Guarantee Schemes: ಗೃಹಲಕ್ಷ್ಮಿ-ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ಸರ್ಕಾರದ ಬಂಪರ್‌ ಘೋಷಣೆ.!

Gruhalakshmi

ನಾವು ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ‌. ಅವರಿಗೆ ಉಪಯೋಗವಾಗುವ ಗ್ಯಾರಂಟಿ ಯೋಜನೆ(Guarantee Scheme)ಗಳನ್ನು ಕೆಲವರು ಟೀಕಿಸಿದರು. ರಾಜ್ಯದ 4.5 ಕೋಟಿ ಜನರಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಈ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.

ಈ ಮೂಲಕ ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಹೌದು, ಸದ್ಯ ರಾಜ್ಯ(State)ದಲ್ಲಿ ಉಚಿತ ಗ್ಯಾರಂಟಿ ಯೋಜನೆ(Free guarantee Scheme)ಗಳು ಜಾರಿಯಲ್ಲಿವೆ. ರಾಜ್ಯದ ಜನತೆ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ.

WhatsApp Group Join Now
Telegram Group Join Now
ಈ ಸುದ್ದಿ ಓದಿ:- Link Aadhaar: ಜಮೀನಿನಲ್ಲಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೂ ಹೊಸ ಆದೇಶ.!

ಇನ್ನು ಸರ್ಕಾರದ ಯೋಜನೆಗಳ ಲಾಭ ಜನರಿಗೆ ತಲುಪುತ್ತಿದ್ದರು ಜನಸಾಮಾನ್ಯರಿಗೆ ಬೆಲೆ ಏರಿಕೆ ಪರಿಸ್ಥಿತಿ ಎದುರಿಸುವುದು ಕಷ್ಟವಾಗುತ್ತಿದೆ ಎನ್ನಬಹುದು. ಒಂದೆಡೆ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವ ಸರ್ಕಾರ, ಅಗತ್ಯ ವಸ್ತುಗಳ ಬೆಲೆ ಏರಿಸಿ ಅದರಿಂದ ಯೋಜನೆಗಳ ಅನುಷ್ಠಾನಕ್ಕಾಗಿ ಹಣ ಹೊಂದಿಸುತ್ತಿದೆ ಎನ್ನುವ ಬಗ್ಗೆ ಜನರು ದೂರುತ್ತಿದ್ದಾರೆ. ಇನ್ನು ಬೆಲೆ ಏರಿಕೆ ಮಾಡುವ ಬದಲು ಉಚಿತ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ ಎಂದು ಜನರ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ.

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಫಲಾನುಭವಿಗಳಿಗೆ ಬಂಪರ್ ಗುಡ್ ನ್ಯೂಸ್

ಇನ್ನು ರಾಜ್ಯದಲ್ಲಿ ಜಾರಿಯಲ್ಲಿರುವ ಉಚಿತ ಗ್ಯಾರಂಟಿ ಯೋಜನೆಗಳು ರಾಜ್ಯದ ಆರ್ಥಿಕ ಪರಿಸ್ಥಿಯನ್ನು ಹದೆಗೆಡಿಸುತ್ತಿದೆ ಎಂದು ವಿರೋಧ ಪಕ್ಷದವರು ಸರ್ಕಾರವನ್ನು ದೂರುತ್ತಿದ್ದಾರೆ. ಪ್ರತಿ ವರ್ಷ ಉಚಿತ ಗ್ಯಾರಂಟಿ ಅನುಷ್ಠಾನಕ್ಕೆ 56 ಸಾವಿರ ಕೋಟಿ ಹಣವನ್ನು ಸರ್ಕಾರ ಖರ್ಚು ಮಾಡುತ್ತಿದೆ. ಈ ಹಣದ ವೆಚ್ಚ ಭರಿಸುವುದಕ್ಕೆ ಸರ್ಕಾರಕ್ಕೆ ಕಷ್ಟವಾಗುತ್ತಿದೆ ಈ ಹಿನ್ನಲೆ ರಾಜ್ಯದಲ್ಲಿ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿದೆ.

ಇದರ ಬೆನ್ನಲ್ಲೇ ಉಚಿತ ಗ್ಯಾರಂಟಿ ಯೋಜನೆಗಳು ಕೂಡ ಬಂದ್ ಆಗುತ್ತವೆ ಎನ್ನುವ ಮಾತುಗಳು ಕೇಳಿ ಬಂದಿವು. ಇದರಿಂದ ಉಚಿತ ಗ್ಯಾರಂಟಿ ಪಡೆಯುವವರು ಬೇಸರಗೊಂಡಿದ್ದರು. ಆದರೆ, ಸ್ವತಃ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿ ಯೋಜನೆಗಳು ಬಂದ್ ಆಗುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಮೂಲಕ ಉಚಿತ ಗ್ಯಾರಂಟಿ ಪಡೆಯುವ ಜನರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಸರ್ಕಾರದ ಘೋಷಣೆ

ಇನ್ನು ರಾಜ್ಯದಲ್ಲಿ ಈಗಾಗಲೇ ಅನೇಕ ವಸ್ತುಗಳ ಬೆಲೆಯಲ್ಲೂ ರಾಜ್ಯ ಸರ್ಕಾರ ಹೆಚ್ಚಿಸಿದೆ. ಪೆಟ್ರೋಲ್- ಡೀಸೆಲ್, ಹಾಲಿನ ದರ, ತರಕಾರಿಗಳ ದರ, ಮದ್ಯಪಾನದ ದರ ಸೇರಿ ಅನೇಕ ವಸ್ತುಗಳ ದರ ಏರಿಕೆಯಾಗಿದೆ. ದರ ಏರಿಕೆಯ ವಿರುದ್ಧ ಜನಸಾಮಾನ್ಯರು ಆಕ್ರೋಶ ಹೊರಹಾಕುತ್ತಿದ್ದಾರೆ. ಉಚಿತ ಗ್ಯಾರಂಟಿಗಳನು ನಿಲ್ಲಿಸಿ ಬೆಲೆ ಏರಿಕೆಗೆ ಬ್ರೇಕ್ ಹಾಕಿ ಎನ್ನುವ ಮನವಿ ಸರ್ಕಾರ ಮುಂದಿದೆ ಎನ್ನಬಹುದು.

ಆದಾಗ್ಯೂ, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವವರೆಗೆ ಉಚಿತ ಗ್ಯಾರಂಟಿ ಯೋಜನೆಗಳು ರದ್ದಾಗುವುದಿಲ್ಲ ಎಂದು ಸರ್ಕಾರ ತನ್ನ ನಿಲುವು ತೋರಿಸುತ್ತಿದೆ. ಇನ್ನು ರಾಜ್ಯ ಸರ್ಕಾರ ಬೆಲೆ ಏರಿಕೆ ಹಾಗೂ ಉಚಿತ ಗ್ಯಾರಂಟಿ ಯೋಜನೆಗಳ ಬಗ್ಗೆ ಯಾವ ರೀತಿ ನಿರ್ಧಾರ ಕೈಗೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

ಈ ಸುದ್ದಿ ಓದಿ:- Anganavadi Recruitment: ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆಸಕ್ತರು ಅರ್ಜಿ ಸಲ್ಲಿಸಿ.!

ಇನ್ನೂ, ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ಸರ್ಕಾರದಿಂದ ರಾಜ್ಯದ ಬಡ ಕುಟುಂಬಗಳಿಗೆ ಒಂದು ಪ್ರಮುಖ ಯೋಜನೆಯಾಗಿದೆ. ಈ ಯೋಜನೆಯು ಫಲಾನುಭವಿಗಳ ಆರ್ಥಿಕ ಸಬಲೀಕರಣಕ್ಕೆ ಸಹಾಯ ಮಾಡುತ್ತದೆ. ಫಲಾನುಭವಿಗಳು ತಮ್ಮ Aadhaar Card ನ್ನು ಯೋಜನೆಯೊಂದಿಗೆ ಜೋಡಿಸಿರುವುದು ಕಡ್ಡಾಯವಾಗಿದೆ. ಯಾವುದೇ ಸಮಸ್ಯೆಗಳಿದ್ದರೆ, ಫಲಾನುಭವಿಗಳು ಇದಕ್ಕೆ ಸಂಬಂಧಿಸಿ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment