Ration Card
ಹೊಸ ಬಿಪಿಎಲ್ ಕಾರ್ಡ್ (BPL card) ನಿರೀಕ್ಷೆಯಲ್ಲಿರುವವರಿಗೆ ಸರ್ಕಾರದಿಂದ ಗುಡ್ ನ್ಯೂಸ್ ಒಂದು ಬಂದಿದೆ. ಬಿಪಿಎಲ್ ಕಾರ್ಡ್ ಪಡೆಯುವವರಿಗೆ ಇದು ಗುಡ್ ನ್ಯೂಸ್ ಆಗಿದೆ.ಹೊಸದಾಗಿ ಪಡೆತರ ಚೀಟಿ ಕೋರಿ ಅರ್ಜಿ ಸಲ್ಲಿದವರಿಗೆ ಶೀಘ್ರದಲ್ಲಿ ಪಡೆತರ ಚೀಟಿಯನ್ನು ವಿತರಣೆ ಮಾಡಲಾಗುವುದು.
ಹೌದು, ಹೊಸ ಬಿಪಿಎಲ್ ಕಾರ್ಡ್ (new BPL card) ದೊರೆಯಲಿದ್ದು, ಅದರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ(CM Siddaramaiah) ಮಹತ್ವದ ಮಾಹಿತಿ ನೀಡಿದ್ದಾರೆ. ಅನರ್ಹ ಬಿ.ಪಿ.ಎಲ್. ಕಾರ್ಡು(ineligible BPL card)ಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡ್ ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.
ಈ ಸುದ್ದಿ ಓದಿ:- Guarantee Schemes: ಗೃಹಲಕ್ಷ್ಮಿ-ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ಸರ್ಕಾರದ ಬಂಪರ್ ಘೋಷಣೆ.!
ರಾಜ್ಯದಲ್ಲಿ 4,37,23,911 ಜನ ಬಿಪಿಎಲ್ ಕಾರ್ಡ್ ಸೌಲಭ್ಯ ಪಡೆದುಕೊಂಡಿದ್ದಾರೆ. 1.27 ಕೋಟಿ ಬಿಪಿಎಲ್ ಕುಟುಂಬಗಳಿವೆ. ಹೊಸ ಬಿಪಿಎಲ್ ಕಾರ್ಡ್‌ಗಳಿಗೆ 2.95 ಲಕ್ಷ ಅರ್ಜಿಗಳು ಬಂದಿವೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಬಡವರ ಸಂಖ್ಯೆ ಕಡಿಮೆಯಾಗಿದ್ದರೂ, ಬಿಪಿಎಲ್ ಕಾರ್ಡ್ ಪ್ರಮಾಣ ಕಡಿಮೆಯಾಗದಿರಲು ಕಾರಣವೇನು? ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.
ಮುಂದುವರಿದು ತಮಿಳುನಾಡಿನಲ್ಲಿ ಬಿಪಿಎಲ್ ಪ್ರಮಾಣ ಶೇ.40 ರಷ್ಟಿದೆ. ಈ ಕುರಿತು ಪರಿಶೀಲನೆ ನಡೆಸಿ, ಅನರ್ಹರನ್ನು ಕೈಬಿಡುವ ಕೆಲಸ ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಿಎಂ ಕೊಟ್ರು ಮಹತ್ವದ ಸೂಚನೆ
ಯಾರೆಲ್ಲಾ ಅನರ್ಹ ಬಿ.ಪಿ.ಎಲ್. ಕಾರ್ಡ್ ಹೊಂದಿದ್ದಾರೆ, ಅವುಗಳನ್ನು ಪತ್ತೆ ಹಚ್ಚಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆದರೆ, ಕೆಲವರು ಕಾರ್ಡ್ ಹೊಂದಲು ಅನರ್ಹರಾದರೂ ಅದನ್ನು ಇಟ್ಟುಕೊಂಡಿದ್ದಾರೆ. ಈ ಕಾರಣದಿಂದ ಅವುಗಳನ್ನು ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಹಳ ದಿನಗಳಿಂದ ಅರ್ಹ ಫಲಾನುಭವಿಗಳು ಹೊಸ ರೇಷನ್ ಕಾರ್ಡ್ (New Ration Card) ಪಡೆಯಲು ಕಾಯುತ್ತಿದ್ದಾರೆ. ಆದರೆ ಅನರ್ಹರು ಸರ್ಕಾರದಿಂದ ಲಾಭ ಪಡೆಯುತ್ತಿದ್ದಾರೆ. ಅಂತವರ ಪಡಿತರ ಚೀಟಿಗಳನ್ನು ರದ್ದು ಮಾಡಿ. ಅರ್ಹ ಫಲಾನುಭವಿಗಳಿಗೆ ಹೊಸ ರೇಷನ್ ಕಾರ್ಡ್ ನೀಡಲು ಸರ್ಕಾರ ಚಿಂತನೆ ನಡೆಸಿದ್ದು, ಕೂಡಲೇ ಸಮಗ್ರ ಪರಿಶೀಲನೆ ನಡೆಸಿ ಅನರ್ಹ ಬಿಪಿಎಲ್ ಕಾರ್ಡ್ ಕೈಬಿಡಲು ಕ್ರಮ ಕೈಗೊಳ್ಳಬೇಕು.
ಈ ಸುದ್ದಿ ಓದಿ:- Link Aadhaar: ಜಮೀನಿನಲ್ಲಿ ಪಂಪ್ ಸೆಟ್ ಇರುವ ಎಲ್ಲಾ ರೈತರಿಗೂ ಹೊಸ ಆದೇಶ.!
ಹಾಗೆಯೇ ಬಿಪಿಎಲ್ ಕುಟುಂಬಗಳಲ್ಲಿನ ಮೃತ ಸದಸ್ಯರ ಹೆಸರು ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು. ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ ದೂರುಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಸೂಚಿಸಿದ್ದಾರೆ.
ಹೊಸ ರೇಷನ್ ಕಾರ್ಡ್ ವಿತರಣೆಗೆ ಮುಂದಾದ ಸರ್ಕಾರ
ಚುನಾವಣೆ ಕಾರಣದಿಂದಾಗಿ ಹೊಸ ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿದ್ದು, ಜೂನ್ ಅಂತ್ಯಕ್ಕೆ ಒಟ್ಟು 2,95,986 ಅರ್ಜಿ ಬಾಕಿ ಉಳಿದಿವೆ. ಈ ಅರ್ಜಿದಾರರ ಸ್ಥಳ ಪರಿಶೀಲಿಸಲಾಗುವುದು. ಬಳಿಕ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಜಿಲ್ಲೆಗಳಿಂದ ಪಡೆದು ನಂತರ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ಹೊಸ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು.
ಈ ಸುದ್ದಿ ಓದಿ:- Anganavadi Recruitment: ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆಸಕ್ತರು ಅರ್ಜಿ ಸಲ್ಲಿಸಿ.!
ತುರ್ತು ವೈದ್ಯಕೀಯ ಕಾರಣಗಳಿಗೆ ಹೊಸ ಪಡಿತರ ಚೀಟಿ ವಿತರಣೆಗೆ ಅನುಮತಿ ನೀಡಲಾಗುವುದು ಎಂದು ಇತ್ತೀಚಿಗೆ ನಡೆದ ಸುದ್ದಿಗೋಷ್ಠಿಯಲ್ಲಿ(News conference) ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿದ್ದಾರೆ.
ಹೊಸ ಪಡೆತರ ಚೀಟಿ (Ration Card)ಗಾಗಿ ಕೋರಿ 2.95 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ, ಅರ್ಜಿಗಳನ್ನು ಪರಿಶೀಲಿಸಿ ಶೀಘ್ರದಲ್ಲಿ ಅರ್ಹರಿಗೆ ಪಡಿತರ ಚೀಟಿ ಕೈ ಸೇರಲಿದೆ, ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.