HSRP ನಂಬರ್ ಪ್ಲೇಟ್ ಅಳವಡಿಸದೆ ಇರುವವರಿಗೆ ಸರ್ಕಾರದಿಂದ ಕೊನೆ ಚಾನ್ಸ್.!

HSRP

ರಾಜ್ಯ ಸರ್ಕಾರ(State Govt) ವಾಹನ ಮಾಲೀಕ(Vehicle owner)ರಿಗೆ ಗುಡ್ ನ್ಯೂಸ್ ನೀಡಿದೆ. 2019ರ ಏಪ್ರಿಲ್ 1ನೇ ತಾರೀಖಿಗೆ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (High-security registration plate – HSRP) ಅಳವಡಿಸಲು ಕೊನೆಯ ದಿನಾಂಕವನ್ನು ಮತ್ತೊಮ್ಮೆ ಸೆಪ್ಟೆಂಬರ್ 15, 2024 ರವರೆಗೆ ವಿಸ್ತರಣೆ ಮಾಡಲಾಗಿದೆ. ಸೆಪ್ಟೆಂಬರ್ ಡೆಡ್‌ಲೈನ್ ಬಳಿಕ ಈ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.

ಇದೇ ಕೊನೆ ಚಾನ್ಸ್ ಮತ್ತೆ ವಿಸ್ತರಣೆ ಮಾಡಲ್ಲ

ಎಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಕರ್ನಾಟಕ ಸರ್ಕಾರ ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್​ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಓದಿ:- Canara Bank: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗಾವಕಾಶ.! SSLC ಪಾಸ್ ಆದವರು ಅರ್ಜಿ ಸಲ್ಲಿಸಿ.!

ದ್ವಿಚಕ್ರ ವಾಹನಗಳು, ಆಟೋ ಮತ್ತು ನಾಲ್ಕು ಚಕ್ರಗಳ ವಾಹನಗಳು ಸೇರಿದಂತೆ ರಾಜ್ಯದ ಎಲ್ಲಾ ವಾಹನಗಳಿಗೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸಬೇಜಯ. ವಂಚನೆ ಮತ್ತು ಕಳ್ಳತನದಿಂದ ರಕ್ಷಿಸಲು ಹೆಚ್ಚುವರಿ ಭದ್ರತಾ ಕ್ರಮಗಳನ್ನು ಒಳಗೊಂಡಿರುವ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಸುವುದು ರಾಜ್ಯದಲ್ಲಿ ಕಡ್ಡಾಯಾವಾಗಿದೆ. ತಮ್ಮ ಹಳೆಯ ನಂಬರ್ ಪ್ಲೇಟ್‌ಗಳನ್ನು ತೆಗೆಸಿ ಹೊಸ ನಂಬರ್ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ.

ಇನ್ನು, ಎಚ್‌ಎಸ್‌ಆರ್‌ಪಿ (HSRP) ಪ್ಲೇಟ್ ಅಳವಡಿಕೆಗೆ ಇದೇ ಮೊದಲ ಬಾರಿ ಗಡುವು ವಿಸ್ತರಣೆ ಮಾಡುತ್ತಿಲ್ಲ. ಆಗಸ್ಟ್ 2023 ರಲ್ಲಿ ಮೊದಲ ಬಾರಿಗೆ ದಿನಾಂಕವನ್ನು ಮುಂದೂಡಲಾಗಿತ್ತು. ಆದಾದ ಬಳಿಕ ಸರ್ಕಾರವು ಪದೇ ಪದೇ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ದಿನಾಂಕವನ್ನು ಮುಂದೂಡುತ್ತಿದೆ.

ಈ ಸುದ್ದಿ ಓದಿ:- Free Home: ಕೇಂದ್ರ ಸರ್ಕಾರದಿಂದ ‘ಉಚಿತ ಮನೆ’ ಹಂಚಿಕೆ.!

ರಾಜ್ಯ ಸರ್ಕಾರವು ಈಗಾಗಲೇ ಎಚ್‌ಎಸ್‌ಆರ್‌ಪಿ ಅಳವಡಿಕೆ ಗಡುವನ್ನು ಫೆಬ್ರವರಿ 17 ರಿಂದ ಮೇ 31, 2024 ರವರೆಗೆ ವಿಸ್ತರಿಸಿದೆ. ಬಳಿಕ ಜುಲೈ ನಾಲ್ಕವರ ವರೆಗೂ ವಿಸ್ತರಣೆ ಮಾಡಿ ಇತ್ತೀಚೆಗೆ ಆದೇಶಿಸಿತ್ತು. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕಾರು ಮಾಲೀಕರಲ್ಲಿ ನಿರಾಸಕ್ತಿ ಉಂಟಾಗಿದ್ದು, ಯಾರು ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಇನ್ನು, ಏಪ್ರಿಲ್ 1, 2019 ರ ಮೊದಲು ಖರೀದಿಸಲಾದ ಸುಮಾರು 2 ಕೋಟಿ ವಾಹನಗಳಿಗೆ ಇನ್ನೂ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಯ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಆದರೆ, ಎಚ್‌ಎಸ್‌ಆರ್‌ಪಿ ಅಳವಡಿಕೆಯಲ್ಲಿ ಹಲವು ತೊಮದರೆಗಳಿವೆ ಎಂದು ವಾಹನ ಮಾಲೀಕರು ಆರೋಪಿಸಿದ್ದಾರೆ.

ಸಾರಿಗೆ ಚಿವ ರಾಮಲಿಂಗಾ ರೆಡ್ಡಿ ಕೂಡ ಸೆಪ್ಟೆಂಬರ್ 15 ಕೊನೆಯ ದಿನಾಂಕ, ಇದಾದ ನಂತರ ಮತ್ತೆ ಗಡುವು ವಿಸ್ತರಣೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಹಾಕಿಸದಿದ್ದರೇ ದಂಡ ವಿಧಿಸುವುದು ಅನಿವಾರ್ಯ. ಆರಂಭಿಕ ದಂಡವು 500 ರೂಪಾಯಿಗಳಿದ್ದು, ಮತ್ತೆ ಸಿಕ್ಕಿಬಿದ್ದರೇ 1000 ರೂಪಾಯಿ ದಂಡ ವಿಧಿಸಲಾಗುತ್ತದೆ.

ಸಹಾಯವಾಣಿ ವೆಬ್‌ಸೈಟ್‌

ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ ಅಳವಡಿಸಲು ಆನ್‌ಲೈನ್‌ನಲ್ಲಿ ನೋಂದಣಿ ವೇಳೆ ಸಮಸ್ಯೆ ಉಂಟಾದರೆ ನೆರವಾಗಲು ಸಾರಿಗೆ ಇಲಾಖೆಯ ಸಹಾಯವಾಣಿಯೂ ಈಗಾಗಲೇ ಕೆಲಸ ಮಾಡುತ್ತಿದೆ.ಸಾರ್ವಜನಿಕರು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಸಹಾಯವಾಣಿ 9449863429/26 ಸಂಪರ್ಕಿಸಿ ಗೊಂದಗಳಿದ್ದರೆ ಬಗೆಹರಿಸಿಕೊಳ್ಳಬಹುದು. ಕೆಲವೊಮ್ಮೆ ನಿಧಾನವಾದ ದೂರುಗಳೂ ಬಂದಿದ್ದು, ಸಹಾಯವಾಣಿಗೆ ಸಂಪರ್ಕಿಸಿದರೆ ಸೂಕ್ತ ಮಾರ್ಗದರ್ಶನವೂ ಸಿಗಲಿದೆ.

ಇದಲ್ಲದೇ http://transport.karnataka.gov.in ಅಥವಾ www.siam.inಗೆ ಭೇಟಿ ನೀಡಿ ವಾಹನಗಳಿಗೆ ನೋಂದಣಿ ಫಲಕಗಳನ್ನು ಅಳವಡಿಸಿಕೊಳ್ಳಲು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment