Gruhalakshmi
ಈ ಬಾರಿಯ ವರಮಹಾಲಕ್ಷ್ಮಿ ಹಬ್ಬ(Varamahalakshmi festival)ಕ್ಕೆ ಮಹಿಳೆ(woman)ಯರಿಗೆ ರಾಜ್ಯ ಸರ್ಕಾರ(State Govt)ದಿಂದ ಮಹಿಳೆಯರ ಖಾತೆಗೆ ಇಂದು ಅಥವಾ ನಾಳೆ ಗೃಹಲಕ್ಷ್ಮಿ ಯೋಜನೆಯ ಹಣ(Grilahakshmi Yojana money) ಜಮೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಇದರೊಂದಿಗೆ ಕಳೆದ ಎರಡು ತಿಂಗಳಿನಿಂದ ಹಣಕ್ಕಾಗಿ ಕಾಯುತ್ತಿದ್ದ ಮಹಿಳೆಯರಿಗೆ ನೆಮ್ಮದಿ ಸಿಕ್ಕಿದೆ. ಹೌದು, ನಾಳೆಯೊಳಗೆ 26.65 ಲಕ್ಷ ಅರ್ಹ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಮಾಹಿತಿ ನೀಡಿದ್ದಾರೆ.
ಈ ಜಿಲ್ಲೆಯವರಿಗೆ ಮೊದಲ ಹಂತದಲ್ಲಿ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ
ರಾಜ್ಯದ ಎಲ್ಲಾ ಜಿಲ್ಲೆಯ ಅರ್ಹ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಹಂತ ಹಂತವಾಗಿ ಹಣ ಜಮಾ ಮಾಡಲಾಗುತ್ತಿದ್ದು, ಮೊದಲ ಹಂತದಲ್ಲಿ 533 ಕೋಟಿ ರೂ. ಪಾವತಿಯಾಗಲಿದೆ. ಮೊದಲ ಹಂತದಲ್ಲಿ ಬೆಳಗಾವಿ, ಕಲಬುರ್ಗಿ, ಬೀದರ್, ವಿಜಯಪುರ, ಬಳ್ಳಾರಿ, ರಾಯಚೂರು, ಗದಗ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಯಾದಗಿರಿ, ಚಿತ್ರದುರ್ಗ, ಬೆಂಗಳೂರು, ಕೋಲಾರ ಜಿಲ್ಲೆಗಳ ಫಲಾನುಭವಿಗಳಿಗೆ ಹಣ ಬಿಡುಗಡೆಯಾಗಲಿದೆ.
ಉಳಿದ ಜಿಲ್ಲೆಯ ಫಲಾನುಭವಿಗಳಿಗೆ ಎರಡನೇ ಹಂತ ಅಂದರೆ ಇನ್ನೊಂದರೆಡು ದಿನಗಳ ಒಳಗಾಗಿ ಎಲ್ಲಾ ಜಿಲ್ಲೆಯ ಅರ್ಜಿದಾರರಿಗೆ ಈ ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿದ್ದ ರೂ 2,000 ಅರ್ಥಿಕ ನೆರವು ಜಮಾ ಅಗಲಿದೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.
ಈ ಸುದ್ದಿ ಓದಿ:- Health Department Recruitment: ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 14,000 ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಪಾಸ್ ಆದವರಿಗೆ ಅವಕಾಶ.!
ಇನ್ನೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡು ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುತ್ತಿರುವ ಮಹಿಳೆಯರಿಗೂ ಇನ್ಮುಂದೆ ಗೃಹ ಲಕ್ಷ್ಮಿ ಹಣ ಬರುವುದಿಲ್ಲ ಎನ್ನಲಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಮುಖ್ಯವಾಗಿ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿದ್ದು, ಬಿಪಿಎಲ್ ಕಾರ್ಡ್ ರದ್ದಾದ್ದರೆ ಗೃಹಲಕ್ಷ್ಮಿ ಹಣವೂ ರದ್ದಾಗಲಿದೆ ಎನ್ನಲಾಗಿದೆ.
ಮಂಡ್ಯದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ” ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ ಮಾಡಲಾಗುವುದು. ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್‌ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ” ಎಂದರು.
ಎರಡು ತಿಂಗಳಿಂದ ಬಾಕಿ
ಗೃಹಲಕ್ಷ್ಮೀ ಯೋಜನೆಯ ಮಾಸಿಕ 2000 ರೂ. ಜೂನ್, ಜುಲೈ ತಿಂಗಳಲ್ಲಿ ಬಿಡುಗಡೆಯಾಗಿಲ್ಲ. ಈ ಹಿನ್ನೆಲೆ ಯೋಜನೆ ಫಲಾನುಭವಿಗಳು ಆತಂಕಕ್ಕೆ ಒಳಗಾಗಿದ್ದರು. ಮಹಿಳೆಯರು ಪದೇ ಪದೇ ಬ್ಯಾಂಕ್‌ಗೆ ತೆರಳಿ ಹಣ ಜಮೆಯಾಗಿದೆಯೋ ಇಲ್ಲವೋ ಎಂದು ನೋಡಿಕೊಂಡು ಬರುತ್ತಿದ್ದರು. ಮೇ ಬಳಿಕ ಖಾತೆ ಹಣ ಬಂದಿಲ್ಲ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದರು.
ಹಣ ಬಂದಿದೆಯೋ ಇಲ್ವೋ ಚೆಕ್ ಮಾಡೋದೇಗೆ?
ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಬಂದ ಕೂಡಲೇ ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದ ಮೊಬೈಲ್ ನಂಬರ್‌ಗೆ ಸಂದೇಶ ಬರುತ್ತದೆ. ಮಾತ್ರವಲ್ಲದೇ ಇಲಾಖೆಯಿಂದಲೂ ಕೂಡ ಹಣ ಜಮೆಯಾಗಿದೆ ಎಂದು ಮೆಸೇಜ್ ಕಳುಹಿಸಲಾಗುತ್ತದೆ.
ಇಲ್ಲವಾದಲ್ಲಿ, ಗೃಹಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿ ಹಣ ಪಡೆಯುತ್ತಿರುವ ಫಲಾನುಭವಿಗಳು ಎರಡು ವಿಧಾನ ಅನುಸರಿಸಿ ತಮ್ಮ ತಮ್ಮ ಖಾತೆಗೆ ಹಣ ಜಮಾ ಅಗಿರುವ ಮಾಹಿತಿಯನ್ನು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಈ ಸುದ್ದಿ ಓದಿ:- QR code: ದೇಶಾದ್ಯಂತ ಏಕರೂಪದ QR code ಜಾರಿ.! DL & RC ಹೊಂದಿರುವವರಿಗೆ ಕೇಂದ್ರ ಸರ್ಕಾರದಿಂದ ಹೊಸ ನಿಯಮ.!
ವಿಧಾನ-1: ನೀವು ಯಾವ ಬ್ಯಾಂಕ್ ನಲ್ಲಿ ಅಕೌಂಟ್ ಹೊಂದಿರುತ್ತಿರೋ ಆ ಬ್ಯಾಂಕ್ ನ ಬ್ಯಾಲೆನ್ಸ್ ಚೆಕ್ ಮಾಡುವ ಸಹಾಯವಾಣಿಗೆ ಮಿಸ್ ಕಾಲ್ ಮಾಡಿ ನಿಮಗೆ ಈ ಯೋಜನೆಯಡಿ ಹಣ ಜಮಾ ಅಗಿರುವ ಮಾಹಿತಿಯನ್ನು ಚೆಕ್ ಮಾಡಿಕೊಳ್ಳಬಹುದು.
ವಿಧಾನ-2: ಈ ಲಿಂಕ್ ಮೇಲೆ ಕ್ಲಿಕ್ ಮಾಡಿ DBT karnataka gruhalakshmi status ಡಿಬಿಟಿ ಕರ್ನಾಟಕ ಮೊಬೈಲ್ ಅಪ್ಲಿಕೇಶನ್ ಮೂಲಕ ಹೇಗೆ ಗೃಹಲಕ್ಷ್ಮಿ ಯೋಜನೆಯಡಿ ಹಣ ಜಮಾ ಅಗಿರುವುದನ್ನು ಚೆಕ್ ಮಾಡಿಕೊಳ್ಳುವುದು ಎನ್ನುವ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ನಿಮ್ಮ ಮೊಬೈಲ್ ನಲ್ಲೇ ಹಣ ಜಮಾ ವಿವರವನ್ನು ಪಡೆದುಕೊಳ್ಳಬಹುದು.