Gruhalakshmi: ಇನ್ನೂ ನಿಮ್ಮ ಖಾತೆಗೆ ʻಗೃಹಲಕ್ಷ್ಮಿʼ ಹಣ ಜಮೆ ಆಗಿಲ್ಲವೇ.? ಇಲ್ಲಿದೆ ಪರಿಹಾರ

Gruhalakshmi

ಕರ್ನಾಟಕ(Karnataka)ದ ಕಾಂಗ್ರೆಸ್ ಸರ್ಕಾರ(Congress government)ದ 5 ಗ್ಯಾರಂಟಿ ಯೋಜನೆ(Guarantee)ಗಳಲ್ಲಿ ಒಂದು ಗೃಹಲಕ್ಷ್ಮಿ ಯೋಜನೆ(Grihalakshmi Yojana) ಕೂಡ ಒಂದು. ಮಹಿಳಾ ಸಬಲೀಕರಣ(Women empowerment)ಕ್ಕೆ ಸರ್ಕಾರ ಕೈಗೊಂಡ ಪ್ರಮುಖ ಯೋಜನೆ ಇದಾಗಿದೆ.

ಆದರೆ, ಕಳೆದ ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯಡಿ ಹಣ ಬ್ಯಾಂಕ್ ಖಾತೆ(Bank account)ಗೆ ಬರುತ್ತಿಲ್ಲ ಎಂಬ ಆರೋಪವಿದೆ. ಇದೇ ವಿಚಾರ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ರಾಜ್ಯ ಸರ್ಕಾರ(State Govt)ದ ವಿರುದ್ಧ ಟೀಕೆಗಳನ್ನು ಮಾಡುತ್ತಿವೆ. ಹಣ ಬರುತ್ತಿಲ್ಲ ಎಂಬುದಕ್ಕೆ ಕೆಲವು ತಾಂತ್ರಿಕ ಕಾರಣಗಳು ಇವೆ.

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾಗಿದೆ. ಮಹಿಳೆಯರ ಸಬಲೀಕರಣಕ್ಕಾಗಿ ಯೋಜನೆಯಡಿ ಸರ್ಕಾರದಿಂದ ಸಹಾಯಧನ ನೀಡಲಾಗುತ್ತದೆ. ಈ ಯೋಜನೆಯಡಿ ಕುಟುಂಬದ ಯಜಮಾನಿ ಮಹಿಳೆಗೆ ಮಾಸಿಕ 2000 ರೂ. ಅವರ ಆಧಾರ್ ಕಾರ್ಡ್(Aadhaar card) ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ನೇರ ಜಮೆ ಮಾಡಲಾಗುತ್ತಿದೆ.

ಈ ಸುದ್ದಿ ಓದಿ:Gruha Jyothi Scheme:‌ ಬಾಡಿಗೆ ಮನೆಯಲ್ಲಿ ವಾಸ ಮಾಡುವವರಿಗೆ ಗುಡ್ ನ್ಯೂಸ್, ಗೃಹಜ್ಯೋತಿ ಯೋಜನೆ ಬಗ್ಗೆ ಬಿಗ್ ಅಪ್ಡೇಟ್.!

ಪ್ರಸ್ತುತ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ನಗದು ಜಮೆಯಾಗುತ್ತಿಲ್ಲ ಎಂದು ಮಾಹಿತಿಗಳು ಬರತ್ತಿವೆ. ಆದಾಯ ತೆರಿಗೆ ಮತ್ತು ಜಿಎಸ್‍ಟಿ ಪಾವತಿದಾರರೆಂದು ಅರ್ಜಿ ಸ್ಥಿತಿಯಲ್ಲಿ ಕಂಡು ಬಂದಿರುತ್ತದೆ. ಈ ಕುರಿತು ಮಹಿಳೆಯರು ಗೊಂದಲಗೊಂಡಿದ್ದಾರೆ.

ಸಮಸ್ಯೆ ಪರಿಹಾರ ಹೇಗೆ?

ಅಧಿಕಾರಿಗಳೂ ಈ ಸಮಸ್ಯೆಯನ್ನು ಗಮನಿಸಿದ್ದು, ಪರಿಹಾರವನ್ನು ಹೇಳಿದ್ದಾರೆ. ಆದಾಯ ತೆರಿಗೆ ಮತ್ತು ಜಿಎಸ್‍ಟಿ ಪಾವತಿದಾರರು ಹೊರತುಪಡಿಸಿ ಐಟಿ ಮತ್ತು ಜಿಎಸ್‍ಟಿಯಡಿ ಸೇರ್ಪಡೆಯಾಗದ ಫಲಾನುಭವಿಗಳಿಗೆ ನಗದು ಪಾವತಿಯಾಗದೇ ಸಮಸ್ಯೆ ಇದ್ದಲ್ಲಿ ಅಂತಹ ಫಲಾನುಭವಿಗಳು ತಮ್ಮ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

ಈ ವೇಳೆ ದಾಖಲೆಗಳಾದ ಪಡಿತರ ಚೀಟಿ ಸಂಖ್ಯೆ, ಪಾನ್ ನಂಬರ್, ಆದಾಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ವಾಣಿಜ್ಯ ತೆರಿಗೆ ಇಲಾಖೆಯಿಂದ ನೀಡಿದ ಪತ್ರ, ನೋಟರಿಯಿಂದ ಪಡೆದ ಪತ್ರ, ಆಡಿಟರ್‌ ಅವರಿಂದ ಪಡೆದ ಪತ್ರ, ಅರ್ಜಿದಾರರ ಮನವಿ ಪತ್ರವನ್ನು ನೀಡಬೇಕು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕ ಮಾಡಿ ಎಂದು ಮನವಿ ಮಾಡಿದ್ದಾರೆ.

ಎರಡು ತಿಂಗಳ ಹಣ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣವನ್ನು ಜಮೆ ಮಾಡಲಾಗುತ್ತದೆ ಎಂದು ಖಾತೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ತಾಂತ್ರಿಕ ಕಾರಣಗಳಿಂದ 2-3 ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಮಾಸಿಕ ತಲಾ 2 ಸಾವಿರ ರೂ. ಮನೆಯ ಯಜಮಾನಿಯ ಬ್ಯಾಂಕ್ ಖಾತೆಗೆ ಜಮೆ ಆಗಿಲ್ಲ. ಆಗಸ್ಟ್ 6ರಿಂದಲೇ ಜೂನ್, ಜುಲೈ ತಿಂಗಳ ಹಣ ಜಮೆ ಆಗಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು.

ಈ ಸುದ್ದಿ ಓದಿ:Toll ವಾಹನ ಮಾಲೀಕರು ಇನ್ಮುಂದೆ ಟೋಲ್‌ಗಳಲ್ಲಿ ಹಣ ಕಟ್ಟಬೇಡಿ.! ಹೊಸ ರೂಲ್ಸ್

ಜೂನ್ ತಿಂಗಳ ಹಣ ಬಿಡುಗಡೆ ಪ್ರಕ್ರಿಯೆ ಆರಂಭವಾಗಿದೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರಗಿ, ಬೀದರ್, ವಿಜಯಪುರ, ಬಳ್ಳಾರಿ, ಗದಗ, ಬಾಗಲಕೋಟೆ ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಪಾವತಿಯಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಹಣ ಬಿಡುಗಡೆ ವಿಳಂಬದ ಬಗ್ಗೆ ಮಾತನಾಡಿರುವ ಸಚಿವರು, “ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಹಣ ಜೂನ್ ಮತ್ತು ಜುಲೈ ತಿಂಗಳು ವಿಳಂಬವಾಗಿತ್ತು. ಹಣಕಾಸು ಇಲಾಖೆ ಹಣ ಬಿಡುಗಡೆಗೆ ಸಮ್ಮತಿಸಿದ್ದು, ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದರು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment