LPG
ದೇಶದ ಜನತೆಗೆ ಅಕ್ಟೋಬರ್(October) ತಿಂಗಳ ಮೊದಲ ದಿನವೇ ಭರ್ಜರಿ ಶಾಕ್(Shock) ತಟ್ಟಿದೆ. ಗ್ಯಾಸ್ ಸಿಲಿಂಡರ್ ಬೆಲೆ(Gas Cylinder Price) ಇಂದಿನಿಂದ ಭರ್ಜರಿ ಏರಿಕೆಯಾಗಿದ್ದು(Hike), ಅಕ್ಟೋಬರ್‌ನಲ್ಲಿ ನವರಾತ್ರಿ(Navratri), ದಸರಾ(Dussehra) ಮತ್ತು ದೀಪಾವಳಿ(Diwali festival)ಯಂತಹ ಹಬ್ಬಗಳಿರುವುದರಿಂದ ಜನರ ಜೇಬಿಗೆ ಕತ್ತರಿ ಬೀಳಲಿದೆ. ಎಲ್ಲೆಲ್ಲಿ ಯಾವ ಗ್ಯಾಸ್ ಬೆಲೆ ಏರಿಕೆಯಾಗಿದೆ ಅನ್ನೋದರ ವಿವರ ಇಲ್ಲಿದೆ.
ಈ ಸುದ್ದಿ ಓದಿ:- HDFC Scholarship: ವಿದ್ಯಾರ್ಥಿಗಳಿಗೆ HDFC ಬ್ಯಾಂಕ್ ನಿಂದ ಸಿಗಲಿದೆ 75,000 ವಿದ್ಯಾರ್ಥಿ ವೇತನ.!
ಅಂದಹಾಗೆ, LPG ಬೆಲೆಗಳಲ್ಲಿನ ಆಗಾಗ್ಗೆ ಏರಿಳಿತಗಳು ಮಾರುಕಟ್ಟೆಯ ಕ್ರಿಯಾತ್ಮಕ ಸ್ವರೂಪವನ್ನು ಪ್ರತಿಬಿಂಬಿಸುತ್ತವೆ. ಇದು ಅಂತರರಾಷ್ಟ್ರೀಯ ತೈಲ ಬೆಲೆಗಳು(Oil prices), ತೆರಿಗೆ ನೀತಿಗಳು ಮತ್ತು ಪೂರೈಕೆ-ಬೇಡಿಕೆ ಡೈನಾಮಿಕ್ಸ್‌ನಂತಹ ಅಂಶಗಳಿಂದ ಪ್ರಭಾವಿತವಾಗಿರುತ್ತದೆ. ಇತ್ತೀಚಿನ ಬೆಲೆ ಏರಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗ ಪಡಿಸಲಾಗಿಲ್ಲವಾದರೂ, ತೈಲ ಮಾರುಕಟ್ಟೆ ಕಂಪನಿಗಳು ಬದಲಾಗುತ್ತಿರುವ ಮಾರುಕಟ್ಟೆ ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಿವೆ ಎಂಬುದು ಸ್ಪಷ್ಟವಾಗಿದೆ.
ಈ ಬಾರಿ ಸಾಲು ಸಾಲು ಹಬ್ಬಗಳು ಇರುವುದರಿಂದ ಇಂದು ಸಿಲಿಂಡರ್ ಬೆಲೆ ಗಣನೀಯವಾಗಿ ಇಳಿಕೆಯಾಗಬಹುದು ಎಂದು ಹಲವರು ಭವಿಷ್ಯ ನುಡಿದಿದ್ದರು. ಆದರೆ, ಕಳೆದ 3 ತಿಂಗಳಿನಂತೆ ಈ ಬಾರಿಯೂ ಸಿಲಿಂಡರ್ ಬೆಲೆಯಲ್ಲಿ ಏರಿಕೆ ಉಂಟಾಗಿದ್ದು, ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಗೆ ಬಂದಿವೆ. ಬೆಲೆ ಕಡಿತದ ನಿರೀಕ್ಷೆಯಲ್ಲಿದ್ದ ಜನರಿಗೆ ಶಾಕ್ ತಟ್ಟಿದೆ. ಅಂದಹಾಗೆ ಈ ಬೆಲೆ ಏರಿಕೆಯು ಒಂದು ವರ್ಗಕ್ಕೆ ಸೀಮಿತವಾಗಿದ್ದು, ಬೆಲೆ ಏರಿಕೆಯಿಂದ ಯಾರ ಜೇಬಿಗೆ ಕತ್ತರಿ ಬೀಳಲಿದೆ ಅನ್ನೋದನ್ನು ಇಲ್ಲಿ ಕೊಡಲಾಗಿದೆ.
ಈ ಸುದ್ದಿ ಓದಿ:- Airport Recruitment: SSLC ಪಾಸ್ ಆದವರಿಗೆ ವಿಮಾನ ನಿಲ್ದಾಣ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 24,960/-
ಐಓಸಿಎಲ್ ವೆಬ್‌ಸೈಟ್ ಪ್ರಕಾರ, 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್‌ನ ಹೊಸ ಬೆಲೆಗಳು ಇಂದಿನಿಂದ ಅನ್ವಯವಾಗಲಿವೆ. ಆದ್ರೆ ಬೆಲೆಗಳು ನಗರದಿಂದ ನಗರಕ್ಕೆ ವ್ಯತ್ಯಾಸವಾಗಿರುತ್ತವೆ. ದೆಹಲಿಯಿಂದ ಮುಂಬೈನವರೆಗೂ ಬೆಲೆಗಳು ಭಿನ್ನವಾಗಿರುತ್ತವೆ. ಮುಂಬೈನಲ್ಲಿ 1644 ರೂಪಾಯಿಯಿದ್ದ 19 ಕೆಜಿ ಸಿಲಿಂಡರ್ ಬೆಲೆ ಇದೀಗ 1,692.50 ರೂ ಆಗಿದೆ. ಸೆಪ್ಟೆಂಬರ್‌ನಲ್ಲಿ 39 ರೂ.ಗಳಷ್ಟು ಏರಿಕೆಯಾಗಿತ್ತು.
ಕೋಲ್ಕತ್ತಾದಲ್ಲಿ 1,802.50 ರೂ.ನಿಂದ 1,850.50 ರೂ.ಆಗಿದೆ. ಚೆನ್ನೈನಲ್ಲಿ 1,855 ರೂ.ಯಿದ್ದ 19 ಕೆಜಿ ಸಿಲಿಂಡರ್ ಬೆಲೆ 1,903 ರೂ.ಆಗಿದೆ. ಬೆಂಗಳೂರಿನಲ್ಲಿಯೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ 48 ರೂಪಾಯಿ ಏರಿಕೆಯಾಗಿದೆ. ಸದ್ಯ 19 ಕೆಜಿ ಸಿಲಿಂಡರ್ ಬೆಲೆ 1,818 ರೂಪಾಯಿ ಆಗಿದೆ.
ಜುಲೈ-2024 ನಂತರ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಜುಲೈನಲ್ಲಿ ಆಯಿಲ್ ಮಾರ್ಕೆಟಿಂಗ್ ಕಂಪನಿಗಳು ಬೆಲೆಗಳನ್ನು ಕೊಂಚ ಇಳಿಕೆ ಮಾಡಿಕೊಂಡಿದ್ದವು. ದೇಶದ ರಾಜಧಾನಿ ದೆಹಲಿಯಲ್ಲಿ 30 ರೂಪಾಯಿವರೆಗೂ ಇಳಿಕೆಯಾಗಿತ್ತು. ಆದರೆ ಆಗಸ್ಟ್‌ನಲ್ಲಿ 8.50 ರೂಪಾಯಿ ಏರಿಕೆಯಾಗಿತ್ತು. ನಂತರ ಇದೀಗ ಮೂರು ತಿಂಗಳು ಸೇರಿ ಒಟ್ಟು 39 ರೂಪಾಯಿ ಬೆಲೆ ಏರಿಕೆಯಾಗಿದೆ.
ಈ ಸುದ್ದಿ ಓದಿ:- UPI Payment: ಮೊಬೈಲ್‌ನಲ್ಲಿ ಹಣ ಕಳಿಸೋರಿಗೆ ಈ ರೂಲ್ಸ್ ಕಡ್ಡಾಯ.!
19 ಕೆಜಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆಯಲ್ಲಿ ನಿರಂತರ ಬದಲಾವಣೆಯಾಗುತ್ತಿದ್ದರೆ, ಮತ್ತೊಂದೆಡೆ, ತೈಲ ಮಾರುಕಟ್ಟೆ ಕಂಪನಿಗಳು ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಮಾತ್ರ ಸ್ಥಿರವಾಗಿದೆ. ಮಹಿಳಾ ದಿನಾಚರಣೆಯಂದು ಗೃಹ ಬಳಕೆ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಸುವ ಮೂಲಕ ಕೇಂದ್ರ ಸರ್ಕಾರ ಬಿಗ್ ರಿಲೀಫ್ ನೀಡಿತ್ತು.
ಸದ್ಯ ಗೃಹ ಬಳಕೆಯ 14 ಕೆಜಿ ಎಲ್‌ಪಿಜಿ ಒಂದು ಸಿಲಿಂಡರ್ ಬೆಲೆ ದೆಹಲಿಯಲ್ಲಿ 803 ರೂ., ಕೋಲ್ಕತ್ತಾದಲ್ಲಿ 829 ರೂ., ಮುಂಬೈನಲ್ಲಿ 802.50 ರೂ. ಮತ್ತು ಚೆನ್ನೈನಲ್ಲಿ 818.50 ರೂ. ಮತ್ತು ಬೆಂಗಳೂರಿನಲ್ಲಿ 805.50 ರೂಪಾಯಿ ಆಗಿದೆ.