Electricity Bill
ರಾಜ್ಯ ಸರ್ಕಾರ (State Govt)ದ ಗ್ಯಾರಂಟಿ ಯೋಜನೆ (Guarantee scheme)ಗಳಲ್ಲಿ ಒಂದಾದ ಗೃಹಜ್ಯೋತಿ (Gruhajyothi scheme) ಬಂದ ಬಳಿಕ ರಾಜ್ಯಾದ್ಯಂತ ಕೋಟ್ಯಂತರ ಮಂದಿ ವಿದ್ಯುತ್ ಬಿಲ್ (Electricity bill) ಕಟ್ಟೋದು ಕಡಿಮೆಯಾಗಿದೆ. ಇದಕ್ಕೆ ಕಾರಣ ರಾಜ್ಯ ಸರ್ಕಾರ ನೀಡಿರುವ 200 ಯೂನಿಟ್ ಉಚಿತ ವಿದ್ಯುತ್ (Unit is free electricity) ಯೋಜನೆ. ಆದರೆ, ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚುವರಿ ವಿದ್ಯುತ್ ಬಳಸಿ ಕರೆಂಟ್ ಬಿಲ್ ಕಟ್ಟದೇ ಇರೋರಿಗೆ ಈಗ ಶಾಕ್ ತಟ್ಟಿದೆ.
ಹೌದು, ಬೆಸ್ಕಾಂ (Bescom) ವಿದ್ಯುತ್ ಗ್ರಾಹಕ (Electricity consumer)ರಿಗೆ ಬಿಗ್ ಶಾಕ್ ಎನ್ನುವಂತೆ ಹೊಸ ನಿಯಮ ಜಾರಿ (Implementation of new rules)ಗೊಳ್ಳುತ್ತಿದೆ. ಈ ನಿಯಮದ ಅನುಸಾರ ರೂ.100 ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡರೂ ಸಂಪರ್ಕ ಕಡಿತ (Disconnection)ಗೊಳ್ಳಲಿದೆ.
ಬಿಲ್ ಬಂದ 30 ದಿನದೊಳಗೆ ವಿದ್ಯುತ್ ಶುಲ್ಕ ಪಾವತಿಸದಿದ್ದಲ್ಲಿ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ(deposit amount) ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿ (KERC Regulation) ಅನ್ವಯ ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು.
ಈ ಸುದ್ದಿ ಓದಿ:- Jeevan Anand Policy: LIC ನಲ್ಲಿ ಕೇವಲ 45 ರೂಪಾಯಿ ಹೂಡಿಕೆ ಮಾಡಿ 25 ಲಕ್ಷ ಸಿಗಲಿದೆ.!
ಹೌದು.. ಬಿಲ್ ಕಟ್ಟದೇ ಇರುವ ವಿದ್ಯುತ್ ಗ್ರಾಹಕರಿಗೆ ಬೆಸ್ಕಾಂ ಬಿಸಿ ಮುಟ್ಟಿಸಿದೆ. ಬಿಲ್ ಬಾಕಿ ಉಳಿಸಿಕೊಂಡಿರುವವರು ಒಂದು ತಿಂಗಳೊಳಗೆ ನಿಮ್ಮ ವಿದ್ಯುತ್ ಬಿಲ್ ಪಾವತಿ ಮಾಡಿ, ಒಂದು ವೇಳೆ ವಿದ್ಯುತ್ ಬಿಲ್‌ನ ಪಾವತಿ ಗಡುವು ಮೀರಿದಲ್ಲಿ ಗ್ರಾಹಕರ ವಿದ್ಯುತ‌್ ಸಂಪರ್ಕವನ್ನು ಕಡಿತಗೊಳಿಸಲು ಬೆಸ್ಕಾಂ ನಿರ್ಧಾರ ಮಾಡಿದೆ.
ಹೆಚ್ಚುವರಿ ಭದ್ರತಾ ಠೇವಣಿ ಪಾವತಿಸದಿದ್ದರೂ ಸಹ ವಿದ್ಯುತ್ ಸಂಪರ್ಕ ಕಡಿತ ಮಾಡಲು ಬೆಸ್ಕಾಂ ತೀರ್ಮಾನಿಸಿದ್ದು, ಇಂದಿನಿಂದಲೇ ನೂತನ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ಬರಲಿದೆ. ಸೆಪ್ಟೆಂಬರ್ 1ರಿಂದ ಕಟ್ಟುನಿಟ್ಟಾಗಿ ಈ ನಿಯಮವನ್ನು ಪಾಲಿಸಲು ನಿರ್ಧರಿಸಿರುವ ಬೆಸ್ಕಾಂ- ಗೃಹ ಮತ್ತು ವಾಣಿಜ್ಯ ಬಳಕೆದಾರರು.
ಅಪಾರ್ಟ್‌ಮೆಂಟ್‌ಗಳು ಹಾಗೂ ತಾತ್ಕಲಿಕ ವಿದ್ಯುತ್ ಸಂಪರ್ಕ ಪಡೆದ ಗ್ರಾಹಕರು ನಿಗದಿತ 30 ದಿನದೊಳಗೆ ಬಿಲ್ ಪಾವತಿಸದಿದ್ದಲ್ಲಿ ಮೀಟರ್ ರೀಡಿಂಗ್‌ಗೆ ಬರುವ ದಿನ ಅಂದರೆ ಪ್ರತಿ ತಿಂಗಳ ಮೊದಲ 15 ದಿನದಲ್ಲೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹಾಗಾಗಿ, ಗ್ರಾಹಕರು ಸಕಾಲದಲ್ಲಿ ಶುಲ್ಕ ಪಾವತಿಸುವಂತೆ ಎಂದು ಬೆಸ್ಕಾಂ ಪ್ರಕಟಣೆ ಕೋರಿದೆ.
ಈ ಸುದ್ದಿ ಓದಿ:- Guest Lecturer Recruitment: ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ ಸಂಬಳ 40,000/-
ಈವರೆಗೆ, ಪ್ರತಿ ತಿಂಗಳ ಮೊದಲ 15 ದಿನದಲ್ಲಿ ಮೀಟರ್ ಮಾಪನ ಮಾಡಿದ ಬಳಿಕ, ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲು ಲೈನ್‌ಮೆನ್‌ಗಳ ಜತೆ ಮಾಪಕ ಓದುಗರು ಮತ್ತೆ ಅದೇ ಸ್ಥಳಕ್ಕೆ ತೆರಳುತ್ತಿದ್ದರು. ಇನ್ನು ಮುಂದೆ ಮಾಪಕ ಓದುಗರೊಂದಿಗೆ ಇರುವ ಲೈನ್‌ಮೆನ್‌ಗಳು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರ ವಿದ್ಯುತ್ ಸರಬರಾಜನ್ನು ಬಿಲ್ ನೀಡುವ ಸಮಯದಲ್ಲೇ ಸ್ಥಗಿತಗೊಳಿಸಲಿದ್ದಾರೆ.
ವಿದ್ಯುತ ಬಿಲ್ ಪಾವತಿಗೆ ಅಂತಿಮ ದಿನಾಂಕದವರೆಗೆ (ಅಂದರೆ ಬಿಲ್ ನೀಡಿದ 15 ದಿನಗಳು) ಯಾವುದೇ ಬಡ್ಡಿಯಿಲ್ಲದೆ 15 ಕಾಲಾವಕಾಶ ನೀಡಲಾಗುತ್ತದೆ. ಅಂತಿಮ ದಿನಾಂಕದ ನಂತರವೂ ಬಡ್ಡಿಸಹಿತ ಪಾವತಿಗೆ 15 ದಿನಗಳ ಕಾಲಾವಕಾಶ ನೀಡಲಾಗುತ್ತದೆ.
ಆದಾಗ್ಯೂ ಗ್ರಾಹಕರು ಬಿಲ್ ಪಾವತಿಸದಿದ್ದಲ್ಲಿ ಮುಂದಿನ ಮೀಟರ್ ರೀಡಿಂಗ್ ದಿನವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುತ್ತದೆ. ವಿದ್ಯುತ್ ಬಿಲ್ ಬಾಕಿ ಮೊತ್ತ ಮತ್ತು ಹೆಚ್ಚುವರಿ ಭದ್ರತಾ ಠೇವಣಿ ಮೊತ್ತ 100 ರೂ.ಗಳಿಗಿಂತ ಅಧಿಕವಾಗಿದ್ದಲ್ಲಿ, ಅಂತಹ ಸ್ಥಾಪನಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗುತ್ತದೆ.