Gruha Arogya Scheme: ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ ವೈದ್ಯರು.! ಚಿಕಿತ್ಸೆ ಜೊತೆ ಸಿಗಲಿದೆ ಉಚಿತ ಔಷಧಿ

Gruha Arogya Scheme

ಗೃಹ ಲಕ್ಷ್ಮಿ (Gruha Lakshmi), ಗೃಹ ಜ್ಯೋತಿ (Gruha jyothi) ಹೀಗೆ ಗ್ಯಾರಂಟಿ(guarantee) ಮೇಲೆ ಗ್ಯಾರಂಟಿಗಳನ್ನು ಕೊಟ್ಟು ಉಚಿತ ಯೋಜನೆ(Free Scheme)ಗಳನ್ನು ಜಾರಿ ಮಾಡಿದ ಕಾಂಗ್ರೆಸ್ ಸರ್ಕಾರ(Congress Govt) ಇದೀಗ ಮತ್ತೊಂದು ಗ್ಯಾರಂಟಿ ಮಾದರಿಯ ಯೋಜನೆ ಜಾರಿ ಮಾಡಲು ಮುಂದಾಗಿದೆ. ಜನರಿಗೆ ಆರೋಗ್ಯ ಭಾಗ್ಯ ನೀಡಲು ಆರೋಗ್ಯ ಇಲಾಖೆ(Department of Health) ಮುಂದಾಗಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಈ ಸುದ್ದಿ ಓದಿ:-SBI FD scheme: SBI ಬ್ಯಾಂಕ್ ನಲ್ಲಿ ಅಕೌಂಟ್ ಇದ್ದವರಿಗೆ ಗುಡ್ ನ್ಯೂಸ್.!

ಆರೋಗ್ಯವೇ ಭಾಗ್ಯ ಎಂದು ಎಷ್ಟೇ ಹೇಳಿದರೂ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಅಷ್ಟು ಸುಲಭವೇನಲ್ಲ. ಅದರಲ್ಲಿಯೂ ಬಿಪಿ, ಶುಗರ್ ಎಂದರೆ ಸಾಮಾನ್ಯ ಎಂದು ನಿರ್ಲಕ್ಷ್ಯ ಮಾಡುವವರ ಸಂಖ್ಯೆ ಹೆಚ್ಚಳ ಆಗಿದೆ. ಈ ಕಾರಣಕ್ಕಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ (Gruha Arogya Scheme) ಜಾರಿ ಮಾಡಲು ಆರೋಗ್ಯ ಇಲಾಖೆ ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಕೆ ಮಾಡಲಾಗಿದ್ದು, ಸಚಿವ ಸಂಪುಟದಲ್ಲಿ ಈಗಾಗಲೇ ಅನುಮೋದನೆ ದೊರೆತಿದೆ. ಮುಂದಿನ ತಿಂಗಳಿನಿಂದ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ.

WhatsApp Group Join Now
Telegram Group Join Now

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರ, ಮನೆಬಾಗಿಲಿಗೆ ಔಷಧ ಪೆಟ್ಟಿಗೆ ವಿತರಿಸುವ ಮಹತ್ವಾಕಾಂಕ್ಷಿ ‘ಗೃಹ ಆರೋಗ್ಯ ಯೋಜನೆ’ ಜಾರಿಗೆ ತಯಾರಿ ನಡೆಸುತ್ತಿದೆ.

ಈ ಸುದ್ದಿ ಓದಿ:- Old Phone Sale: ನಿಮ್ಮ ಹಳೆಯ ಫೋನ್‌ ಅನ್ನು ಬೇರೆಯವರಿಗೆ ಮಾರುವ ಮುನ್ನ ಈ ವಿಷಯ ತಿಳಿದಿರಲಿ.!

ಕೋವಿಡ್ ಬಳಿಕ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಒಂದಲ್ಲ ಒಂದು ವೈರಸ್ ಹಾವಳಿ ಶುರುವಾಗಿದ್ದು, ಜನರ ಜೀವ ತಗೆಯುತ್ತಿವೆ. ಅದರಲ್ಲೂ ಕೋಮಾರ್ಬಿಟಿಸ್ ರೋಗಿಗಳು ಸಾಂಕ್ರಾಮಿಕ ಖಾಯಿಲೆಗಳಿಂದ ಪರದಾಡುವಂತಾಗಿದೆ. ಹೆಚ್ಚುತ್ತಿರುವ ಖಾಯಿಲೆಗಳಿಂದ ಜನರ ಆರೋಗ್ಯದ ಸಮಸ್ಯೆಗಳು ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯು ಬಿಪಿ, ಶುಗರ್, ಕ್ಯಾನ್ಸರ್ ಜೊತೆಗೆ ಕೋಮಾರ್ಬಿಟಿಸ್ ಹೊಂದಿರುವ ರೋಗಿಗಳ ಪಟ್ಟಿ ಮಾಡಿದ್ದು ಇವರಿಗೆಲ್ಲ ಮನೆ ಬಾಗಿಲಿನಲ್ಲಿಯೇ ಚಿಕಿತ್ಸೆ ಹಾಗೂ ಔಷಧ ನೀಡುವ ಯೋಜನೆಗೆ ಆರೋಗ್ಯ ಇಲಾಖೆ ಮುಂದಾಗಿದೆ.

ಯಾರಿಗೆಲ್ಲ ಮನೆಯಲ್ಲೇ ಚಿಕಿತ್ಸೆ?

ಹೃದಯ, ಕಿಡ್ನಿ, ಕ್ಯಾನ್ಸರ್, ಬಿಪಿ, ಮಧುಮೇಹ, ಇಸಿಜಿ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ತಪಾಸಣೆ ನಡೆಸಿ ಆಯ್ದ ಸಮಸ್ಯೆಗಳಿಗೆ ಅಗತ್ಯವಿರುವಷ್ಟು ಔಷಧಗಳನ್ನು ಸ್ಥಳದಲ್ಲೇ ಉಚಿತವಾಗಿ ನೀಡಲು ಇಲಾಖೆ ಮುಂದಾಗಿದೆ. ಮುಂದಿನ ತಿಂಗಳಿನಿಂದ ರಾಜ್ಯದ ಜನರಿಗೆ ಮನೆ ಮನೆಗೆ ಕ್ಲಿನಿಕ್ ಸೇವೆ ನೀಡಲು ಇಲಾಖೆ ಯೋಜನೆ ಹಾಕಿಕೊಂಡಿದೆ. ಚಿಕಿತ್ಸೆ ಜೊತೆ ಉಚಿತ ಔಷಧಿಯೂ ಮನೆ ಬಾಗಿಲಿಗೆ ಬರಲಿದೆ.

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಯೋಜನೆ ಜಾರಿ

ಮುಂದಿನ ತಿಂಗಳು ರಾಜಧಾನಿ ಬೆಂಗಳೂರು ಸೇರಿದ್ದಂತೆ ರಾಜ್ಯದಲ್ಲಿ ‘ಗೃಹ ಆರೋಗ್ಯ’ ಯೋಜನೆ ಜಾರಿಗೆ ಆರೋಗ್ಯ ಇಲಾಖೆ ಮುಂದಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗೃಹ ಆರೋಗ್ಯ ಯೋಜನೆ ಜಾರಿ ತರಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ. ಮುಂದಿನ ತಿಂಗಳು ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗೂಂಡುರಾವ್ ತಿಳಿಸಿದ್ದಾರೆ.

ಪ್ರತ್ಯೇಕ ಘಟಕ, ವೈದ್ಯರ ನೇಮಕಾತಿ

‘ಗೃಹ ಆರೋಗ್ಯ’ ಯೋಜನೆ ಜಾರಿಗೆಂದೇ ಮೊಬೈಲ್ ಯೂನಿಟ್, ಪ್ರತ್ಯೇಕ ಸಿಬ್ಬಂದಿ, ವೈದ್ಯರ ನೇಮಕಾತಿಗೆ ಇಲಾಖೆ ಮುಂದಾಗಿದೆ. ಆರಂಭದಲ್ಲಿಯೇ ಖಾಯಿಲೆ ಪತ್ತೆ ಹಚ್ಚಿ ಚಿಕಿತ್ಸೆ ನೀಡುವ ಮೂಲಕ ಬಡ ಜನರ ಸಾವಿನ ಪ್ರಮಾಣ ಕಡಿಮೆ ಮಾಡಿ ಉತ್ತಮ ಆರೋಗ್ಯ ಇರುವಂತೆ ನೋಡಿಕೊಳ್ಳಯವ ಉದ್ದೇಶದಿಂದ ಈ ಯೋಜನೆಗೆ ಜಾರಿಗೆ ಇಲಾಖೆ ಮುಂದಾಗಿದೆ.

ಮೊದಲ ಬಾರಿಗೆ ನೀಡಿದ ಮಾತ್ರೆಗಳು ಖಾಲಿಯಾದ ಬಳಿಕ ಮತ್ತೆ ಮೂರು ತಿಂಗಳಿಗೆ ಆಗುವಷ್ಟು ಮಾತ್ರೆಗಳನ್ನು ತಲುಪಿಸಲಾಗುತ್ತದೆ. 30 ವರ್ಷ ಮೇಲ್ಪಟ್ಟವರು ಮಾತ್ರೆಗಳನ್ನು ಪಡೆಯಲು ಅರ್ಹರು. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡಕ್ಕೆ ತಲಾ ಮೂರು ಮಾದರಿ ಮಾತ್ರೆಗಳನ್ನು ಸರ್ಕಾರ ಗುರುತಿಸಿದೆ. ಅವುಗಳನ್ನು ಮಾತ್ರವೇ ನೀಡಲಾಗುವುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment