Gruhalakshmi
ರಾಜ್ಯ ಸರ್ಕಾರ(State Govt)ದ ಗ್ಯಾರಂಟಿ ಯೋಜನೆ(Guarantee scheme)ಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ(Grihalakshmi Yojana)ಯ ಜೂನ್ ತಿಂಗಳ 2,000 ರೂ. ಖಾತೆಗೆ ಜಮಾ ಆಗದ ಯಜಮಾನಿಯರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ಮುಖ್ಯ ದಾಖಲೆ(Records)ಗಳನ್ನು ಸರಿಪಡಿಸಿದ್ರೆ ನಿಮ್ಮ ಖಾತೆಗೂ ಹಣ (money) ಬರಲಿದೆ.
ಹೌದು, ಸಾಕಷ್ಟು ಜನ ಬ್ಯಾಂಕ್ ನಲ್ಲಿ ಖಾತೆ (Bank Account) ಹೊಂದಿದ್ದರು ಕೂಡ ಆಧಾರ ಸೀಡಿಂಗ್ (Aadhar seeding) ಮಾಡಿಕೊಂಡಿಲ್ಲ. ಹೀಗಾಗಿ, ಅವರಿಗೆ ಹಣ ಬರುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡರೂ ಸಹಾಯಧನ ಪಾವತಿಯಾಗದ ಫಲಾನುಭವಿಗಳು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ (E-KYC) ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್‌ಗಳಲ್ಲಿ ಪರಿಹರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಈ ಸುದ್ದಿ ಓದಿ:- Railway Recruitment: 10th, & ITI ಪಾಸಾದವರಿಗೆ ಯಾವುದೇ ಪರೀಕ್ಷೆ ಇಲ್ಲದೇ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶ.!
ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಅರ್ಜಿ ಸಲ್ಲಿಸಿದ್ರೂ ಈವರೆಗೆ ಹಣ ಬಾರದಿದ್ದರೆ, ತಕ್ಷಣವೇ ನಿಮ್ಮ ದಾಖಲೆಗಳಲ್ಲಿ ಲೋಪದೋಷಗಳಿದ್ದರೆ ಸರಿಪಡಿಸಿಕೊಳ್ಳಿ. ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ಆಧಾರ್ ಕಾರ್ಡ್ ಜೊತೆಗೆ ರೇಷನ್ ಕಾರ್ಡ್ ಲಿಂಕ್ ಆಗದೇ ಇದ್ರೆ, ಇಲ್ಲಾ ಆಧಾರ್ ಸೀಡಿಂಗ್ ಮಾಡಿಸದೇ ಇದ್ರೆ ಕೂಡಲೇ ಈ ಕೆಲಸವನ್ನು ಮಾಡಿಸಿಕೊಳ್ಳಿ.
ನಿಮ್ಮ ಬ್ಯಾಂಕ್ ಖಾತೆಯಲ್ಲಿ ಯಾವುದೇ ದೋಷಗಳಿದ್ದಲ್ಲಿ, ಕೂಡಲೇ ಬ್ಯಾಂಕ್‌ನಲ್ಲಿ ಹೊಸದಾಗಿ ಖಾತೆಯನ್ನು ತೆರೆಯುವ ಮೂಲಕ ಆ ಬ್ಯಾಂಕ್ ಖಾತೆಯನ್ನು ಗೃಹಲಕ್ಷ್ಮೀ ಯೋಜನೆಗೆ ಲಿಂಕ್ ಮಾಡಿದ್ರೆ ನೀವು ಬಾಕಿ ಉಳಿದಿರುವ ಎಲ್ಲಾ ಮೊತ್ತ ನಿಮ್ಮ ಹೊಸ ಖಾತೆಗೆ ಜಮಾ ಅಗಲಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಎಲ್ಲಿ? ಹೇಗೆ?
– ಗೃಹಜ್ಯೋತಿ ಯೋಜನೆಯಂತೆ ಗೃಹಲಕ್ಷ್ಮಿ ಯೋಜನೆಗೆ ನೀವೇ ಸ್ವತಃ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ. ಸರ್ಕಾರ ನಿಗದಿ ಪಡಿಸಿದ ಗ್ರಾಮ ಒನ್, ಕರ್ನಾಟಕ ಒನ್ ಬೆಂಗಳೂರು ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ನಿಮ್ಮ ಹತ್ತಿರದಲ್ಲಿರುವ ಈ ಯಾವುದಾದರೂ ಒಂದು ಕೇಂದ್ರಕ್ಕೆ ತೆರಳಿ ನೀವು ಅರ್ಜಿ ಸಲ್ಲಿಸಬಹುದು.
– ಹಾಗಂತ ನೀವು ಯಾವಾಗ ಬೇಕಂದ್ರೆ ಅವಾಗ ಹೋಗಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ರೇಷನ್ ಕಾರ್ಡ್‌ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ, ಹಾಗೂ ನೋಂದಣಿ ಮಾಡಿಸುವ ಸ್ಥಳದ ವಿವರವನ್ನು ತಿಳಿಸಲಾಗುವುದು. ಆನಂತರವೇ ನೀವು ಅರ್ಜಿ ಸಲ್ಲಿಸಬೇಕಾಗುತ್ತದೆ.
ಈ ಸುದ್ದಿ ಓದಿ:- HESCOM: ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವ 338 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಅರ್ಜಿ ಸಲ್ಲಿಸಿ.!
– ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಹೋಗಲು ಸಾಧ್ಯವಾಗದೇ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ದಿನಗಳಲ್ಲಿ ಸಂಜೆ 5ರಿಂದ 7ರವರೆಗೆ ಮಾತ್ರ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.
– ಇದಲ್ಲದೇ ಪರ್ಯಾಯವಾಗಿ, ಸರ್ಕಾರದಿಂದ ಗುರುತಿಸಲ್ಪಟ್ಟ ಪ್ರಜಾಪ್ರತಿನಿಧಿ ನಿಮ್ಮ ಮನೆಗೆ ಭೇಟಿ ನೀಡಬಹುದು. ಅವರಿಂದಲೂ ನೋಂದಣಿ ಮಾಡಿಸಿಕೊಳ್ಳಬಹುದು. ಅವರು ಮೊಬೈಲ್ ಆ್ಯಪ್ ಮೂಲಕ ಅರ್ಜಿ ಭರ್ತಿ ಮಾಡಿ ಕಳುಹಿಸುತ್ತಾರೆ.
– ನಿಗದಿತ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಂಡಾಗ ಮಂಜೂರಾತಿ ಪತ್ರವನ್ನು ನೀಡಲಾಗುವುದು. ಪ್ರಜಾಪ್ರತಿನಿಧೀ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗೆ ತಲುಪಲಿದೆ. ಇದರ ಜೊತೆಗೆ ನಿಮ್ಮ ಮೊಬೈಲ್ ಸಂಖ್ಯೆಗೂ ಸಂದೇಶ ಬರಲಿದೆ.
ಈ ಸುದ್ದಿ ಓದಿ:- Canara: ಕೆನರಾ ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ.!
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಯೋಜನೆಯಡಿ ನೋಂದಾಯಿಸಲು ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಮತ್ತು ಬ್ಯಾಂಕ್ ಖಾತೆಯ ಪಾಸ್ ಬುಕ್ ಮಾಹಿತಿ ನೀಡಬೇಕು. ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಪರ್ಯಾಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲೆ ಆ ಬ್ಯಾಂಕ್ ಖಾತೆಯ ಪಾಸ್ ಬುಕ್ ನೀಡಬೇಕು.
ಯಾರು ಅರ್ಹರು?
ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾಗುವವರು ಯಜಮಾನಿಯ ಹೆಸರು ಪಡಿತರ ಚೀಟಿಯಲ್ಲಿ ಇರಬೇಕು. ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿದ್ದರೆ ಅವರು ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಸಹಾಯವಾಣಿ
ನೊಂದಣಿಗೆ ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳಕ್ಕೆ ಸಂಬಂಧಪಟ್ಟಂತೆ ನೀವು ಸಹಾಯವಾಣಿ ಸಂಖ್ಯೆ 1902 ಕರೆ ಮಾಡಿ ತಿಳಿದುಕೊಳ್ಳಬಹುದು. ಇಲ್ಲದೇ ಇದ್ದರೆ 8147500500 ಗೆ ಎಸ್‌ಎಂಎಸ್ ಅಥವಾ ವಾಟ್ಸ್ ಆಪ್ ಮೂಲಕ ಸಂದೇಶ ಕಳುಹಿಸಿ ವಿವರ ಪಡೆದುಕೊಳ್ಳಬಹುದು.