Gruha Jyothi Scheme:‌ ಬಾಡಿಗೆ ಮನೆಯಲ್ಲಿ ವಾಸ ಮಾಡುವವರಿಗೆ ಗುಡ್ ನ್ಯೂಸ್, ಗೃಹಜ್ಯೋತಿ ಯೋಜನೆ ಬಗ್ಗೆ ಬಿಗ್ ಅಪ್ಡೇಟ್.!

Gruha Jyothi

ಮನೆ ಬದಲಾಯಿಸಿದ(Change of house) ನಂತರ ಗೃಹ ಜ್ಯೋತಿ ಯೋಜನೆ(Griha Jyoti Scheme)ಯ ಲಾಭ ಪಡೆಯುವುದು ಹೇಗೆ ಎಂಬ ಗೊಂದಲ ಸಾಕಷ್ಟು ಜನರನ್ನು ಕಾಡಿತ್ತು. ಇದೀಗ ಯೋಜನೆ ಜಾರಿಯಾದ 1 ವರ್ಷದ ಬಳಿಕ ಬೆಸ್ಕಾಂ(Bescom) ಇದಕ್ಕೆ ಹೊಸ ದಾರಿ ಹುಡುಕಿದೆ. ಹೇಗೆ ಅಂತೀರಾ ಇಲ್ಲಿದೆ ನೋಡಿ ಮಾಹಿತಿ.!

ಮನೆ ಬದಲಾವಣೆ ಮಾಡಿದ ನಂತರ ಗೃಹಜ್ಯೋತಿ ಯೋಜನೆಯ ಲಾಭ ಪಡೆದುಕೊಳ್ಳಲು ಹಳೆ ಮನೆಯ ಆರ್.ಆರ್. ಸಂಖ್ಯೆ(RR No)ಯನ್ನು ಡಿ -ಲಿಂಕ್(D-Link) ಮಾಡುವ ಸೌಲಭ್ಯವನ್ನು ಇಂಧನ ಇಲಾಖೆ(Department of Energy) ವತಿಯಿಂದ ಕಲ್ಪಿಸಲಾಗಿದೆ.

WhatsApp Group Join Now
Telegram Group Join Now

ಫಲಾನುಭವಿಗಳು ವಿವಿಧ ಕಾರಣಗಳಿಂದ ಮನೆ ಬದಲಾವಣೆ ಸಂದರ್ಭದಲ್ಲಿ ಹಳೆ ಖಾತೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿ ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ಗೃಹಜ್ಯೋತಿ ಯೋಜನೆಯ ಲಾಭ ಪಡೆಯಬಹುದು. ಗ್ರಾಹಕರು ಸೇವಾ ಸಿಂಧು ಕರ್ನಾಟಕ ವೆಬ್ಸೈಟ್ (Seva Sindhu Karnataka website) ನಲ್ಲಿ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡಿಕೊಳ್ಳಬಹುದಾಗಿದೆ.

ಈ ಸುದ್ದಿ ಓದಿ:- Health Department Recruitment: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 14,000 ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಪಾಸ್ ಆದವರಿಗೆ ಅವಕಾಶ.!

ಗೃಹ ಜ್ಯೋತಿಗೆ ಒಂದು ವರ್ಷ ಸಂದ ಸಂದರ್ಭದಲ್ಲಿ ಇಂಧನ ಇಲಾಖೆ ಈ ಪ್ರಕಟಣೆ ಹೊರಡಿಸಿದೆ. ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?

ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌ .ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಬೇಕು.

ಗೃಹಜ್ಯೋತಿಗೆ ವರ್ಷದ ಸಂಭ್ರಮ

– 2024ರ ಜೂನ್‌ವರೆಗೆ ಒಟ್ಟು ನೋಂದಣಿ-1.67 ಕೋಟಿ
– ಒಟ್ಟು ಫಲಾನುಭವಿಗಳು-1.56 ಕೋಟಿ
– 2023 ಆಗಸ್ಟ್ ರಿಂದ 2024 ಜೂನ್‌ವರೆಗೆ ಸರ್ಕಾರ ಬಿಡುಗಡೆ ಮಾಡಿರುವ ಒಟ್ಟ ಸಬ್ಸಿಡಿ-8,239 ಕೋಟಿ ರೂ.

“ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿ:- Gruhalakshmi: ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಗಿಫ್ಟ್.!

ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ” ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

“ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್‌ ಬೀಳಗಿ ಹೇಳಿದ್ದಾರೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment