Jobs
Karnataka Revenue Department Recruitment 2024 – ಕರ್ನಾಟಕ ಕಂದಾಯ ಇಲಾಖೆ (Karnataka Revenue Department)ಯಿಂದ ಇದೀಗ ಹೊಸದಾಗಿ ಅಧಿಸೂಚನೆ (Notification) ಪ್ರಕಟಗೊಂಡಿದೆ. ಇಲಾಖೆ (Dept)ಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು (candidates) ಅಗತ್ಯವಿರುವ ವಿದ್ಯಾರ್ಹತೆ (Eligibility), ವಯೋಮಿತಿ (age limit) ಹಾಗೂ ವೇತನ ಶ್ರೇಣಿ (Pay Scale)ಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
ಈ ಲೇಖನದ ಕೆಳಭಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ, ವಯೋಮಿತಿ, ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ..
ಹೌದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ಮತ್ತೆ ಅರ್ಜಿ ಆಹ್ವಾನಿಸಿದೆ. ಪರಿಷ್ಕೃತ ಅಧಿಸೂಚನೆಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
– ಹುದ್ದೆ: ಒಟ್ಟು 1,000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿದೆ.
– ವಿದ್ಯಾರ್ಹತೆ: PUC, ಡಿಪ್ಲೋಮಾ/ಎರಡು ವರ್ಷದ ಐಟಿಐ/ಎರಡು ವರ್ಷದ ಜೆಒಸಿ, ಜೆಒಡಿಸಿ, ಜೆಎಲ್ಡಿಸಿ ಪೂರೈಸಿದವರಿಗೆ ಅವಕಾಶ .
– ವೇತನ: ಮಾಸಿಕ ₹21,400 – ₹42,000
– ವಯೋಮಿತಿ: ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ, ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ. ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
– ಆಯ್ಕೆ ಪ್ರಕ್ರಿಯೆ: ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ.
– ಪರೀಕ್ಷೆ 2 ಪತ್ರಿಕೆಯನ್ನೊಳಗೊಂಡಿದ್ದು, ತಲಾ 200 ಅಂಕಗಳಿರುತ್ತದೆ.
– ವೇತನಶ್ರೇಣಿ: ಕಂದಾಯ ಇಲಾಖೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
– ಅರ್ಜಿ ಸಲ್ಲಿಕೆ: ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸಾಮಾನ್ಯ ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ. ಮತ್ತು ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ, ಪ್ರವರ್ಗ-1, ವಿಶೇಷಚೇತನ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕಿದೆ.
ಸೆಪ್ಟೆಂಬರ್ 19 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಅಕ್ಟೋಬರ್ 28 ಕಡೆಯ ದಿನ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನ ಅಕ್ಟೋಬರ್ 29. ಈ ಕುರಿತು ವಿವರವಾದ ಮಾಹಿತಿಗೆ https://kea.kar.nic.in ಗೆ ಭೇಟಿ ನೀಡಿ.
ಈ ಮೇಲೆ ನೀಡಿರುವ ಲಿಂಕ್ ಅನ್ನು ಬಳಸಿಕೊಂಡು ನೀವು ಅಧಿಸೂಚನೆಯನ್ನು ಪಡೆದುಕೊಳ್ಳಬಹುದು ಹಾಗೂ ಅರ್ಜಿ ಸಲ್ಲಿಸಲು ಕೂಡ ಮೇಲೆ ಇರುವ ಲಿಂಕನ್ನು ಬಳಸಿಕೊಳ್ಳಬಹುದಾಗಿರುತ್ತದೆ.