Free Laptop
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (karnataka school examination and assessment board) 2024ನೇ ಸಾಲಿನ SSLC ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ (Free Laptop) ನೀಡಲು ತಯಾರಿ ನಡಸಿದೆ.
ಈ ಸಂಬ೦ಧ ಲ್ಯಾಪ್‌ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಮುಂದಾಗಿದ್ದು, ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು ಖರೀದಿಗಾಗಿ ನಿಗದಿಪಡಿಸಲಾಗಿದೆ. ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ಟೆಂಡರ್ ಸಲ್ಲಿಕೆಗೆ ಆಗಸ್ಟ್ 21, 2024 ಕೊನೆಯ ದಿನವಾಗಿದೆ.
ಏನಿದು ಉಚಿತ ಲ್ಯಾಪ್‌ಟಾಪ್ ಯೋಜನೆ?
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮೂಲಕ ರಾಜ್ಯ ಸರ್ಕಾರವು ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ 2010ರಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಮೊದಲು ಈ ಯೋಜನೆಯಡಿ ಡೆಸ್ಕ್’ಟಾಪ್‌ಗಳನ್ನು ನೀಡಲಾಗುತ್ತಿತ್ತು.
ಇದೀಗ ಲ್ಯಾಪ್‌ಟಾಪ್ ವಿತರಿಸಲಾಗುತ್ತಿದೆ. ಆರಂಭದಲ್ಲಿ ಜಿಲ್ಲಾ ಹಂತದಲ್ಲಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತಿತ್ತು. ಬಳಿಕ ವಿದ್ಯಾರ್ಥಿಗಳ ಒತ್ತಾಯದಿಂದ 2012ರಿಂದ ಇದನ್ನು ತಾಲ್ಲೂಕು ಮಟ್ಟಕ್ಕೂ ವಿಸ್ತರಿಸಲಾಗಿದೆ. ಕೋವಿಡ್ ಅವಧಿಯಲ್ಲಿ ಯೋಜನೆಗೆ ಸ್ವಲ್ಪ ಹಿನ್ನಡೆಯಾಗಿತ್ತು. ಇದೀಗ 2024ನೇ ಸಾಲಿನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಲು ತಯಾರಿ ನಡೆದಿದೆ.
ಯಾರಿಗೆಲ್ಲ ಉಚಿತ ಲ್ಯಾಪ್‌ಟಾಪ್ ಸಿಗಲಿದೆ?
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ 1, 2 ಹಾಗೂ 3ನೇ ಸ್ಥಾನ ಪಡೆದವರಿಗೆ ಲ್ಯಾಪ್‌ಟಾಪ್ ವಿತರಣೆ ಮಾಡಲಾಗುತ್ತದೆ. ಇವರನ್ನು ಹೊರತುಪಡಿಸಿ ಬ್ಲಾಕ್‌ಮಟ್ಟದಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೂ ಉಚಿತ ಲ್ಯಾಪ್‌ಟಾಪ್ ಸಿಗಲಿದೆ.
ಪ್ರತೀ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿ ಎರಡ್ಮೂರು ತಿಂಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ ವಿತರಿಸಲಾಗುತ್ತದೆ. ರಾಜ್ಯದ ಎಲ್ಲಾ 34 ಶೈಕ್ಷಣಿಕ ಜಿಲ್ಲೆಗಳ ಟಾಪರ್’ಗಳು ಹಾಗೂ ಬ್ಲಾಕ್ ಮಟ್ಟದ ಟಾಪರ್’ಗಳು ಸೇರಿ ಸಾವಿರಾರು ವಿದ್ಯಾರ್ಥಿಗಳು ಲ್ಯಾಪ್’ಟಾಪ್ ಪಡೆಯಲಿದ್ದಾರೆ.
ಈ ಸುದ್ದಿ ಓದಿ:- Ration Card cancellation: ರಾಜ್ಯದಲ್ಲಿ 50 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಆದೇಶ.! ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದಿಯೇ ಚೆಕ್ ಮಾಡಿಕೊಳ್ಳಿ.!
ಸದ್ಯಕ್ಕೆ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಸಂಬ೦ಧಿಸಿದ೦ತೆ 3.96 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಟರ್’ಗೆ ಅರ್ಜಿ ಆಹ್ವಾನಿಸಿದೆ. ಟೆಂಡರ್ ಪ್ರಕ್ರಿಯೆ ಮುಗಿದ ತಕ್ಷಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಸಿಗಲಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಶೀಘ್ರದಲ್ಲಿಯೇ ಲ್ಯಾಪ್‌ಟಾಪ್ ವಿತರಣೆ ಕುರಿತ ಅಧಿಕೃತ ಮಾಹಿತಿ ನೀಡಲಿದೆ.
ಅಗತ್ಯ ದಾಖಲೆಗಳು
– ವಿದ್ಯಾರ್ಥಿಯ ಆಧಾರ್ ಕಾರ್ಡ್(Aadhar Card)
– ಕಾಲೇಜ್ ಐಡಿ(ID)
– ವಿದ್ಯಾರ್ಥಿಯ ಕಾಯಂ ನಿವಾಸ ಪ್ರಮಾಣ ಪತ್ರ
– ಇತ್ತೀಚಿನ ಪಾಸ್ಪೋರ್ಟ್ ಅಳತೆಯ ಫೋಟೋ
– ಶೈಕ್ಷಣಿಕ ವಿವರ
– ಮೊಬೈಲ್ ಸಂಖ್ಯೆ(Mobile Number)
– ಜಿಮೇಲ್ ಅಡ್ರೆಸ್(Gmail address)
ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
– ಯೋಜನೆಯ ಅಧಿಕೃತ ವೆಬ್‌ಸೈಟ್ ಇನ್ನೂ ಲಭ್ಯವಿಲ್ಲ. ಲಿಂಕ್ ಲಭ್ಯವಾದ ನಂತರ, ನೀವು ವೆಬ್‌ಸೈಟ್ ಗೆ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.
ಅಧಿಕೃತ ವೆಬ್‌ಸೈಟ್ ಲಭ್ಯವಾದಾಗ ನೀವು ಏನು ಮಾಡಬೇಕು
– ಮುಂದಿನ ದಿನಗಳಲ್ಲಿ ಅಧಿಕೃತ ವೆಬ್‌ಸೈಟ್ ಅನ್ನು ಅಪ್ಡೇಟ್ ಮಾಡಲಾಗುವುದು ಆಗ ಕೆಳಗಿನ ವೆಬ್ಸೈಟ್ಗೆ ಭೇಟಿ ನೀಡಿ: https://dce.karnataka.gov.in/
– ಅಗತ್ಯವಿರುವ ಮಾಹಿತಿಯನ್ನು ಒದಗಿಸಿ: ಫಾರ್ಮ್‌ನಲ್ಲಿ ನಿಮ್ಮ ವೈಯಕ್ತಿಕ ಮತ್ತು ಶೈಕ್ಷಣಿಕ ವಿವರಗಳನ್ನು ನಮೂದಿಸಿ.
– ಅಗತ್ಯವಿರುವ ದಾಖಲೆಗಳನ್ನು ಅಪ್‌ಲೋಡ್ ಮಾಡಿ: ನಿಮ್ಮ ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ಅಪ್‌ಲೋಡ್ ಮಾಡಿ.