IBPS Recruitment: ಉದ್ಯೋಗ ನಿರೀಕ್ಷಿತರಿಗೆ ಭರ್ಜರಿ ಗುಡ್ ನ್ಯೂಸ್ 6128 ಹುದ್ದೆಗಳಿಗೆ IBPS ನಿಂದ ಅರ್ಜಿ ಅಹ್ವಾನ.!

IBPS Recruitment

ಇನ್‌ಸ್ಟಿಟ್ಯೂಟ್‌ ಆಫ್‌ ಬ್ಯಾಂಕಿಂಗ್ ಪರ್ಸೊನೆಲ್‌ ಸೆಲೆಕ್ಷನ್ (IBPS) ಮತ್ತೊಂದು ಬಿಗ್‌ ನೋಟಿಫಿಕೇಶನ್‌ ಅನ್ನು ಪ್ರಕಟಿಸಿದೆ. ಹಾಗೂ ಅದಕ್ಕೆ ಆನ್‌ಲೈನ್‌ ಅರ್ಜಿಗೆ ಜುಲೈ 1ರಿಂದ ಅವಕಾಶ ನೀಡಿದೆ. ಯಾವುದೇ ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದಾದ ಕ್ಲರ್ಕ್‌ ಹುದ್ದೆಗಳಿಗೆ ಐಬಿಪಿಎಸ್‌ ಎಂಪ್ಲಾಯ್ಮೆಂಟ್‌ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಬ್ಯಾಂಕ್‌ಗಳಲ್ಲಿ ಕ್ಲರ್ಕ್‌ ಹುದ್ದೆಗಳಿಗೆ ಸೇರಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.

ಹೌದು, ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2025-2026ರ ಸಾಮಾನ್ಯ ನೇಮಕಾತಿ ಪ್ರಕ್ರಿಯೆ (CRP)-XIV ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಐಬಿಪಿಎಸ್ ಕ್ಲರ್ಕ್ ಅಧಿಸೂಚನೆಯ ಮೂಲಕ ಒಟ್ಟು 6128 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ.

WhatsApp Group Join Now
Telegram Group Join Now

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್ ಜ್ಞಾನದೊಂದಿಗೆ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು. ಜುಲೈ 1, 2024 ರಂತೆ ಅಭ್ಯರ್ಥಿಗಳ ವಯಸ್ಸು 20 ರಿಂದ 28 ವರ್ಷಗಳ ನಡುವೆ ಇರಬೇಕು. ಅಂದರೆ ಅರ್ಜಿದಾರರು ಜುಲೈ 2, 1996 ಮತ್ತು ಜುಲೈ 1, 2004ರ ನಡುವೆ ಜನಿಸಿದವರಾಗಿರಬೇಕು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 1 ರಿಂದ ಆನ್‌ಲೈನ್‌’ನಲ್ಲಿ ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಅರ್ಜಿಗಳಿಗೆ ಕೊನೆಯ ದಿನಾಂಕ ಜುಲೈ 21, 2024. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ 850 ರೂಪಾಯಿ ಪಾವತಿಸಬೇಕು. SC, ST, PWD, EMM, DESM ಅಭ್ಯರ್ಥಿಗಳು ರೂ.175 ನೋಂದಣಿ ಶುಲ್ಕವನ್ನು ಮಾತ್ರ ಪಾವತಿಸಬೇಕಾಗುತ್ತದೆ. ಅಂತಿಮ ಆಯ್ಕೆಯು ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಯ ಆಧಾರದ ಮೇಲೆ ಇರುತ್ತದೆ.

ಲಿಖಿತ ಪರೀಕ್ಷೆಯ ವಿಧಾನ

IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯು 100 ಅಂಕಗಳ 100 ಬಹು ಆಯ್ಕೆ ಪ್ರಶ್ನೆಗಳನ್ನ ಒಳಗೊಂಡಿದೆ. ಇಂಗ್ಲಿಷ್ ಭಾಷೆ, ಸಂಖ್ಯಾ ಸಾಮರ್ಥ್ಯ ಮತ್ತು ರೀಸನಿಂಗ್ ಎಬಿಲಿಟಿ ವಿಭಾಗಗಳಿಂದ ಪ್ರಶ್ನೆಗಳು ಬರುತ್ತವೆ. ಮುಖ್ಯ ಪರೀಕ್ಷೆಯು ಒಟ್ಟು 200 ಅಂಕಗಳಿಗೆ ಎರಡು ಗಂಟೆಗಳ ಅವಧಿಯಾಗಿರುತ್ತದೆ.

ಪ್ರಮುಖ ದಿನಾಂಕಗಳು

– ಆನ್‌ಲೈನ್ ಅಪ್ಲಿಕೇಶನ್‌ಗಳಿಗೆ ಪ್ರಾರಂಭ ದಿನಾಂಕ : ಜುಲೈ 01,2024
– ಆನ್‌ಲೈನ್ ಅಪ್ಲಿಕೇಶನ್‌ಗಳಿಗೆ ಕೊನೆಯ ದಿನಾಂಕ : ಜುಲೈ 21, 2024
– ಪೂರ್ವ ಪರೀಕ್ಷೆಯ ತರಬೇತಿಯ ದಿನಾಂಕಗಳು : ಆಗಸ್ಟ್ 12 ರಿಂದ 17 ರವರೆಗೆ
– ಆನ್‌ಲೈನ್ ಪೂರ್ವಭಾವಿ ಪರೀಕ್ಷೆಗಳು : ಆಗಸ್ಟ್ 24, 25, 31 ರಂದು
– ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಬಿಡುಗಡೆ ದಿನಾಂಕ : ಸೆಪ್ಟೆಂಬರ್ ತಿಂಗಳಲ್ಲಿ
– ಆನ್‌ಲೈನ್ ಮುಖ್ಯ ಪರೀಕ್ಷೆಗಳು : ಅಕ್ಟೋಬರ್ 13, 2024.

ಐಬಿಪಿಎಸ್ ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

– ಐಬಿಪಿಎಸ್‌ ನೇಮಕಾತಿ ಪೋರ್ಟಲ್ ಲಿಂಕ್ https://www.ibps.in/index.php/clerical-cadre-xiv/ ಗೆ ಭೇಟಿ ನೀಡಿ.
– ತೆರೆದ ವೆಬ್‌ಸೈಟ್‌ನಲ್ಲಿ ‘Apply Online for Common Recruitment Process Under CRP-Clerks-XIV’ ಎಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
– ನಂತರ ಓಪನ್ ಆಗುವ ವೆಬ್‌ಪುಟದಲ್ಲಿ ‘Click Here For New Registration’ ಎಂದಿರುವಲ್ಲಿ ಕ್ಲಿಕ್ ಮಾಡಿ.
– ಕೇಳಲಾದ ವೈಯಕ್ತಿಕ ಮಾಹಿತಿಗಳನ್ನು ನೀಡಿ, ಮೊದಲು ರಿಜಿಸ್ಟ್ರೇಷನ್ ಪಡೆಯಬೇಕು.
– ನಂತರ ಲಾಗಿನ್‌ ಆಗುವ ಮೂಲಕ ವಿದ್ಯಾರ್ಹತೆ, ಇತರೆ ಸವಿವರಗಳನ್ನು ನೀಡಿ ಅಪ್ಲಿಕೇಶನ್‌ ಸಲ್ಲಿಸಬೇಕು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment