IBPS Recruitment : ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 45,000/-

IBPS

ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ(Banking Staff Selection Organisation)ಯಿಂದ ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ಸ್(Probationary Officers) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ(Application) ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

– ಹುದ್ದೆ : ಪ್ರೊಬೇಷನರಿ ಆಫೀಸರ್ಸ್/ ಮ್ಯಾನೇಜ್ಮೆಂಟ್ ಟ್ರೈನಿ
– ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ವಿವಿಧ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.
– ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 4455 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
– ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
– ವಯೋಮಿತಿ : ದಿನಾಂಕ 01/08/2024ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

WhatsApp Group Join Now
Telegram Group Join Now

ವಯೋಮಿತಿ ಸಡಿಲಿಕೆ

• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಆಯ್ಕೆ ವಿಧಾನ : ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಪ್ರಿಲಿಮಿನರಿ ಪರೀಕ್ಷಾ ಕೇಂದ್ರಗಳು : ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ.

ಅರ್ಜಿ ಸಲ್ಲಿಕೆಯ ವಿಧಾನ :-

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.

ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಸಂಸ್ಥೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಸಂಸ್ಥೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ

• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ ಅಭ್ಯರ್ಥಿಗಳು – ರೂ. 175
• ಉಳಿದ ಅಭ್ಯರ್ಥಿಗಳಿಗೆ – ರೂ. 850

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ

– ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 01, 2024
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2024
– ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಆಗಸ್ಟ್ 21, 2024
– ಪ್ರಿಲಿಮಿನರಿ ಪರೀಕ್ಷೆ ದಿನಾಂಕ : ಅಕ್ಟೋಬರ್, 2024
– ಮುಖ್ಯ ಪರೀಕ್ಷೆ ದಿನಾಂಕ : ನವೆಂಬರ್, 2024

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment