Montessori
ಕರ್ನಾಟಕದಲ್ಲಿ ಇನ್ನು ಮುಂದೆ ಅಂಗನವಾಡಿ(Anganwadi) ಎನ್ನುವ ಹೆಸರು ಇರೋದಿಲ್ಲ. ನಾಲ್ಕೈದು ದಶಕಗಳಿಂದ ಪೂರ್ವ ಪ್ರಾಥಮಿಕ ಶಿಕ್ಷಣ, ಆಹಾರ ನೀಡುತ್ತಿದ್ದ ಅಂಗನವಾಡಿಗಳು ಹೊಸ ರೂಪ ಪಡೆಯಲಿವೆ. ಇನ್ಮುಂದೆ ಅಂಗನವಾಡಿ ಎನ್ನುವ ಬದಲು ಸರ್ಕಾರಿ ಮಾಂಟೆಸ್ಸರಿ(Government Montessori) ಎನ್ನುವ ಹೆಸರಿನಿಂದ ಕರೆಯಬೇಕು.
ಭಾರತದಲ್ಲಿಯೇ ಮೊದಲ ರಾಜ್ಯವಾಗಿ ಕರ್ನಾಟಕ(Karnataka)ದಲ್ಲಿ ಅಂಗನವಾಡಿಗಳನ್ನು ಖಾಸಗಿ ಶಿಕ್ಷಣಗಳಿಗೆ ಸಮಾನ ಎನ್ನುವಂತೆಯೇ ಮಾಂಟೆಸ್ಸರಿ ಎನ್ನುವ ಹೆಸರಿನಿಂದ ಬದಲಾಯಿಸಲಾಗಿದೆ. ಶಿಕ್ಷಣವೂ ಅದೇ ರೀತಿ ಇರಲಿದ್ದು, ಸ್ವರೂಪ ಬದಲಾಗಲಿದೆ. ಬೆಂಗಳೂರು ಮಾತ್ರವಲ್ಲದೇ ಕರ್ನಾಟಕದಲ್ಲಿ ಐದು ಸಾವಿರ ಮಾಂಟೆಸ್ಸರಿಗಳು ಆರಂಭಗೊಳ್ಳಲಿವೆ.
ಈ ಯೋಜನೆ ಜಾರಿಗೆ ಒತ್ತಾಸೆಯಾಗಿ ನಿಂತು ಜಾರಿಗೊಳಿಸಲು ಮುಂದಾಗಿರುವ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಲಕ್ಷ್ಮಿ ಹೆಬ್ಬಾಳಕರ್ ಅವರು ಬೆಂಗಳೂರಿನಲ್ಲಿ ಮಾಂಟೆಸ್ಸರಿಗೆ ಚಾಲನೆ ನೀಡಿದರು.
ಈ ಸುದ್ದಿ ಓದಿ:- Gold & Silver Price Today: ಬಜೆಟ್ ಬೆನ್ನಲ್ಲೇ ಚಿನ್ನ, ಬೆಳ್ಳಿ ಬೆಲೆಯಲ್ಲಿ ಭಾರೀ ಕುಸಿತ.! ಇಂದಿನ ಬೆಲೆ ಎಷ್ಟಿದೆ ಇಲ್ಲಿ ನೋಡಿ.!
ಬೆಂಗಳೂರಿನ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಪಟ್ಟೆಗಾರಪಾಳ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯಡಿ ಹೊಸದಾಗಿ ಆರಂಭಿಸಿದ ಸರ್ಕಾರಿ ಮಾಂಟೆಸ್ಸರಿ – ಪೂರ್ವ ಪ್ರಾಥಮಿಕ ಕೇಂದ್ರ (ಎಲ್ ಕೆಜಿ, ಯುಕೆಜಿ ತರಗತಿ) ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳಕರ್, ಸರ್ಕಾರಿ ಮಾಂಟೆಸ್ಸರಿಗಳನ್ನು ಈಗ ಪ್ರಾಯೋಗಿಕವಾಗಿ ಬೆಂಗಳೂರು ನಗರ ಜಿಲ್ಲೆಯಲ್ಲಿ 250 ಅಂಗನವಾಡಿ ಕೇಂದ್ರಗಳಲ್ಲಿ ಆರಂಭಿಸಲಾಗುತ್ತಿದೆ. ರಾಜ್ಯಾದ್ಯಂತ ಮೊದಲ ಹಂತದಲ್ಲಿ 5 ಸಾವಿರ ಸರ್ಕಾರಿ ಮಾಂಟೆಸ್ಸರಿಗಳನ್ನು ತೆರೆಯಲು ನಮ್ಮ ಇಲಾಖೆ ಸನ್ನದ್ಧವಾಗಿದೆ. ಹಂತ ಹಂತವಾಗಿ ರಾಜ್ಯದ ಎಲ್ಲ ಅಂಗನವಾಡಿಗಳಲ್ಲಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗುವುದು ಎಂದರು.
ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ ಎಲ್ಲಾ ವರ್ಗದ ಮಕ್ಕಳಿಗೂ ದೊರೆಯಬೇಕೆಂಬ ಆಶಯದಿಂದ ರಾಜ್ಯ ಸರ್ಕಾರ ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಿದೆ. ನಮ್ಮ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.
ಈ ಸುದ್ದಿ ಓದಿ:- Vehicle Subsidy: ಆಟೋ ಮತ್ತು ಕಾರು ಖರೀದಿಗೆ 1 ಲಕ್ಷ ಸಹಾಯಧನ.! ಆಸಕ್ತರು ಅರ್ಜಿ ಸಲ್ಲಿಸಿ.!
ಮಕ್ಕಳ ಆರಂಭಿಕ ಶಿಕ್ಷಣ ಮತ್ತು ಆರೈಕೆಯಲ್ಲಿ ಸಾಮರ್ಥ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಿ – ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲು ಸರ್ಕಾರ ಮುಂದಾಗಿದೆ ಎಂದು ವಿವರಿಸಿದರು.
ಕಾರ್ಯಕರ್ತೆಯರ ಒತ್ತಡಕ್ಕೆ ಮಣಿದು ಆರಂಭ
ರಾಜ್ಯದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಶಿಕ್ಷಣ ಇಲಾಖೆಯಿಂದ ಆರಂಭಿಸುವ ಯೋಜನೆ ಇತ್ತು. ಆದರೆ, ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಹೋರಾಟ ನಡೆಸಿದರು. ಶಿಕ್ಷಣ ಇಲಾಖೆ ಎಲ್ ಕೆಜಿ, ಯುಕೆಜಿ ಆರಂಭಿಸಿದರೆ ಅಂಗನವಾಡಿಯಿಂದ ಮಕ್ಕಳು ದೂರವಾಗುತ್ತಾರೆ. ಇದನ್ನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ಆರಂಭಿಸಬೇಕು ಎಂದು ಒತ್ತಾಯಿಸಿದ್ದರು. ಕಾರ್ಯಕರ್ತೆಯರ ಒತ್ತಡದ ಹಿನ್ನೆಲೆ ಅಂಗನವಾಡಿಯಲ್ಲೇ ಎಲ್ ಕೆಜಿ, ಯುಕೆಜಿ ಆರಂಭಿಸಲಾಗಿದೆ ಎನ್ನುವ ವಿವರಣೆ ನೀಡಿದರು.
ಪ್ರತಿ ಮಗುವಿಗೂ ಸಿಗಲಿದೆ ಗುಣಮಟ್ಟದ ಶಿಕ್ಷಣ, ಪೌಷ್ಠಿಕ ಆಹಾರ
ಕಳೆದ 49 ವರ್ಷಗಳಿಂದ ಚಾಲ್ತಿಯಲ್ಲಿದ್ದ ನಮ್ಮ ಅಂಗನವಾಡಿ ಹೆಸರನ್ನೂ ಕೂಡ ಬದಲಾಯಿಸಿ, ಈಗ ಇವುಗಳಿಗೆ ‘ಸರ್ಕಾರೀ ಮಾಂಟೆಸ್ಸರಿ’ ಎಂದು ಹೆಸರು ಇಡಲಾಗಿದೆ. ಸಮಾಜದಲ್ಲಿ ಕೂಲಿ ಕೆಲಸ ಮಾಡುವವರಿಂದ ಹಿಡಿದು ದೊಡ್ಡ ದೊಡ್ಡ ವ್ಯಕ್ತಿಗಳಿಗೂ ನಮ್ಮ ಮಕ್ಕಳಿಗೆ ಒಳ್ಳೆಯ ಗುಣಾತ್ಮಕ ಶಿಕ್ಷಣ ಕೊಡಿಸಬೇಕೆಂಬ ಆಸೆ ಇರುತ್ತದೆ. ಆದರೆ, ಅದು ಎಲ್ಲರಿಗೂ ಸಾಧ್ಯವಾಗುವುದಿಲ್ಲ. ಹಾಗಾಗಿ, ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಸದುದ್ದೇಶದಿಂದ ಅಂಗನವಾಡಿಗಳಲ್ಲಿ ಸರ್ಕಾರಿ ಮಾಂಟೆಸ್ಸರಿಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.
ದುಬಾರಿ ಶುಲ್ಕಕ್ಕೆ ಕಡಿವಾಣ
ಇತ್ತೀಚೆಗೆ ಖಾಸಗಿ ಮಾಂಟೆಸ್ಸರಿಗೆ ವರ್ಷಕ್ಕೆ 80 ರಿಂದ 1 ಲಕ್ಷ ರೂಪಾಯಿವರೆಗೆ ಹಣ ನೀಡಬೇಕಾದ ಪರಿಸ್ಥಿತಿ ಇದೆ. ಅಷ್ಟೊಂದು ದುಬಾರಿ ಹಣವನ್ನು ಕೊಟ್ಟು ಜನಸಾಮಾನ್ಯರು ತಮ್ಮ ಮಕ್ಕಳನ್ನು ಮಾಂಟೆಸ್ಸರಿಗಳಿಗೆ ಕಳುಹಿಸಲು ಸಾಧ್ಯವಿದೆಯೇ ಪ್ರಶ್ನಿಸಿದ ಸಚಿವರು, ದುಬಾರಿ ಶುಲ್ಕಕ್ಕೆ ಕಡಿವಾಣ ಹಾಕಲು, ಗುಣಮಟ್ಟದ ಶಿಕ್ಷಣ ಮತ್ತು ಪೌಷ್ಠಿಕ ಆಹಾರ ಪ್ರತಿ ಮಗುವಿಗೂ ದೊರೆಯಬೇಕೆಂಬುದು ನಮ್ಮೆಲ್ಲರ ಆಶಯ.