Life insurance
ಶೀಘ್ರದಲ್ಲೇ ರಾಜ್ಯ(State)ದ ಅಂಗನವಾಡಿ ಕಾರ್ಯಕರ್ತೆಯರ (Anganwadi workers) ಬೇಡಿಕೆಯೊಂದು ಈಡೇರಲಿದ್ದು, ಅವರಿಗೆ ನೆಮ್ಮದಿಯ ಸುದ್ದಿ ಕೊಡಲು ಸರ್ಕಾರ ಮುಂದಾಗಿದೆ. ಹೌದು, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಬಹು ದಿನಗಳ ಬೇಡಿಕೆಯನ್ನು ಶೀಘ್ರದಲ್ಲೇ ಈಡೇರಿಸೋದಕ್ಕೆ ಸರ್ಕಾರ(Govt) ಮುಂದಾಗಿದೆ. ಹೌದು, ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರವೇ ಜೀವವಿಮಾ ಯೋಜನೆ (Life insurance plan) ಜಾರಿಗೊಳಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ತಿಳಿಸಿದ್ದಾರೆ.
ಈ ಸುದ್ದಿ ಓದಿ:- Work From Home: SSLC ಪಾಸ್ ಆದವರಿಗೆ ಜಿಯೋ ಸಂಸ್ಥೆಯಿಂದ ವರ್ಕ್ ಫ್ರಮ್ ಹೋಂ ಕೆಲಸ.! ವೇತನ 30000/-
ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರವೇ ವಿಮಾ ಯೋಜನೆ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಹಾಗೂ ಗೌರವ ಧನ ಹೆಚ್ಚಳ ಬಗ್ಗೆ ಕೂಡ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿದ್ದೇನೆ ಎಂದರು.
ಶೀಘ್ರವೇ ಇನ್ಸೂರೆನ್ಸ್ ತೀರ್ಮಾನ
ಅಂಗನವಾಡಿ ಕಾರ್ಯಕರ್ತರಿಗೆ ಇನ್ಯುರೆನ್ಸ್ ನೀಡುವ ಕುರಿತು ಶೀಘ್ರವೇ ತೀರ್ಮಾನಿಸಲಾಗುವುದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಚರ್ಚೆ ನಡೆಸಲಾಗುವುದು. ಗೌರವ ಧನ ಹೆಚ್ಚಳದ ಬಗ್ಗೆಯೂ ಸಿಎಂ ಜೊತೆಗೆ ಚರ್ಚಿಸಿದ್ದು, ಶೀಘ್ರವೇ ಕಾರ್ಯರೂಪಕ್ಕೆ ತರುವ ಕೆಲಸ ಆಗಲಿದೆ ಎಂದು ಅವರು ತಿಳಿಸಿದರು.
ಹೆಣ್ಣಿಗೆ ಹೋರಾಟವೇ ಮನೋಬಲ
ಇನ್ನೂ, ಇದೇ ವೇಳೆ ಮಾತನಾಡಿದ ಅವರು, ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಹೋರಾಟ ಮನೋಭಾವದಿಂದ ನಾನು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿರುವೆ. ಸಮಾಜದಲ್ಲಿ ಮಹಿಳೆಯರಿಗಿಂತ ಪುರುಷರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಗಂಡು ಮಕ್ಕಳಿಗೆ ಸಿಗುವ ಮರ್ಯಾದೆ ಹೆಣ್ಣುಮಕ್ಕಳಿಗೆ ಇರುವುದಿಲ್ಲ. ಇದು ಸಮಾಜದಲ್ಲಿ ಅಲ್ಲ, ಇದು ನಮ್ಮ ಮನೆಗಳಲ್ಲೇ ಅಧಿಕವಾಗಿದೆ. ಹೆಣ್ಣು ಮಕ್ಕಳು ಜೋರಾಗಿ ಮಾತಾಡಿದರೂ ಕಷ್ಟ. ಎಷ್ಟೋ ಕಷ್ಟಗಳನ್ನು ಮೆಟ್ಟಿನಿಂತು ಹೆಣ್ಣು ಸಮಾಜಕ್ಕೆ ಮಾದರಿಯಾಗಿ ಬದುಕುತ್ತಿದ್ದಾಳೆ ಎಂದರು.
ಗುಣಮಟ್ಟದ ಶಿಕ್ಷಣ ನೀಡುವುದೇ ಗುರಿ
ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಅಂಗನವಾಡಿ ಕೊಡುಗೆ ಅಪಾರ
ಸಮಾಜಕ್ಕೆ ಅಂಗನವಾಡಿ ಕೊಡುಗೆ ಅಪಾರ. ಕಳೆದ 50 ವರ್ಷಗಳಿಂದ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯನಿರ್ವಹಿಸಿಕೊಂಡು ಬರುತ್ತಿವೆ. ಇನ್ಮುಂದೆ ಗವರ್ನಮೆಂಟ್ ಮಾಂಟೆಸ್ಸರಿ ಆಗಿ ಬದಲಾಗಲಿದ್ದು, ಇತರ ಶಾಲೆಗಳಿಗಿಂತ ನಮ್ಮ ಅಂಗನವಾಡಿ ಕೇಂದ್ರದ ಮಕ್ಕಳು ಹೆಚ್ಚು ಸುರಕ್ಷಿತವಾಗಿರುತ್ತವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಗವರ್ನಮೆಂಟ್ ಮಾಂಟೆಸ್ಸರಿ ಆರಂಭ
ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಈ ಸುದ್ದಿ ಓದಿ:- Free Education: ಅಂಗನವಾಡಿ ಕೇಂದ್ರಗಳಲ್ಲೇ ಇನ್ಮುಂದೆ ಇಂಗ್ಲಿಷ್ ಮೀಡಿಯಂ LKG, UKG ತರಗತಿ ಆರಂಭ.!
30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.