Gruhalakshmi Update: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಬಿಗ್ ಶಾಕ್, ಇನ್ಮುಂದೆ ಇಂತವರಿಗೆ ಸಿಗಲ್ಲ 2000 ಹಣ.!

Gruhalakshmi

ಗೃಹಲಕ್ಷ್ಮಿ ಯೋಜನೆ(Grilahakshmi Yojana)ಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ. ಹಣ(money) ಜಮೆಯಾಗುತ್ತಿದೆ. ಆದರೀಗ ಇದುವರೆಗೂ ಈ ಯೋಜನೆಯ ಫಲಾನುಭವಿಗಳಾದ ಕೆಲವು ಮಹಿಳೆ(Women)ಯರಿಗೆ ಶಾಕ್ ಎದುರಾಗಿದೆ. ಯಾಕೆಂದರೆ, ಅವರನ್ನು ಈ ಯೋಜನೆಯಿಂದ ಹೊರಗಿಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ಇಂದಿನ ಈ ಲೇಖನದಲ್ಲಿ ಇನ್ನು ಮುಂದೆ ಯಾರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಏಕೆ ಬರುವುದಿಲ್ಲ?, ಏಕೆ ಬರುವುದಿಲ್ಲ? ಎಂಬ ಎಲ್ಲಾ ಮುಖ್ಯ ಕಾರಣಗಳನ್ನು ಈ ತಿಳಿಸಲಾಗಿದೆ. ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ ಸರ್ಕಾರವು ಇನ್ನು ಮುಂದೆ ಇಂಥವರ ಖಾತೆಗೆ ಗೃಹಲಕ್ಷ್ಮಿ ಯೋಜನೆ(Grilahakshmi Yojana)ಯ ಹಣವನ್ನು ಹಾಕುವುದಿಲ್ಲ ಏಕೆ ಆಗುವುದಿಲ್ಲ ಎಂಬ ಎಲ್ಲಾ ಕಾರಣಗಳನ್ನು ನೋಡೋಣ.

WhatsApp Group Join Now
Telegram Group Join Now

ಸರ್ಕಾರವು ಈಗಾಗಲೇ ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ ಮಹಿಳೆಯರಿಗಾಗಲಿ ಇನ್ನಿತರ ಎಲ್ಲಾರಿಗೂ ಕೂಡ ಅನುಕೂಲ ವಾಗುವಂತಹ ಎಲ್ಲ ಯೋಜನೆಗಳನ್ನು ಜಾರಿಗೆ ತಂದಿದೆ ಆದರೆ ಸರ್ಕಾರವು ಈಗ ತಂದಿರುವಂತಹ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಅತೀ ಹೆಚ್ಚಿನ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ ಜೊತೆಗೆ ಎಲ್ಲಿಲ್ಲದ ಸದ್ದನ್ನು ಕೂಡ ಈ ಯೋಜನೆ ಮಾಡಿದೆ.

ಇಷ್ಟೊಂದು ಈ ಯೋಜನೆ ಫೇಮಸ್ ಆಗಿದೆ ಎಂದು ಹೇಳಬಹುದು ಏಕೆಂದರೆ ಈ ಯೋಜನೆಯ ಮುಖಾಂತರ ಮಹಿಳೆಯರಿಗೆ ಪ್ರತಿ ತಿಂಗಳು ಸಾವಿರ ರೂಪಾಯಿಯನ್ನು ಉಚಿತವಾಗಿ ನೀಡಲಾಗುತ್ತಿದೆ ಈ ವಿಷಯ ನಿಮಗೆ ಗೊತ್ತಿದೆ, ಸ್ನೇಹಿತರೆ ಇನ್ನು ಮುಂದೆ ಗೃಹಲಕ್ಷ್ಮಿ ಯೋಜನೆಯ ಹಣ ಕೆಲವರಿಗೆ ಬರುವುದಿಲ್ಲ.

ಗೃಹಲಕ್ಷ್ಮೀ ಯೋಜನೆಯಡಿ ಮಾರ್ಚ್ ನಂತರ ಹೊಸದಾಗಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಈ ಅರ್ಜಿಗಳನ್ನೂ ಪರಿಗಣಿಸಲು ಸರಕಾರ ನಿರ್ಧರಿಸಿದ್ದು ಈ ನಡುವೆ ಕೆಲವು ಯಜಮಾನಿಯರಿಗೆ ಶಾಕ್ ಕೊಡಲು ಕೂಡ ಸರ್ಕಾರ ಚಿಂತನೆ ನಡೆಸಿದೆ. ಹೌದು, ಆದಾಯ ತೆರಿಗೆ ಪಾವತಿದಾರರ ಮನೆಯ ಯಜಮಾನಿಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ.

ಆದರೂ ಆದಾಯ ತೆರಿಗೆ ಪಾವತಿಸುತ್ತಿರುವ ಲಕ್ಷಾಂತರ ಮಂದಿ ಅನರ್ಹರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಸದ್ಯ ಇಂತಹ 1.78 ಲಕ್ಷ ಮಂದಿಯನ್ನು ಪತ್ತೆ ಮಾಡಲಾಗಿದೆ. ಹೀಗೆ ಪತ್ತೆಯಾದವರಲ್ಲಿ ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿ ಪೈಕಿ 6 ಸಾವಿರಕ್ಕೂ ಹೆಚ್ಚು ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಇದೀಗ ಇವರನ್ನು ಯೋಜನೆಗೆ ಪರಿಗಣಿಸಲಾಗುವುದು. ದೃಢೀಕರಣ ಪತ್ರ ಸಲ್ಲಿಸಿದವರಿಗೆ 2 ಸಾವಿರ ರೂ. ನೀಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆಗೆ ಮುನ್ನ ಮತ್ತು ನಂತರ ಅರ್ಜಿ ಸಲ್ಲಿಸಿದವರನ್ನೂ ಗೃಹಕ್ಷ್ಮಿ ಯೋಜನೆಗೆ ಪರಿಗಣಿಸಲಾಗುತ್ತಿದೆ. ಈ ಅವಧಿಯಲ್ಲಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಯೋಜನೆಗೆ ಬಿಪಿಎಲ್‌, ಎಪಿಎಲ್‌ ಪಡಿತರ ಹೊಂದಿರುವವರು ಎಂಬ ಭೇದ-ಭಾವವಿಲ್ಲದೆ ಎರಡೂ ವರ್ಗದ ಕಾರ್ಡ್‌ದಾರರನ್ನು ಪರಿಗಣಿಸಲಾಗುತ್ತದೆ.

“ಗೃಹ ಲಕ್ಷ್ಮೀ” ಯೋಜನೆಯ ಉದ್ದೇಶ.?

* ಆರ್ಥಿಕವಾಗಿ ಸಬಲೀಕರಣ: ರಾಜ್ಯದ ಮಹಿಳೆಯರಯನ್ನು ಆರ್ಥಿಕವಾಗಿ ಸಬಲೀಕರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಈ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.
* ಕುಟುಂಬದ ನಿರ್ವಹಣೆಗೆ ಸಹಾಯ: ಪ್ರತಿ ಕುಟುಂಬದ ನಿರ್ವಹಣೆಯಲ್ಲಿ ಮನೆ ಒಡತಿಯ ಪಾತ್ರ ಬಹು ಮುಖ್ಯವಾಗಿರುತ್ತದೆ. ಆದ್ದರಿಂದ ಮನೆ ಯಜಮಾನಿ ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆ ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ.2000/- ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ” ಯನ್ನು ರೂಪಿಸಲಾಗಿದೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment