Reservation: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್.! ಇನ್ನು ಮುಂದೆ ರಾಜ್ಯದ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಶೇ.75% ಮೀಸಲಾತಿ.!

Reservation

ಕನ್ನಡ ನಾಡಿನ ಜನರ ಬಹುದಿನದ ಬೇಡಿಕೆಯಾಗಿದ್ದ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ಕೊನೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಅಸ್ತು ಎಂದಿದೆ. ಈ ಮೂಲಕ ಕರ್ನಾಟಕದ ನೆಲದಲ್ಲಿ ಕನ್ನಡಿಗನೇ ಸಾರ್ವಭೌಮ, ಉದ್ಯೋಗದ ವಿಚಾರದಲ್ಲೂ ಕೂಡ ಕನ್ನಡಿಗರಿಗೆ ಮೊದಲ ಆದ್ಯತೆ ಎಂಬುದನ್ನು ಪುನಃ ಖಾತ್ರಿಪಡಿಸಿ ಘೋಷಿಸಿದಂತಾಗಿದೆ.

ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೇ ಎಕ್ಸ್ ಜಾಲತಾಣದಲ್ಲಿ ವಿಷಯ ಹಂಚಿಕೊಳ್ಳುವ ಮೂಲಕ ಕನ್ನಡಿಗರಿಗೆ ಔದ್ಯೋಗಿಕ ಮೀಸಲಾತಿ ಮಸೂದೆಯನ್ನು ಕುರಿತು ಸಿಹಿ ಸುದ್ದಿ ನೀಡಿದ್ದಾರೆ. ಈ ಮಸೂದೆ ಜಾರಿಗೆ ಬಂದರೆ ಕರ್ನಾಟಕದಲ್ಲಿನ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಶೇ.50ರಿಂದ ಮೀಸಲಾತಿ ಬದಲಾಗಿ ಇದು ಹೆಚ್ಚಳವಾಗಿ ಶೇ.75ರಷ್ಟು ಮೀಸಲಾತಿ ಸಿಗುತ್ತದೆ.

WhatsApp Group Join Now
Telegram Group Join Now

ಈ ಮೀಸಲಾತಿ ಮಸೂದೆ ಕುರಿತಾದ ಪ್ರಮುಖ ಬೆಳವಣಿಗೆಗಳ ಮಾಹಿತಿ ಹೀಗಿದೆ ನೋಡಿ ಕರ್ನಾಟಕ ಸರ್ಕಾರದ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಖಾಸಗಿ ಸಂಸ್ಥೆಗಳ ಉದ್ಯೋಗಗಳಲ್ಲಿ ಕೂಡ ಇಲ್ಲಿನ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024‌ ಇದಾಗಿದೆ.

ಈ ಸುದ್ದಿ ಓದಿ:- Work From Home: SSLC ಪಾಸ್ ಆದವರಿಗೆ ಜಿಯೋ ಸಂಸ್ಥೆಯಿಂದ ವರ್ಕ್ ಫ್ರಮ್ ಹೋಂ ಕೆಲಸ.! ವೇತನ 30000/-

ಈ ಮಸೂದೆಯನ್ನು ಜಾರಿಗೆ ತರುವಂತೆ ಅನೇಕ ಬಾರಿ ಸರ್ಕಾರವನ್ನು ಒತ್ತಾಯಿಸಲಾಗಿತ್ತು ಕೊನೆಗೂ ಮಣಿದ ಸರ್ಕಾರವು ವಿಧಾನಸಭೆಯಲ್ಲಿ ಗುರುವಾರ ಈ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಮಸೂದೆಗೆ ಒಮ್ಮತದ ಒಪ್ಪಿಗೆ ನೀಡಿದೆ. ಇದರಿಂದ ನಮ್ಮವರೇ ಉದ್ಯೋಗದಿಂದ ವಂಚಿತರಾಗುತ್ತಿದ್ದ ಅನಾನುಕೂಲತೆ‌ ತಪ್ಪುವುದರಲ್ಲಿ ಯಾವುದೇ ಅನುಮಾನವಿಲ್ಲ.

ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ – 2024ರ ಪ್ರಕಾರ ಕರ್ನಾಟಕದಲ್ಲಿರುವ ಖಾಸಗಿ ವಲಯದ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಂಸ್ಥೆಗಳ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ.50 ರಿಂದ ಶೇ.75ರವರೆಗೆ ಮೀಸಲಾತಿ ನೀಡಬೇಕು, ಆಡಳಿತಾತ್ಮಕ ಹುದ್ದೆಗಳಲ್ಲಿ ಶೇ.50ರಷ್ಟು, ಆಡಳಿತಾತ್ಮಕವಲ್ಲದ ಇತರೆ ಶ್ರೇಣಿಯ ಹುದ್ದೆಗಳಲ್ಲಿ ಶೇ.75ರಷ್ಟು ಕನ್ನಡಿಗರಿಗೆ ಮೀಸಲಾತಿ ಮತ್ತು C ಮತ್ತು D ವರ್ಗದ ಉದ್ಯೋಗಗಳಿಗೆ ಕನ್ನಡಿಗರಿಗೆ ಶೇ.100ರಷ್ಟು ಮೀಸಲಾತಿ ನೀಡುವ ಮಸೂದೆಯಾಗಿದೆ.

ಆದರೆ ರಾಜ್ಯದ ಅನೇಕ ಉದ್ಯಮಿಗಳಿಗೆ ಈ ಬಗ್ಗೆ ಭಾರಿ ಅಸಮಾಧಾನ ಇದೆ ಎನ್ನುವುದು ತಿಳಿದು ಬಂದಿದೆ. ಹಲವರು ಇದಕ್ಕೆ ತೀವ್ರ ಅಸಮಾಧಾನ ಹೊರ ಹಾಕಿದ ಹಿನ್ನೆಲೆ ಶೇಕಡ 100% ರಷ್ಟು ಬದಲಿಗೆ ಶೇಕಡ 75% ಕನ್ನಡಿಗರಿಗೆ ಖಾತ್ರಿ ಆದ ಮೀಸಲಾತಿ ನಿಗದಿಪಡಿಸಲಾಗಿದೆ.

ಈ ಸುದ್ದಿ ಓದಿ:- PM Kaushal Vikas Yojan: ನಿರುದ್ಯೋಗಿಗಳಿಗೆ ಗುಡ್‌ ನ್ಯೂಸ್‌, ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು 8,000 ಸಿಗಲಿದೆ.!

ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕ ರಾಜ್ಯದಲ್ಲಿ ಕಳೆದ 15 ವರ್ಷಗಳಿಂದ ವಾಸ ಮಾಡುತ್ತಿರುವವರು, ಕನ್ನಡ ಭಾಷೆಯನ್ನು ಮಾತನಾಡಲು, ಓದಲು ಹಾಗೂ ಬರೆಯಲು ಬರುವ ಕನ್ನಡಿಗರಿಗೆ ಈ ನೂತನ ಮಸೂದೆ ಮೀಸಲಾತಿಗಳು ಅನ್ವಯವಾಗಲಿದೆ.

SSLC ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಭಾಷೆಯಾಗಿ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಸಿಸದವರು, ಸರ್ಕಾರದ ಈ ಮೇಲೆ ತಿಳಿಸಿದ ಹುದ್ದೆಗಳನ್ನು ಪಡೆಯಲು ನೋಡಲ್‌ ಏಜೆನ್ಸಿಗಳು ನಡೆಸುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದೆ. ಅಂತವರಿಗೆ ಮಾತ್ರ ಈ ಮೀಸಲಾತಿ ಸಿಗಲಿದೆ. ಈ ಕನ್ನಡ ಭಾಷಾ ಪರೀಕ್ಷೆ ಕೂಡ 10ನೇ ತರಗತಿಯ ಮಟ್ಟದಲ್ಲಿರಲಿದೆ ಎಂದು ಉಲ್ಲೇಖಿಸಲಾಗಿದೆ.

https://x.com/siddaramaiah/status/1813504331544498394?t=P33w_4MxbXdQQSW5WBK1aA&s=19

ಸಚಿವ ಸಂಪುಟ ಅನುಮೋದನೆ ನೀಡಿದ ತಕ್ಷಣವೇ ಈ ವಿಚಾರವನ್ನುಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಉದ್ಯಮಿ ಮೋಹನ್‌ ದಾಸ್‌ ಪೈ, ಕಿರಣ್‌ ಮಜುಂದಾರ್‌ ಶಾ ಸೇರಿದಂತೆ ಹಲವರು ಟ್ವೀಟ್‌ ಮಾಡಿ ಸರ್ಕಾರದ ನಡೆಯನ್ನು ಖಂಡಿದ ಬಳಿಕ ಮುಖ್ಯಮಂತ್ರಿಗಳು ಹಂಚಿಕೊಂಡಿದ್ದ ಟ್ವೀಟ್ ಡಿಲೀಟ್ ಆಗಿದೆ, ಇದು ಹಲವಾರು ಅನುಮಾನಗಳಿಗೆ ಕಾರಣವಾಗಿದ್ದು ಸರ್ಕಾರದ ಮುಂದಿನ ನಡೆ ಏನು ಎಂದು ಕಾದು ನೋಡೋಣ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment