Gruhalakshmi Yojana:
ಕಾಂಗ್ರೆಸ್ ಸರ್ಕಾರ(Congress Govt)ದ ಪಂಚ ಗ್ಯಾರಂಟಿ ಯೋಜನೆ(5 Guarantee scheme)ಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ(Grihalakshmi Yojana) ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದನವಾಗಿದೆ. ನಮ್ಮ ಸರ್ಕಾರ ಇರುವ ತನಕ ಈ ಯೋಜನೆ ನಿಲ್ಲಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಡಿಯೋ (Video) ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಲಕ್ಷ್ಮಿಯರಿಗೆ ಬೆಲೆಯೇರಿಕೆಯ ಬಿಸಿ ತಟ್ಟದಿರಲಿ ಎಂಬ ಸದುದ್ದೇಶದಿಂದ ನಾವು ಜಾರಿಗೊಳಿಸಿರುವ ಗೃಹಲಕ್ಷ್ಮಿ ಯೋಜನೆ ಇಂದು ಬಹಳಷ್ಟು ಕುಟುಂಬಗಳ ಪಾಲಿಗೆ ಅಕ್ಷರಶಃ ವರದಾನವಾಗಿದೆ. ಗೃಹಲಕ್ಷ್ಮಿಯ ಹಣ ಮಕ್ಕಳ ವಿದ್ಯಾಭ್ಯಾಸ(Children’s education), ಮನೆಗೆ ದಿನಸಿ(Grocery for home), ಹಬ್ಬಕ್ಕೆ ಬಟ್ಟೆ, ಆಸ್ಪತ್ರೆ ಖರ್ಚು ವೆಚ್ಚ(Hospital expenses) ಭರಿಸಲು ಬಳಕೆಯಾದ ಬಹಳಷ್ಟು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಕಂಡಿದ್ದೆ.
ಅವೆಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಂತಿದ್ದವು. ಆದರೆ, ಬೆಳಗಾವಿ ಜಿಲ್ಲೆಯ ರಾಯಬಾಗ್ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೂಟಿ ಎಂಬ ಹಿರಿಯ ಜೀವವೊಂದು ತನಗೆ ಬಂದ ಗೃಹಲಕ್ಷ್ಮಿಯ ಹಣದಲ್ಲಿ ಊರಿನ ಜನಕ್ಕೆಲ್ಲ ಹೋಳಿಗೆ ಊಟ ಹಾಕಿ, ಮುತ್ತೈದೆಯರಿಗೆ ಮಡಿಲು ತುಂಬಿರುವ ವೀಡಿಯೋವನ್ನು ನೋಡಿದೆ.
ಈ ಸುದ್ದಿ ಓದಿ:- BSNL Offer : BSNL ಗ್ರಾಹಕರಿಗೆ ಗುಡ್ ನ್ಯೂಸ್: 160 ದಿನಗಳ ವ್ಯಾಲಿಡಿಟಿಯೊಂದಿಗೆ ಪ್ರತಿದಿನ 2GB ಡೇಟಾ ಫುಲ್ ಫ್ರೀ.!
ಆ ತಾಯಿ ಸಿದ್ದರಾಮಯ್ಯನಿಗೆ ಒಳಿತಾಗಲೆಂದು ಇದನ್ನು ಮಾಡುತ್ತಿದ್ದೇನೆಂದು ಹೇಳಿದ್ದು, ಆ ಮಾತನ್ನು ಕೇಳಿ ನನಗೆ ಮನಸ್ಸು ತುಂಬಿಬಂತು. ಇಂತಹ ಲಕ್ಷಾಂತರ ತಾಯಂದಿರ, ಅಕ್ಕ ತಂಗಿಯರ ಆಶೀರ್ವಾದ, ಹಾರೈಕೆ ನನ್ನ ಜೊತೆಗಿದೆ. ಈ ಪ್ರೀತಿ, ಅಕ್ಕರೆಗಳೇ ನನ್ನ ಬಲ.
ಗೃಹಲಕ್ಷ್ಮಿ ಯೋಜನೆ ನಿಲ್ಲಬಾರದು, ಇದು ಇನ್ನಷ್ಟು ಬಡವರ ಹೊಟ್ಟೆತುಂಬಿಸಲಿ ಎಂದು ಅಕ್ಕಾತಾಯಿ ಲಂಗೂಟಿ ಅವರು ಮನವಿ ಮಾಡಿದ್ದಾರೆ, ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡಲ್ಲ, ನಮ್ಮ ಸರ್ಕಾರ ಇರುವವರೆಗೆ ಗೃಹಲಕ್ಷ್ಮಿಯ ಹಣ ಬಡವರ ಮನೆ ಸೇರುತ್ತದೆ ಎಂಬುದನ್ನು ಈ ಮೂಲಕ ಆ ಹಿರಿಯ ಜೀವಕ್ಕೆ ಮಾತ್ರವಲ್ಲ ನಾಡಿನ ಪ್ರತಿಯೊಬ್ಬರಿಗೂ ಖಾತ್ರಿಪಡಿಸುತ್ತಿದ್ದೇನೆ.
ನಮ್ಮ ಮಣ್ಣಿನ ಗುಣವೇ ಹಾಗೆ, ತನಗೆ ಸಿಕ್ಕಿದ್ದನ್ನು ಹಂಚಿ ತಿನ್ನುವ ಔದಾರ್ಯ, ಇನ್ನೊಬ್ಬರ ಒಳಿತು ಬಯಸುವ ನಿಸ್ವಾರ್ಥ ಭಾವವಿದೆ. ಇಂತಹವರ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನನ್ನ ಭಾಗ್ಯವೇ ಸರಿ. ಹೀಗಿದ್ದರೂ ಅಕ್ಕಾತಾಯಿ ಲಗೋಟಿ ಅವರಲ್ಲಿ ಒಂದು ಸವಿನಯ ವಿನಂತಿ ಇದೆ. “ಊರಿಗೆ ಹೋಳಿಗೆ ಊಟ ಹಾಕುವುದು ಒಳ್ಳೆಯ ಗುಣವೇ ಸರಿ.
ಈ ಸುದ್ದಿ ಓದಿ:- Railway Recruitment: ರೈಲ್ವೆ ಇಲಾಖೆಯಲ್ಲಿ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ.! ಸಂಬಳ 35,400/-
ಆದರೆ ಗೃಹಲಕ್ಷ್ಮಿ ಯೋಜನೆಯ ಹಣದ ಮೇಲಿನ ಮೊದಲ ಹಕ್ಕು ಸ್ವಂತ ಕುಟುಂಬದ್ದಾಗಿದೆ. ಅಕ್ಕಾತಾಯಿಯಂತಹ ಒಳ್ಳೆಯ ಮನಸ್ಸಿನ ಸೋದರಿಯರು ಈ ಹಣವನ್ನು ಮೊದಲು ತಮ್ಮ ಕುಟುಂಬದ ಸದಸ್ಯರಿಗೆ ಆರೋಗ್ಯಕರವಾದ ಊಟ-ತಿಂಡಿ ಮತ್ತು ಮಕ್ಕಳ ಶಿಕ್ಷಣ ನೀಡಲು ಬಳಸಿದಾಗ ಮಾತ್ರ ಯೋಜನೆಯ ಉದ್ದೇಶ ಈಡೇರಿದಂತಾಗುತ್ತದೆ ಎಂದಿದ್ದಾರೆ.
ಇನ್ನೂ, ನೀವೇನಾದರು ಗೃಹ ಲಕ್ಷ್ಮಿ ಯೋಜನೆಗೆ ಇನ್ನೂ ಅರ್ಜಿ ಸಲ್ಲಿಸಿಲ್ಲ ಅಂದ್ರೆ, ಈ ಕೂಡಲೇ ನೀವೂ ಅರ್ಜಿ ಸಲ್ಲಿಸಿ ಇದರ ಲಾಭ ಪಡೆಯಿರಿ.
ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
– ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ಕರ್ನಾಟಕ ಒನ್, ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
– ಅಥವಾ ಸರ್ಕಾರ ನೇಮಿಸಿರುವ ಸ್ವಯಂಸೇವಕ “ಪ್ರಜಾಪ್ರತಿನಿಧಿಗಳು” ಮನೆ ಮನೆಗೆ ತೆರಳಿ ಉಚಿತವಾಗಿ ನೋಂದಣಿ ಮಾಡಿಕೊಳ್ಳುತ್ತಾರೆ.
– ಗೃಹಲಕ್ಷ್ಮಿ ಯೋಜನೆ ಅರ್ಜಿಯನ್ನು ಉಚಿತವಾಗಿ ನೋಂದಣಿ ಮಾಡಲಾಗುತ್ತದೆ. ಯಾವುದೇ ರೀತಿಯ ಶುಲ್ಕ ಇರುವುದಿಲ್ಲ.
– ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ದುಡ್ಡು ಜಮಾ ಆಗುತ್ತದೆ. ಅಥವಾ ಫಲಾನುಭವಿಯ ಬೇರೆ ಬ್ಯಾಂಕ್ ಖಾತೆಯ ಪಾಸ್‌ಬುಕ್ ನೀಡಿದರೆ ಆ ಬ್ಯಾಂಕ್ ಖಾತೆಗೆ ಹಣ ಪಡೆಯಬಹುದು.