Gruhalakshmi
ಗೃಹಲಕ್ಷ್ಮಿ ಯೋಜನೆ(GRUHALAKSHMI SCHEME)ಯಡಿ ಮನೆ ಯಜಮಾನಿಯರಿಗೆ ಖಾತೆ(Account)ಗೆ ಎರಡು ಸಾವಿರ ರೂಪಾಯಿ ಜಮಾ ಮಾಡಲಾಗುತ್ತಿದೆ. ಈ ಯೋಜನೆಯ ಫಲಾನುಭವಿಗಳಿಗೆ (beneficiaries) ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್(Minister Lakshmi Hebbalkar) ಮತ್ತೊಂದು ಸಿಹಿ ಸುದ್ದಿ ನೀಡಿದ್ದಾರೆ. ಹೌದು, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ರೀಲ್ಸ್(Reels) ಮಾಡಿ ಬಹುಮಾನ(reward) ಗೆಲ್ಲಲು ಅವಕಾಶ ಕಲ್ಪಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ(Congress Govt)ದ ಮಹತ್ವಾಕಾಂಕ್ಷೆ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆ(GRUHALAKSHMI SCHEME)ಯು ಜಾರಿಗೆ ಬಂದು ಇಲ್ಲಿಗೆ ಒಂದು ವರ್ಷವಾಗಿದೆ. ಈ ಸಂದರ್ಭದಲ್ಲಿ ಕುಟುಂಬದ ಎಲ್ಲ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ಯಜಮಾನಿಯರಿಗೆ ಬಹುಮಾನದ ಆಫರ್ ಅನ್ನು ಸಹ ಘೋಷಿಸಿದ್ದಾರೆ.
ಇಲ್ಲಿಯವರೆಗೆ ಗೃಹಲಕ್ಷ್ಮಿ ಫಲಾನುಭವಿಗಳಾದ ತಮ್ಮ ಜೀವನದಲ್ಲಿ ಏನೆಲ್ಲ ಬದಲಾವಣೆಯನ್ನು ಈ ಒಂದು ವರ್ಷದಲ್ಲಿ ತಂದಿದೆ ಎನ್ನುವುದನ್ನು ಯಜಮಾನಿಯರು ಹಂಚಿಕೊಳ್ಳುವಂತೆ ಸಚಿವರು ಕೋರಿದ್ದಾರೆ. ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಒಂದು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಎಲ್ಲಾ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶುಭಾಶಯ ಮತ್ತು ಅಭಿನಂದನೆ ಸಲ್ಲಿಸಿದ್ದಾರೆ.
ರೀಲ್ಸ್ ಮಾಡಲು ಕರೆ
ಹೌದು, ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರ ಜೀವನದಲ್ಲಿ ಕಳೆದ ಒಂದು ವರ್ಷದಲ್ಲಿ ಏನೆಲ್ಲ ಬದಲಾವಣೆ ಆಗಿದೆ ಎನ್ನುವುದನ್ನು ಹಂಚಿಕೊಳ್ಳಲು ಮನವಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಯುಟ್ಯೂಬ್, ಫೇಸ್ಬುಕ್, ಇನ್ ಸ್ಟಾಗ್ರಾಂಗಳಲ್ಲಿ ರೀಲ್ಸ್ ಮಾಡಿ ಹಂಚಿಕೊಳ್ಳಲು ತಿಳಿಸಿದ್ದಾರೆ. ಯಾವ ಯಜಮಾನಿಯರು ಮಾಡಿದ ರೀಲ್ಸ್ ಹೆಚ್ಚು ವೀಕ್ಷಣೆ ಪಡೆಯುತ್ತದೆಯೋ ಅಂತ ಯಜಮಾನಿಯರಿಗೆ ಬಹುಮಾನ ಘೋಷಿಸಿದ್ದಾರೆ.
ಸೆಪ್ಟೆಂಬರ್ 30ರವರೆಗೆ ಯಜಮಾನಿಯರು ತಮ್ಮ ರೀಲ್ಸ್ ಗಳನ್ನು ಯೂಟ್ಯೂಬ್, ಫೇಸ್ಬುಕ್, ಇನ್ ಸ್ಟಾಗ್ರಾಂಗಳಲ್ಲಿ ಹಂಚಿಕೊಳ್ಳಬೇಕಿದೆ. ಅತಿ ಹೆಚ್ಚು ವೀಕ್ಷಣೆ ಪಡೆದ ವಿಡಿಯೋ ಮಾಡಿದ ಯಜಮಾನಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಒಂದು ಬಹುಮಾನ ನೀಡಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅತಿ ಹೆಚ್ಚು ಪಡೆದ ಮೊದಲ 50 ಯಜಮಾನಿಯರಿಗೆ ವೈಯಕ್ತಿಕವಾಗಿ ಬಹುಮಾನ ನೀಡುವುದಾಗಿ ತಿಳಿಸಿದ್ದಾರೆ.
ಮೊದಲ 50 ಯಜಮಾನಿಯರ ರೀಲ್ಸ್ ಹಾದಿಯನ್ನು ಎದುರು ನೋಡುತ್ತಿದ್ದೇನೆ. ಈ ಒಂದು ಗೃಹಲಕ್ಷ್ಮಿ ಯೋಜನೆಯಿಂದ ಜೀವನದಲ್ಲಿ ಆದ ಬದಲಾವಣೆಯನ್ನು ನಮ್ಮೆಲ್ಲ ಕರ್ನಾಟಕದ ಜನರ ಮುಂದೆ ಹಂಚಿಕೊಳ್ಳಬೇಕೆಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಎಲ್ಲ ಮಹಿಳೆಯರಲ್ಲಿ ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯರಿಂದ ಸಂತಸ ವ್ಯಕ್ತ
ಇನ್ನೂ, ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ವರ್ಷ ಪೂರೈಸಿದೆ. ಈ ಹಿನ್ನೆಲೆ ಸಂತಸ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಜನೆಯ ಫಲಾನುಭವಿಗಳ ಕಥೆಗಳನ್ನು ಹಂಚಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನಾಡಿನ ನನ್ನ ಅಕ್ಕತಂಗಿಯರ, ತಾಯಂದಿರ ಕುಟುಂಬ ನಿರ್ವಹಣೆಯ ಹೊರೆಯನ್ನು ತಗ್ಗಿಸಿ, ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ರೂಪಿಸಿದ ಗೃಹಲಕ್ಷ್ಮಿ ಯೋಜನೆ ವರ್ಷ ಪೂರೈಸಿದೆ.
ಈ ಸಂದರ್ಭದಲ್ಲಿ ಯೋಜನೆಯ ಪೂರ್ಣ ಸದುಪಯೋಗ ಪಡೆದು ನವ ಉತ್ಸಾಹದಿಂದ ಹೊಸ ಬದುಕಿನತ್ತ ಹೆಜ್ಜೆಹಾಕುತ್ತಿರುವ ಫಲಾನುಭವಿ ಮಹಿಳೆಯರ ಯಶೋಗಾಥೆಯಿವು. ಬೆರಳೆಣಿಕೆಯಷ್ಟು ಮಾತ್ರ ಬೆಳೆಕಿಗೆ ಬಂದಿವೆ, ಸುದ್ದಿಯಾಗದ ಲಕ್ಷಾಂತರ ಕತೆಗಳಿವೆ. ಈ ಎಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.
2023ರ ಆ.30 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತ್ತು. ಪ್ರತಿ ತಿಂಗಳು ₹2 ಸಾವಿರ ಹಣವನ್ನು ಕುಟುಂಬದ ಯಜಮಾನಿಗೆ ನೀಡುವ ಯೋಜನೆ ಇದಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆ ಜಾರಿಗೆ ತಂದಿರುವುದಾಗಿ ಸರ್ಕಾರ ಹೇಳಿದೆ.