Metro Recruitment: ನಮ್ಮ ಮೆಟ್ರೊದಲ್ಲಿ ಉದ್ಯೋಗಾವಕಾಶ, ವೇತನ:- 32,000/- ಆಸಕ್ತರು ಅರ್ಜಿ ಹಾಕಿ.!

Metro Recruitment

ಬೆಂಗಳೂರಿನ ಪ್ರತಿಷ್ಠಿತ ಸಮೂಹ ಸಾರಿಗೆ ವ್ಯವಸ್ಥೆಯಾದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಸಂಸ್ಥೆ (Bangalore Metro Rail Corporation Limited -BMRCL)ಯಲ್ಲಿ ನಾನಾ ಹುದ್ದೆಗಳು(Jobs) ಖಾಲಿಯಿದ್ದು, ಗುತ್ತಿಗೆ ಆಧಾರದ ಮೇಲೆ ಶೀಘ್ರವೇ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳು ಮತ್ತು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೌದು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL Recruitment) ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದ ಭದ್ರತಾ(Operations and Maintenance Division Security) ಮತ್ತು ಸಂಬಂಧಿತ ಕೆಲಸಗಳನ್ನು ನೋಡಿಕೊಳ್ಳಲು ಭಾರತೀಯ ಸೇನೆ/ ನೌಕಾಪಡೆ/ ವಾಯುಪಡೆ/ ರಾಜ್ಯ ಪೊಲೀಸ್ ಇಲಾಖೆ/ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)/ ಕಾವಲು ಪಡೆ (BSF)/ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಹಾಗೂ ಇತರ ಸೇವೆಗಳಲ್ಲಿರುವ ಸಿಬ್ಬಂದಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ಎಲ್ಲಾ ನೇಮಕಾತಿಗಳು(Appointments) ಸಂಪೂರ್ಣವಾಗಿ ಒಪ್ಪಂದ ಆಧಾರಿತ(Contract based)ವಾಗಿರುತ್ತವೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಈ ಸುದ್ದಿ ಓದಿ:- Mudra Yojana : ನಿಮ್ಮ ಬಳಿ ಈ ದಾಖಲೆಗಳು ಇದ್ದರೆ ಸರ್ಕಾರದಿಂದ ಸಿಗಲಿದೆ 20 ಲಕ್ಷ ಸಾಲ.!

ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ (Qualification) ವಯೋಮಿತಿ (Age Limit) ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ (Notification) ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ (Official Website) ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಈ ಹುದ್ದೆಗೆ ಆಫ್​​​ಲೈನ್​​ ಮೂಲಕ ಅರ್ಜಿ ಸಲ್ಲಿಸಬೇಕು.

ಹುದ್ದೆಗಳ ವಿವರ ಹೀಗಿದೆ

Bangalore Metro Rail Corporation Limited BMRCL Recruitment 2024
ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)

– ಸಂಸ್ಥೆಯ ಹೆಸರು : ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ (BMRCL)
– ಕೆಲಸದ ಸ್ಥಳ: ಬೆಂಗಳೂರು
– ಹುದ್ದೆಯ ಹೆಸರು: ಸಹಾಯಕ ಭದ್ರತಾ ಅಧಿಕಾರಿ
– ಸಂಬಳ: 32,000 ರೂ, ಒಟ್ಟು ಹುದ್ದೆಗಳು 58
– ವಯೋಮಿತಿ: 65 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು.
– ಮೀಸಲಾತಿ ಇರುವವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
– ಆಯ್ಕೆ ವಿಧಾನ: ದೈಹಿಕ ಪರೀಕ್ಷೆ, ಅರ್ಹತೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ
– ಭತ್ಯೆಗಳು: ವಾಹನ ಭತ್ಯೆ, ಜಿಎಪಿಎ ಮತ್ತು ಜಿಎಂಸಿ, ನಿವೃತ್ತಿವೇತನ ಯೋಜನೆ (NPS), ಹಾಗೂ ಕಂಪನಿಯ ನಿಯಮಾವಳಿಗಳ ಪ್ರಕಾರ ಇತರ ಅನುಕೂಲಗಳು.

ಒಪ್ಪಂದ ಅವಧಿ

60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅಭ್ಯರ್ಥಿಗಳಿಗೆ ಆರಂಭದಲ್ಲಿ 3 ವರ್ಷಗಳ ಅವಧಿಗೆ ಮತ್ತು 60 ವರ್ಷಕ್ಕಿಂತ ಹೆಚ್ಚು ವಯಸ್ಸಿನವರಿಗೆ 1 ವರ್ಷಗಳ ಅವಧಿಗೆ ಒಪ್ಪಂದ ನೀಡಲಾಗುತ್ತದೆ. ಇದು ಆವಶ್ಯಕತೆ ಮತ್ತು ಪೂರಕ ಕಾರ್ಯಕ್ಷಮತೆಯ ಆಧಾರದ ಮೇಲೆ ವಿಸ್ತರಿಸಲಾಗುತ್ತದೆ.

ಸಹಾಯಕ ಭದ್ರತಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವಿಳಾಸ

ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, BMTC ಕಾಂಪ್ಲೆಕ್ಸ್, KH ರಸ್ತೆ, ಶಾಂತಿನಗರ, ಬೆಂಗಳೂರು – 560027

ಅರ್ಜಿ ಪ್ರಕ್ರಿಯೆ ಪ್ರಮುಖ ದಿನಾಂಕ

– ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-08-2024
– ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 09- 09 -2024
– BMRCL ಸಂಸ್ಥೆಯ ಅಧಿಕೃತ ವೆಬ್ಸೈಟ್: https://english.bmrc.co.in

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment