Farmers
ನೀರು(Water) ಸಕಲ ಜೀವಿಗಳಿಗೂ (All living beings) ಜೀವನೆಲೆ. ಹೀಗಾಗಿ ಈ ಜೀವಾಮೃತವನ್ನು ಹಿತವಾಗಿ, ಮಿತವಾಗಿ ಬಳಸುವ ಪಾಠ ಮನೆಯಲ್ಲಿಯೇ ನಡೆಯಬೇಕು. ಮನೆಯ ಕಿರಿಯರು, ಹಿರಿಯರೆನ್ನದೆ ಪ್ರತಿ ಸದಸ್ಯರೂ ನೀರಿನ ಸದ್ಬಳಕೆ ಮಾಡಿದಲ್ಲಿ ನೀರನ್ನು ದುಡ್ಡುಕೊಟ್ಟು ಕೊಳ್ಳುವ ಪರಿಸ್ಥಿತಿಬಾರದು.
ಹೀಗಾಗಿ, ರೈತರು(Farmers) ತಮ್ಮ ಜಮೀನಿನಲ್ಲಿ ನೀರನ್ನು ಬೆಳೆಗಳಿಗೆ ಬೇಕಾಗುವಷ್ಟು ನೀರನ್ನು ಬಿಡಬಹುದು. ಅದು ಸ್ಪ್ರಿಂಕ್ಲರ್(Sprinkler) ಮೂಲಕ ಸಾಧ್ಯ. ಇದಕ್ಕಾಗಿ ರಾಜ್ಯ ಸರ್ಕಾರವೂ(State Government) ಧನ ಸಹಾಯ(Financial assistance) ನೀಡುತ್ತಿದೆ.
ಹೌದು, 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ(Department of Agriculture) ಮುಖಾಂತರ ಸ್ಪ್ರಿಂಕ್ಲರ್ ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
ಯಾವೆಲ್ಲಾ ದಾಖಲೆಗಳು ಬೇಕು
ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೋಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆ ಅಡಿ ಫಲಾನುಭವಿಗಳಾಗಬಹುದು.
ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.
ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‍ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ರೈತ ಬಾಂಧವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
.