳು ಬೆಳೆ ಸಮೀಕ್ಷೆ ಪ್ರಕಾರ ಹಿಂದಿನ ಎರಡು ವರ್ಷಗಳಲ್ಲಿ ಅಡಿಕೆ ಬೆಳೆ ಕಂಡುಬಂದರೆ ಅಥವಾ ಕನಿಷ್ಟ ಒಂದು ವರ್ಷದಲ್ಲಿಯಾದರೂ ಬೆಳೆ ಸಮೀಕ್ಷೆಯಲ್ಲಿ ಅಡಿಕೆ ಬೆಳೆ ಕಂಡು ಬಂದರೆ ಅಂತಹ ಪ್ರಕರಣಗಳನ್ನು ಪರಿಗಣಿಸಿ.
ಸಂರಕ್ಷಣೆ ತಂತ್ರಾಂಶದಲ್ಲಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿ, ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹವಾಮಾನ ಅಂಶಗಳಾದ ಮಳೆಯ ಪ್ರಮಾಣ, ತಾಪಮಾನ ಆರ್ದತೆ ಮತ್ತಿತರ ಮಾಹಿತಿಗಳನ್ನು ಸ್ಥಳೀಯವಾಗಿ ಲಭ್ಯವಿರುವ ಟೆಲಿಮೆಟ್ರಿಕ್ ಮಳೆ ಮಾಪನ ಕೇಂದ್ರಗಳಲ್ಲಿ ದಾಖಲಿಸುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.
ಬೆಳೆ ವಿಮೆ ಪಡೆಯಲಿಚ್ಚಿಸುವ ರೈತರು ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಸಂಖ್ಯೆ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳೊಂದಿಗೆ ರಾಷ್ಟ್ರೀಯ ಬ್ಯಾಂಕ್, ಸಾಮಾನ್ಯ ಸೇವಾ ಕೆಂದ್ರ/ ಗ್ರಾಮ ಒನ್‌ಗಳಲ್ಲಿ ವಿಮೆಗೆ ನೊಂದಾಯಿಸಕೊಳ್ಳಬಹುದು. ನೋಂದಣಿ, ವಿಮಾ ಮೊತ್ತ ಪಾವತಿಸಲು ಜು.31 ಕೊನೆಯ ದಿನವಾಗಿರುತ್ತದೆ.
ಈ ಸುದ್ದಿ ಓದಿ:- Kisan Credit Card: ಕಿಸಾನ್ ಕ್ರೆಡಿಟ್ ಕಾರ್ಡ್ ಇದ್ದವರಿಗೆ 3 ಲಕ್ಷ ಸಾಲ ಸೌಲಭ್ಯ.!
2024-25ನೇ ಸಾಲಿನಲ್ಲಿ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೆಳೆವಾರು ವಿಮಾ ಮೊತ್ತ ಹಾಗೂ ಕಂತಿನ ವಿವರಗಳನ್ನು ಪ್ರಕಟಿಸಲಾಗಿದೆ. ರೈತರು ಎಷ್ಟು ಪಾವತಿಸಬೇಕು? ಎಂದು ಮಾಹಿತಿ ನೀಡಲಾಗಿದೆ.
– ಕಾಳು ಮೆಣಸು ಬೆಳೆಗೆ ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ ರೂ. 47,000, ಪ್ರತಿ ಹೆಕ್ಟೇರ್‌ಗೆ ವಿಮಾ ಕಂತು (ಶೇ.30) ರೂ.14,100 ಮತ್ತು ರೈತರು ಪಾವತಿಸಬೇಕಾಗಿರುವ ಕಂತು (ಶೇ.5) ರೂ.2,350 ಆಗಿದೆ.
– ಅಡಿಕೆ ಬೆಳೆಗೆ ಪ್ರತಿ ಹೆಕ್ಟೇರ್‌ಗೆ ವಿಮಾ ಮೊತ್ತ (ರೂ.ಗಳಲ್ಲಿ) ರೂ.1,28,000, ಪ್ರತಿ ಹೆಕ್ಟೇರ್‌ಗೆ ವಿಮಾ ಕಂತು (ಶೇ.30) ರೂ. 38,400 ಮತ್ತು ರೈತರು ಪಾವತಿಸಬೇಕಾಗಿರುವ ಕಂತು (ಶೇ.5) ರೂ. 6,400 ಆಗಿರುತ್ತದೆ.
ಈ ಸುದ್ದಿ ಓದಿ:- Grama Suraksha Yojana : ಕೇವಲ 1500 ರೂಪಾಯಿ ಪಾವತಿಸಿ ಸಾಕು 34 ಲಕ್ಷ ಸಿಗಲಿದೆ.!
ಹೆಚ್ಚಿನ ಮಾಹಿತಿಗೆ ರೈತರು ಕೂಡಲೇ ಸಮೀಪದ ಬ್ಯಾಂಕ್ ಶಾಖೆ ಅಥವಾ ಕ್ಷೇಮಾ ಜನರಲ್ ಇನ್ಸೂರೆನ್ಸ್ ಕಂಪನಿ (7760076574, 8970456510) ಅಥವಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಅಥವಾ ಸಾಮಾನ್ಯ ಸೇವಾ ಕೇಂದ್ರಗಳನ್ನು ಸಂಪರ್ಕಿಸಬಹುದು.
ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಬೇರೆ ಬೇರೆ ಜಿಲ್ಲೆಗೆ ಬೇರೆ ಬೇರೆ ಕಂಪನಿಗಳನ್ನು ನಿಯೋಜನೆ ಮಾಡಲಾಗಿದೆ. ವಿವಿಧ ಜಿಲ್ಲೆಗಳಲ್ಲಿ ಬೆಳೆಯುವ ಬೆಳೆಗಳ ಆಧಾರದ ಮೇಲೆ ವಿಮಾ ಮೊತ್ತ ಸೇರಿ ಉಳಿದ ವಿವರಗಳು ಬದಲಾಗುತ್ತವೆ.