Guest Lecturer Recruitment: ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ ಸಂಬಳ 40,000/-

 

Guest Lecturer Recruitment

ಕಾಲೇಜು ಶಿಕ್ಷಣ ಇಲಾಖೆ(Department of College Education)ಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ(Guest Lecturer Recruitment)ಕ್ಕೆ ಅಧಿಸೂಚನೆ(Notification) ಹೊರಡಿಸಲಾಗಿದೆ.

WhatsApp Group Join Now
Telegram Group Join Now

ಅರ್ಜಿ(Application) ಸಲ್ಲಿಕೆ ಈಗಾಗಲೇ ಆರಂಭಗೊಂಡಿದ್ದು, ಸೆಪ್ಟೆಂಬರ್ 7 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. 15 ವರ್ಷಗಳಿಗೂ ಹೆಚ್ಚು ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದಂತ ಅನುಭವ, UGC ನಿಗದಿತ ವಿದ್ಯಾರ್ಹತೆ(Eligibility) ಹೊಂದಿರುವವರಿಗೆ 40,000 ವರೆಗೆ ವೇತನ ಸಿಗಲಿದೆ.

ಈ ಕುರಿತಂತೆ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ(Department of College and Technical Education)ಯ ಆಯುಕ್ತರು ಪತ್ರಿಕಾ ಪ್ರಕಟಣೆ(Press release)ಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಶೈಕ್ಷಣಿಕ ಸಾಲಿನಲ್ಲಿ ಇಲಾಖಾ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ)

ಈ ಸುದ್ದಿ ಓದಿ:- Indian Bank Recruitment:- ಇಂಡಿಯನ್ ಬ್ಯಾಂಕ್ ನೇಮಕಾತಿ ಆಸಕ್ತರು ಅರ್ಜಿ ಹಾಕಿ.!

ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕನುಗುಣವಾಗಿ ಅತಿಥಿ ಉಪನ್ಯಾಸಕರನ್ನು (ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಒಳಗೊಂಡಂತೆ) ಆನ್‌ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುವ ಸಂಬಂಧ ಈ ಕೆಳಕಂಡಂತೆ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುವುದು ಎಂದಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 31-08-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07-09-2024 ಆಗಿದೆ. ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ದಿನಾಂಕ 08-09-2024ರಂದು ಪ್ರಕಟಿಸಲಾಗುತ್ತದೆ. ಅರ್ಜಿಯಲ್ಲಿ ಏನಾದರೂ ಎಡಿಟ್ ಮಾಡುವುದಿದ್ದರೇ ಸೆ.9 ಮತ್ತು 10ರಂದು ಅವಕಾಶ ನೀಡಲಾಗುತ್ತಿದೆ.

ಕಾರ್ಯಭಾರವನ್ನು ಸೆ.11, 2024ರಂದು ಪ್ರಕಟಿಸಲಾಗುತ್ತದೆ. ಮೆರಿಟ್ ಪಟ್ಟಿಯನ್ನು ಕಾಲೇಜು ಆಯ್ಕೆ ಕೌನ್ಸಿಲಿಂಗ್ ನಡೆಸುವ ದಿನಾಂಕ 17-09-2024 ಆಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು
www.dce.karnataka.gov.in ಗೆ ಭೇಟಿ ನೀಡಿ. ಅಲ್ಲದೇ ಹೆಚ್ಚಿನ ಮಾಹಿತಿಯನ್ನು ಇದೇ ಲಿಂಕ್ ನಲ್ಲಿ ಪಡೆಯಬಹುದಾಗಿದೆ.

ಈ ಸುದ್ದಿ ಓದಿ:- EPFO: PF ಅಕೌಂಟ್ ಇರುವ ಉದ್ಯೋಗಿಗಳಿಗೆ ಸಿಗಲಿದೆ 7 ಲಕ್ಷ.!
ಗೌರವಧನದ ಮೊತ್ತ

– 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ -35,000/-
– 5 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ – 31,000/-
– 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ – 38,000/-

– 5 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 10 ವರ್ಷಕ್ಕಿಂತ ಕಡಿಮೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ -34,000/-
– 10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ -39,000/-

ಈ ಸುದ್ದಿ ಓದಿ:- TRAI New Rules: ಇನ್ಮುಂದೆ ಈ ತಪ್ಪು ಮಾಡಿದ್ರೆ ಬಂದ್ ಆಗಲಿದೆ ನಿಮ್ಮ SIM ಕಾರ್ಡ್.!

– 10 ವರ್ಷ ಹಾಗೂ ಅದಕ್ಕಿಂತ ಹೆಚ್ಚಿನ ಮತ್ತು 15 ವರ್ಷಕ್ಕಿಂತ ಕಡಿಮೆ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ಹೊಂದಿಲ್ಲದವರಿಗೆ – 39,000/-
– 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ – 40,000/-
– 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸಿರುವ ಹಾಗೂ ಯುಜಿಸಿ ನಿಗಧಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ – 36,000/-

– ಅತಿಥಿ ಉಪನ್ಯಾಸಕರಿಗೆ ಕಲಾ/ವಾಣಿಜ್ಯ/ಭಾಷಾ ವಿಷಯಗಳಿಗೆ ಗರಿಷ್ಠ 15 ಗಂಟೆಗಳ ಹಾಗೂ ವಿಜ್ಞಾನ ವಿಷಯಗಳು/ಪ್ರಾಯೋಗಿಕ ತರಗತಿಗಳಿರುವ ವಿಷಯಗಳಿಗೆ ಗರಿಷ್ಠ 19 ಗಂಟೆಗಳ ಕಾರ್ಯಭಾರವನ್ನು ಮಾತ್ರ ಹಂಚಿಕೆ ಮಾಡಲಾಗುವುದು ಹಾಗೂ 15/19 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಲಭ್ಯವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನವನ್ನು ಪರಿಗಣಿಸಲಾಗುವುದು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment