ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೂ ರಾಜ್ಯದ ನಾಲ್ಕು ನಿಗಮಗಳ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿರುವ ವಿಚಾರ ಎಲ್ಲರಿಗೂ ತಿಳಿದಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆ ನಡೆದ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ್ದ ಗ್ಯಾರಂಟಿ ಭರವಸೆಗಳಲ್ಲಿ ಒಂದಾಗಿ ಸೇರಿದ ಶಕ್ತಿ ಯೋಜನೆಯು ಕಾಂಗ್ರೆಸ್ ಬಹುಮತದೊಂದಿಗೆ ಗೆದ್ದ ನಂತರ ಕಳೆದ ಜುಲೈ-2023 ತಿಂಗಳಿನಿಂದಲೂ ರಾಜ್ಯದಲ್ಲಿ ಜಾರಿಯಲ್ಲಿದ್ದು.
ಈ ಮೂಲಕ ರಾಜ್ಯದಲ್ಲಿ ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲಾ ಮಹಿಳೆಯರು ಈ ಉಚಿತ ಶುಲ್ಕ ರಹಿತ ಪ್ರಯಾಣದ ಅನುಕೂಲತೆ ಹೊಂದಿದ್ದಾರೆ. ಆಧಾರ್ ಕಾರ್ಡ್ / ವೋಟರ್ ಐಡಿ / ಡ್ರೈವಿಂಗ್ ಲೈಸೆನ್ಸ್ ಅಥವಾ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಒಂದು ಗುರುತಿನ ಚೀಟಿಯನ್ನು ತೋರಿಸಿ ಹೀಗೆ ರಾಜ್ಯದ ಗಡಿಯೊಳಗೆ ಎಲ್ಲಿ ಬೇಕಾದರೂ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಇದನ್ನು ಹೊರತುಪಡಿಸಿ ಶಕ್ತಿ ಯೋಜನೆ ಬರುವುದಕ್ಕಿಂತ ಮುಂಚೆಯಿಂದಲೂ ನಿಗಮವು ಅನೇಕರಿಗೆ ಉಚಿತ ಹಾಗೂ ಸಬ್ಸಿಡಿ ಪ್ರಯಾಣದ ಅನುಕೂಲತೆ ಕಲ್ಪಿಸಿಕೊಟ್ಟಿದೆ. ಹಿರಿಯ ನಾಗರಿಕರಿಗೆ ರಿಯಾಯಿತಿ ದರದಲ್ಲಿ ಪಾಸ್ ಗಳು ಮತ್ತು ರಾಜ್ಯದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕೂಡ ಸಬ್ಸಿಡಿ ಪಾಸ್ ಮತ್ತು ಕೆಲ ಅರ್ಹ ವಿದ್ಯಾರ್ಥಿನಿಯರಿಗೆ ಉಚಿತ ಪಾಸ್ ವಿತರಣೆ ಮಾಡಲಾಗುತ್ತಿತ್ತು.
ಶಕ್ತಿ ಯೋಜನೆ ಜೊತೆಗೆ ಉಳಿದ ಈ ಸವಲತ್ತುಗಳು ಕೂಡ ಈಗಲೂ ಸಹಾ ಮುಂದುವರೆದಿದ್ದು ಈಗ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಜೂನ್ ತಿಂಗಳಲ್ಲಿ ಆರಂಭವಾಗಿರುವ ಕಾರಣ ಈ ಉಚಿತ ಪಾಸ್ ವಿತರಣೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಗಿಯಲಿದೆ ಹಾಗಾಗಿ ಕೂಡಲೇ ಎಲ್ಲಾ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಿ ಮತ್ತು ತಪ್ಪದೇ ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಸ್ನೇಹಿತರ ಬಳಗದೊಂದಿಗೆ ಹಂಚಿಕೊಂಡು ಇತರರಿಗೆ ನೆರವಾಗಿ.
ಈ ಉಚಿತ ಸಬ್ಸಿಡಿ ಪಾಸ್ ಗಳನ್ನು ಪಡೆಯಲು ವಿದ್ಯಾರ್ಥಿಗಳು ಅಥವಾ ಅವರ ಪೋಷಕರು ಕೇಳಲಾಗುವ ಕೆಲವು ಸೂಕ್ತ ದಾಖಲೆಗಳ ಜೊತೆ ಅರ್ಜಿ ಸಲ್ಲಿಸಬಹುದು. ಇದುವರೆಗೂ CSC ಕೇಂದ್ರಗಳಲ್ಲಿ ಅಥವಾ ಬೆಂಗಳೂರು ಒನ್ / ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತಿತ್ತು ಆದರೆ ಈ ಬಾರಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಸರಳವಾಗಿ ವಿದ್ಯಾರ್ಥಿಗಳು ಮೊಬೈಲ್ ಮೂಲಕವೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ.
ಇದುವರೆಗೂ ಈ ರೀತಿಯಾಗಿ ಅರ್ಜಿ ಸಲ್ಲಿಸಿದ ಬಳಿಕ ಹತ್ತಿರದ ಪಾಸ್ ವಿತರಣಾ ಕೇಂದ್ರಗಳಿಗೆ ಹೋಗಿ ಒಂದೆರಡು ದಿನಗಳಲ್ಲಿ ಪಾಸ್ ಪಡೆದುಕೊಳ್ಳ ಬಹುದಿತ್ತು, ಈಗಲೂ ಇದೇ ಕ್ರಮ ಅನುಸರಿಸಬಹುದು. ಈ ಬಾರಿ ಶಾಲಾ-ಕಾಲೇಜುಗಳಲ್ಲಿ ಕೂಡ ಪಾಸ್ ವಿತರಣೆ ವ್ಯವಸ್ಥೆ ಮಾಡಲಾಗಿದೆ. ಪ್ರಸ್ತುತವಾಗಿ ಬಸ್ ಪಾಸ್ ಶುಲ್ಕ ಎಷ್ಟಿದೆ ಮತ್ತು ಹೇಗೆ ಅರ್ಜಿ ಸಲ್ಲಿಸಬಹುದು ಎನ್ನುವುದರ ಪೂರ್ತಿ ಮಾಹಿತಿಗಾಗಿ ಲೇಖನವನ್ನು ಕೊನೆಯವರೆಗೂ ಓದಿ.
ಪರಿಷ್ಕೃತ ಗೊಂಡಿರುವ ಬಸ್ ಪಾಸ್ ದರ ಪಟ್ಟಿ:
* ಪ್ರಾರ್ಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರ – ರೂ.150
* ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಪಾಸ್ ದರ ರೂ.750
* ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST)
ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರೂ.150
* ಕಾಲೇಜು ಮತ್ತು ಡಿಪ್ಲಮೋ ವಿದ್ಯಾರ್ಥಿಗಳಿಗೆ ರೂ.1050
* ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ಕಾಲೇಜು ಮತ್ತು ಡಿಪ್ಲೋಮೋ ವಿದ್ಯಾರ್ಥಿಗಳಿಗೆ ರೂ.150
* ITI ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ.1550
* ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ITI ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳಿಗೆ ರೂ.160
* ವೃತ್ತಿಪರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ.1550
* ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡದ (ST) ವೃತ್ತಿಪರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ರೂ.150
ಅರ್ಜಿ ಸಲ್ಲಿಸುವ ವಿಧಾನ:-
* https://sevasindhuservices.karnataka.gov.in/ ಈ ಸೇವಾ ಸಿಂಧು ವೆಬ್ಸೈಟ್ ಗೆ ಭೇಟಿ ನೀಡಿ
* ನಿಮ್ಮ ಫೋನ್ ಸಂಖ್ಯೆ ಬಳಸಿಕೊಂಡು Password ರಚಿಸಿ
* ನೋಂದಾಯಿತ ಫೋನ್ ನಿಂದ log in ಆಗಿ, ಎಡಭಾಗದಲ್ಲಿರುವ 3 dot ಕ್ಲಿಕ್ ಮಾಡಿ ಸೇವೆಗಳನ್ನು ಅನ್ವಯಿಸು ಆಯ್ಕೆ ಮಾಡಿ
* search ಬಾರ್ ನಲ್ಲಿ KSRTC ಹುಡುಕಿ ಲಿಂಕ್ ಕ್ಲಿಕ್ ಮಾಡಿ ಅರ್ಜಿ ನಮೂನೆ ಪಡೆಯಿರಿ.
* ಪೂರಕ ದಾಖಲೆಗಳ ಸಂಖ್ಯೆ ವಿವರ ಸಮೇತ ಎಲ್ಲ ಮಾಹಿತಿ ಭರ್ತಿ ಮಾಡಿ, ಶುಲ್ಕ ಪಾವತಿಸಿ ಸಬ್ಮಿಟ್ ಕೊಡಿ ಮತ್ತು ಅರ್ಜಿ ಸಲ್ಲಿಕೆ ಸ್ವೀಕೃತಿ ಪ್ರತಿ ತಪ್ಪದೇ ಪಡೆದುಕೊಳ್ಳಿ , ಇದನ್ನು ಪಡೆದ ಒಂದೆರಡು ದಿನಗಳಲ್ಲಿ ಪಾಸ್ ವಿತರಣಾ ಕೇಂದ್ರ ಅಥವಾ ನಿಮ್ಮ ಶಾಲಾ ಕಾಲೇಜುಗಳಲ್ಲಿ ಪಾಸ್ ಪಡೆಯಿರಿ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:-
* ವಿದ್ಯಾರ್ಥಿಯ ಆಧಾರ್ ಕಾರ್ಡ್
* ಪಾಸ್ ಪೋರ್ಟ್ ಅಳತೆಯ ಫೋಟೋ
* ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಪ್ರಸಕ್ತ ವರ್ಷದಲ್ಲಿ ಶಾಲೆಗೆ ದಾಖಲಾಗಿರುವ ಬಗ್ಗೆ ಶುಲ್ಕ ಪಾವತಿಸಿರುವ ರಸೀದಿ / ಕಾಲೇಜಿನ ಐಡಿ.
* ಕಳೆದ ವರ್ಷದ ಅಂಕಪಟ್ಟಿ
* ಇನ್ನಿತರ ಪ್ರಮುಖ ದಾಖಲೆಗಳು