KPTCL ನೇಮಕಾತಿ 2975 ಹುದ್ದೆಗಳಿಗೆ ಅರ್ಜಿ ಆಹ್ವಾನ.! SSLC ಪಾಸ್ ಆದವರು ಅರ್ಜಿ ಹಾಕಿ.!

KPTCL Recruitment

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿ(power supply company)ಗಳಲ್ಲಿ ಖಾಲಿ‌ ಇರುವ ಒಟ್ಟು 2975 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆ(Junior Station Service and Junior Power Man post)ಗಳನ್ನು ಭರ್ತಿ ಮಾಡಲು ಅರ್ಜಿ(Application) ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್(Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ವಿವರ

WhatsApp Group Join Now
Telegram Group Join Now

1. ಕಿರಿಯ ಸ್ಟೇಷನ್‌ ಪರಿಚಾರಕ: 433 ಹುದ್ದೆ
2. ಕಿರಿಯ ಪವರ್‌ ಮ್ಯಾನ್‌: 2542 ಹುದ್ದೆ

ಕವಿಪ್ರನಿನಿ ಮತ್ತು ವಿವಿಧ ವಿದ್ಯುತ್ ಸರಬರಾಜು ಕಂಪನಿಗಳ ಈ ಕೆಳಗಿನ ಯಾವುದಾದರೂ ಒಂದು ಅಧಿಕೃತ ವೆಬ್‌ಸೈಟ್ ಮುಖಾಂತರ ನಿಗದಿತ ನಮೂನೆಯಲ್ಲಿ ಆನ್ ಲೈನ್ ಮೂಲಕ ಮಾತ್ರ ಅಭ್ಯರ್ಥಿಗಳು ಅ.21ರಿಂದ ನ.20ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ…

– https://kptcl.karnataka.gov.in
– https://bescom.karnataka.gov.in
– https://cescmysore.karnataka.gov.in
– https://mescom.karnataka.gov.in
– https://hescom.karnataka.gov.in
– https://gescom.karnataka.gov.in

ಹುದ್ದೆಗಳ ವರ್ಗೀಕರಣ, ಮೀಸಲಾತಿ ವಿವರ, ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿ, ವಯೋಮಿತಿ, ಅರ್ಹತೆ, ನೇಮಕಾತಿ ವಿಧಾನ, ಪರೀಕ್ಷಾ ವಿಧಾನ, ಅರ್ಜಿಯ ನಮೂನೆ ಮತ್ತು ಇತರೆ ವಿವರಗಳನ್ನು ಒಳಗೊಂಡ ವಿಸ್ತ್ರತ ಉದ್ಯೋಗ ಪ್ರಕಟಣೆಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಎಂದು ಕೆಪಿಟಿಸಿಎಲ್‌ ನಿಗಮ ಕಾರ್ಯಾಲಯದ ನಿರ್ದೇಶಕರು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಅಗತ್ಯ ವಿದ್ಯಾರ್ಹತೆ

ಎಸ್.ಎಸ್.ಎಲ್.ಸಿ. ಅಥವಾ 10ನೇ ತರಗತಿಯ (ಸಿ.ಬಿ.ಎಸ್.ಇ/ಐ.ಸಿ.ಎಸ್.ಇ) ಪರೀಕ್ಷೆಯನ್ನು ಕರ್ನಾಟಕ ರಾಜ್ಯದ ವಿದ್ಯಾಸಂಸ್ಥೆಗಳಿಂದ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು ಮಾತ್ರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.

ಸೂಚನೆ

1) ಮೇಲೆ ತಿಳಿಸಲಾದ ವಿದ್ಯಾರ್ಹತೆಯನ್ನು ಹೊರತುಪಡಿಸಿ ಇತರೆ ಯಾವುದೇ ಸಮನಾಂತರ ವಿದ್ಯಾರ್ಹತೆಯನ್ನು (Equivalent Qualification) ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.
ii) ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ ಎಸ್.ಎಸ್.ಎಲ್.ಸಿ./10ನೇ ತರಗತಿ (ಬ್ರಿಡ್ಜ್ ಕೋರ್ಸ್) ಉತ್ತೀರ್ಣತೆಯನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ.

iii) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು, ಅಭ್ಯರ್ಥಿಗಳು ಈ ಮೇಲೆ ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಉತ್ತೀರ್ಣಗೊಂಡಿರತಕ್ಕದ್ದು ಹಾಗೂ ಅಂಕಪಟ್ಟಿಯನ್ನು ಹೊಂದಿರತಕ್ಕದ್ದು.

iv) ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಮೇಲಿನ ನಿಗದಿತ ಶೈಕ್ಷಣಿಕ ವಿದ್ಯಾರ್ಹತೆ ಪರೀಕ್ಷೆ ಬರೆದು, ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

v) ಈ ಅಧಿಸೂಚನೆಯನ್ವಯ ನೇಮಕಾತಿಗೆ ಪರಿಗಣಿಸಬೇಕಾಗುವ ವಿದ್ಯಾರ್ಹತೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ಹಕ್ಕನ್ನು ಕವಿಪ್ರನಿನಿ/ಎಸ್ಕಾಂಗಳು ಮಾತ್ರ ಹೊಂದಿರುತ್ತದೆ ಹಾಗೂ ಅಭ್ಯರ್ಥಿಗಳು ಅದಕ್ಕೆ ಬದ್ಧರಾಗಿರತಕ್ಕದ್ದು.

ಇತರೆ ಅರ್ಹತೆಗಳು

i) ಕನ್ನಡದಲ್ಲಿ ಓದುವ ಮತ್ತು ಬರೆಯುವ ಜ್ಞಾನ ಹೊಂದಿರತಕ್ಕದ್ದು,
ii) ತೃಪ್ತಿಕರವಾದ ನೇತ್ರದೃಷ್ಟಿಯನ್ನು ಹೊಂದಿರತಕ್ಕದ್ದು.
iii) ತೃಪ್ತಿಕರ ದೇಹದಾರ್ಡ್ಯವನ್ನು ಹೊಂದಿರತಕ್ಕದ್ದು. ಕಠಿಣ ಕೆಲಸಗಳಾದ ಗುಂಡಿ ತೆಗೆಯುವುದು, ಗೋಪುರ ಅಥವಾ ಕಂಬ ಹತ್ತುವುದು, ಭಾರವಾದ ವಸ್ತುಗಳನ್ನು ಸಾಗಿಸುವುದು, ತಂತಿಗಳನ್ನು ಅಳವಡಿಸುವುದು, ಕಂಬಗಳನ್ನು ಬದಲಾಯಿಸುವುದು, ಇತ್ಯಾದಿ ಕೆಲಸಕಾರ್ಯಗಳನ್ನು ನಿರ್ವಹಿಸಲು ಶಕ್ತರಿರಬೇಕು ಮತ್ತು ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹತೆ ಗಳಿಸಬೇಕು. ಈ ಮೇಲೆ ತಿಳಿಸಿರುವ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಎಲ್ಲಾ ರೀತಿಯಲ್ಲಿಯೂ ದೈಹಿಕವಾಗಿ ಸಾಮರ್ಥ್ಯ ಹೊಂದಿರತಕ್ಕದ್ದು.

ಹುದ್ದೆಗಳ ಭರ್ತಿ

i) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕವಿಪ್ರನಿನಿ ಅಥವಾ ವಿದ್ಯುತ್ ಸರಬರಾಜು ಕಂಪನಿಗಳು, ಇವುಗಳಲ್ಲಿ ಯಾವುದಾದರೂ ಒಂದು ಕಂಪನಿಗೆ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ii) ಅಭ್ಯರ್ಥಿಗಳು ಒಂದು ಹುದ್ದೆಗೆ ಒಂದಕ್ಕಿಂತ ಹೆಚ್ಚಿನ ಅರ್ಜಿ ಸಲ್ಲಿಸಿದ್ದಲ್ಲಿ, ಕೊನೆಯದಾಗಿ ಸಲ್ಲಿಸಿರುವ ಅರ್ಹ ಅರ್ಜಿಯನ್ನು ಮಾತ್ರ ಪರಿಗಣಿಸಲಾಗುವುದು. ಇನ್ನುಳಿದ ಅರ್ಜಿಗಳೊಂದಿಗೆ ಸಲ್ಲಿಸಿರುವ ಅರ್ಜಿ ಶುಲ್ಕವನ್ನು ಯಾವುದೇ ಕಾರಣಕ್ಕೂ ಹಿಂಪಾವತಿಸಲಾಗುವುದಿಲ್ಲ.
iii) ಕಿರಿಯ ಸ್ಟೇಷನ್ ಪರಿಚಾರಕ ಅಥವಾ ಕಿರಿಯ ಪವರ್‌ಮ್ಯಾನ್ ಹುದ್ದೆಗೆ ಅರ್ಜಿ ಸಲ್ಲಿಸುವಾಗ, ‘ಬ್ಯಾಕ್‌ಲಾಗ್ ಹುದ್ದೆಗಳಿಗೆ’ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಆಯ್ಕೆಯ ವಿಧಾನ

‘ಸಹನ ಶಕ್ತಿ ಪರೀಕ್ಷೆ’ಯ ಕನಿಷ್ಠ ಮೂರು ಸ್ಪರ್ಧೆಗಳಲ್ಲಿ ಅರ್ಹತೆ ಹೊಂದಿರುವಂತಹ ಅಭ್ಯರ್ಥಿಗಳನ್ನು, ಎಸ್.ಎಸ್.ಎಲ್.ಸಿ ಅಥವಾ 10ನೇ ತರಗತಿಯ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿರುವ ಶೇಕಡಾವಾರು ಅಂಕಗಳ ಜೈಷ್ಠತೆ ಆಧಾರದ ಮೇಲೆ ಕರ್ನಾಟಕ ಸರ್ಕಾರದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಪಾಲಿಸಿ, ಆಯ್ಕೆ ಮಾಡಲಾಗುವುದು.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ needs of ಕನ್ನಡ WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment