Jobs
ಸರ್ಕಾರಿ ಉದ್ಯೋಗ ಎನ್ನುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಬದುಕಿನ ಗುರಿ ಹಾಗೂ ಆ ಕುಟುಂಬದ ಕನಸಾಗಿರುತ್ತದೆ. ನಮ್ಮ ದೇಶದಲ್ಲಿ ಸರ್ಕಾರಿ ಹುದ್ದೆಗೆ ಇರುವ ಗೌರವ ಹಾಗೂ ಅದರಿಂದ ಸಿಗುವ ಅನುಕೂಲತೆಗಳು ಬಾಲ್ಯದಿಂದಲೂ ಸರ್ಕಾರಿ ಉದ್ಯೋಗ ಪಡೆಯಬೇಕೆನ್ನುವ ಇಚ್ಛೆ ಇಟ್ಟುಕೊಳ್ಳುವುದಕ್ಕೆ ಸ್ಪೂರ್ತಿದಾಯಕವಾಗಿದೆ. ಈ ಬಗ್ಗೆ ಆಸಕ್ತರಾಗಿರುವವರಿಗೆ ಸರ್ಕಾರ ವತಿಯಿಂದ ಸಿಹಿ ಸುದ್ದಿಯೊಂದಿದೆ.
ಅದೇನೆಂದರೆ, ಕರ್ನಾಟಕ ರಾಜ್ಯ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಕಾರ್ಯ ನಡೆಯುತ್ತಿದೆ, KPSC ಸಂಸ್ಥೆ ಅಧಿಸೂಚನೆ ಕೂಡ ಹೊರಡಿಸಿದ್ದು ಸೂಚಿಸಿರುವ ಪದವಿ ವಿದ್ಯಾಭ್ಯಾಸ ಮುಗಿಸಿರುವಂತಹ ಅಭ್ಯರ್ಥಿಗಳು ಈ ಹುದ್ದೆಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬಹುದಾಗಿದೆ.
ರಾಜ್ಯದ ಆಸಕ್ತ ಅಭ್ಯರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಕಾರಣದಿಂದ ಈ ಅಂಕಣದಲ್ಲಿ ನೇಮಕಾತಿ ಕುರಿತಂತೆ ಪ್ರಕಟಣೆಯಲ್ಲಿರುವ ಪ್ರಮುಖ ಸಂಗತಿಗಳನ್ನು ಹಂಚಿಕೊಳ್ಳುತ್ತಿದ್ದೇವೆ. ತಪ್ಪದೇ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಸಂಸ್ಥೆ:- ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ
ಹುದ್ದೆ ಹೆಸರು:- ಪಶು ವೈದ್ಯಾಧಿಕಾರಿ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 400 ಹುದ್ದೆಗಳು
ಉದ್ಯೋಗ ಸ್ಥಳ:- ಕರ್ನಾಟಕ
ವೇತನ ಶ್ರೇಣಿ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ 52,650 ರಿಂದ ರೂ.97,100 ಹಾಗೂ ಸರ್ಕಾರಿ ಹುದ್ದೆ ನೌಕರರಿಗೆ ಸಿಗುವ ಇನ್ನಿತರ ಸೌಲಭ್ಯಗಳು ಸಿಗುತ್ತವೆ
ಶೈಕ್ಷಣಿಕ ವಿದ್ಯಾರ್ಹತೆ:-
* B V Sc / B V Sc & AH ವಿಷಯದಲ್ಲಿ ಪದವಿ ಪಡೆದಿರುವಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
* KVC / IVC ಯಲ್ಲಿ ನೋಂದಣಿಯಾಗಿರಬೇಕು
ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* OBC ಅಭ್ಯರ್ಥಿಗಳಿಗೆ 3 ವರ್ಷಗಳು
* SC / ST & ಪ್ರವರ್ಗ -1 ರ ಅಭ್ಯರ್ಥಿಗಳಿಗೆ 5 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಆನ್ಲೈನ್ ವಿಧಾನದಲ್ಲಿಯೇ ಅರ್ಜಿ ಸಲ್ಲಿಸಬೇಕು
* ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ತೆರಳಿ ನೋಟಿಫಿಕೇಶನ್ ಡೌನ್ಲೋಡ್ ಮಾಡಿಕೊಂಡು ಓದಿ ಅರ್ಥೈಸಿಕೊಂಡ ಬಳಿಕ ಸೂಚಿಸಿರುವ ವೆಬ್ಸೈಟ್ ಲಿಂಕ್ ಕ್ಲಿಕ್ ಮಾಡಿ ಮುಂದುವರಿಯಬಹುದು
* ಅಭ್ಯರ್ಥಿಯ ವೈಯುಕ್ತಿಕ ವಿವರಗಳು ಹಾಗೂ ಕೇಳಲಾಗುವ ಪೂರಕ ದಾಖಲೆಗಳ ಸಂಖ್ಯೆಗಳನ್ನು ನಮೂದಿಸಿ
* ನಿಮ್ಮ ವರ್ಗಕ್ಕೆ ಅನುಕೂಲವಾಗಿ ಸೂಚಿಸಿರುವ ಅರ್ಜಿ ಶುಲ್ಕವನ್ನು ಕೂಡ ಪಾವತಿಸಿ ಇ-ರಸೀದಿ ಪ್ರಿಂಟ್ ಪಡೆಯಿರಿ
* ಕೊನೆಯಲ್ಲಿ ಮತ್ತೊಮ್ಮೆ ಎಲ್ಲವನ್ನು ಚೆಕ್ ಮಾಡಿ ಸಬ್ಮಿಟ್ ಕ್ಲಿಕ್ ಮಾಡಿ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ
ಆಯ್ಕೆ ವಿಧಾನ:-
* ಸ್ಪರ್ಧಾತ್ಮಕ ಪರೀಕ್ಷೆ
* ನೇರ ಸಂದರ್ಶನ
*ದಾಖಲೆಗಳ ಪರಿಶೀಲನೆ
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕವೇ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ / ನೆಟ್ ಬ್ಯಾಂಕಿಂಗ್ ಅಥವಾ UPI ಆಪ್ ಮೂಲಕ ಪಾವತಿಸಬಹುದು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ರೂ.600
* OBC ಅಭ್ಯರ್ಥಿಗಳಿಗೆ -ರೂ.300
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ರೂ.50
* SC / ST & ಪ್ರವರ್ಗ -1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – ಆಗಸ್ಟ್ 12, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಸೆಪ್ಟೆಂಬರ್ 12, 2024.