Land Map: ರೈತರಿಗೆ ಗುಡ್‌ ನ್ಯೂಸ್: ಈಗ ಮೊಬೈಲ್‌ನಲ್ಲೇ ಪೋಡಿ ನಕ್ಷೆ ಪಡೆಯಬಹುದು.! ಇಲ್ಲಿದೆ ಫುಲ್‌‌ ಡಿಟೇಲ್ಸ್

Land Map:

ಕೃಷಿ(agriculture) ಈಗಿನ ಕಾಲದಲ್ಲಿಯೂ ಸಹ ಭಾರತದ ಆರ್ಥಿಕತೆಯಲ್ಲಿ ಒಂದು ಪ್ರಮುಖ ಪಾತ್ರವಾಗಿ ಕಾರ್ಯನಿರ್ವಹಿಸುತ್ತಿದೆ. ಇದೀಗ ಕರ್ನಾಟಕದ ಎಲ್ಲಾ ರೈತರಿಗೆ ರಾಜ್ಯ ಸರ್ಕಾರ(State Govt)ವು ಮತ್ತೊಂದು ಭರ್ಜರಿ ಬಹುಮಾನ ನೀಡಿದೆ. ನಿಮ್ಮ ಅಥವಾ ರೈತರ ಜಮೀನಿನ ಅಥವಾ ಹೊಲದ ಮ್ಯಾಪ್(Field map) ಮತ್ತು ನಕ್ಷೆ ತಮ್ಮ ತಮ್ಮ ಮೊಬೈಲ್(Mobile) ನಲ್ಲಿಯೇ ಲಭ್ಯವಿರುವಂತೆ ಮಾಡಲಾಗಿದೆ.

ಈ ಸುದ್ದಿ ಓದಿ:- Corp Relief: ಬೆಳೆ ಪರಿಹಾರ ಹಣ ಜಮೆ ಆಗದ ರೈತರು ತಕ್ಷಣ ಈ ಕೆಲಸ ಮಾಡಿ ನಿಮ್ಮ ಖಾತೆಗೆ ಪರಿಹಾರ ಹಣ ಜಮೆ ಆಗುತ್ತೆ.!

ಹೌದು, ರೈತರೇ ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶ ಜಾರಿಗೊಳಿಸಲಾಗಿದೆ ಹಾಗೆ ತಮ್ಮ ಜಮೀನಿಗೆ ಸಂಬಂಧಿಸಿದ 11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರ ನಕ್ಷೆಗಳು ಇನ್ನು ಮುಂದೆ ಆನ್‌ಲೈನ್‌ನಲ್ಲೇ ಸಿಗಲಿದೆ.

WhatsApp Group Join Now
Telegram Group Join Now

11ಇ, ಪೋಡಿ, ಭೂ ಪರಿವರ್ತನೆ ಸ್ಕೆಚ್‌, ಹದ್ದುಬಸ್ತು ಮತ್ತು ಇತರೆ ನಕ್ಷೆಗಳಿಗೆ ಅರ್ಜಿ ಸಲ್ಲಿಸಿದ ನಾಗರಿಕರು https:// 103,138.196.154/service19/Report/ ವೆಬ್​ಸೈಟ್ ಮೂಲಕ ತಮ್ಮ ಅರ್ಜಿಯ ಸ್ಥಿತಿಗತಿಯನ್ನು ಸಹ ವೀಕ್ಷಿಸಬಹುದು. ಅರ್ಜಿ ಸ್ವೀಕಾರಗೊಂಡು ಸರ್ವೇ ಸಿಬ್ಬಂದಿ ತಮ್ಮ ಜಮೀನಿಗೆ ಬಂದು ಸಂಬಂಧಿಸಿದ ಮಾಪನ ಕಾರ್ಯ ಮುಗಿಸಿ ನಕ್ಷೆ ಅನುಮೋದಿಸಿದ ತಕ್ಷಣ ಇದೇ ವೆಬ್‌ಸೈಟ್‌ನಲ್ಲಿ ಆ ನಕ್ಷೆಗಳನ್ನು ಸಾರ್ವಜನಿಕರು ಮುದ್ರಣ ಪ್ರತಿ ಪಡೆದುಕೊಳ್ಳಬಹುದು.

ಈ ಸುದ್ದಿ ಓದಿ:- Gold Rate: ಚಿನ್ನದ ಬೆಲೆ ಶೀಘ್ರದಲ್ಲೇ 18,000 ರೂಪಾಯಿ ಹೆಚ್ಚಾಗಲಿದೆ.!

ಅರ್ಜಿ ಸಲ್ಲಿಸುವಾಗ ನಾಗರಿಕರು ಹಣ ಪಾವತಿಸಿರುವ ಕಾರಣ ನಕ್ಷೆ ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ಮುದ್ರಣ ಪ್ರತಿ ಪಡೆಯಲು ಯಾವುದೇ ಹೆಚ್ಚುವರಿ ಹಣ ಕೊಡಬೇಕಾಗಿರುವುದಿಲ್ಲ. ಇದರಿಂದ ತಮ್ಮ ನಕ್ಷೆಗಳ ಪ್ರಿಂಟ್‌ ಔಟ್‌ ಪಡೆಯಲು ಸರ್ವೆ ಕಚೇರಿಗಳಿಗೆ ಹೋಗಬೇಕಾಗಿರುವುದಿಲ್ಲ.

ಪೋಡಿ ಎಂದರೇನು?:

ಪೋಡಿ ಎಂದರೆ ಜಮೀನಿನ ಭಾಗ ಮಾಡುವುದು ಎಂದರ್ಥ. ಅಂದರೆ ಒಂದೇ ಸರ್ವೇ ನಂಬರಿನಲ್ಲಿ ಒಬ್ಬರಿಗಿಂತ ಹೆಚ್ಚು ಜನರ ಹೆಸರಿದ್ದರೆ ಅದನ್ನು ಪ್ರತ್ಯೇಕವಾಗಿ ಎಲ್ಲಾ ಸದಸ್ಯರ ಹೆಸರಿನ ಮೇಲೆ ಸರ್ವೇ ನಂಬರ್ ಮಾಡುವುದನ್ನೇ ಪೋಡಿ ಎಂದು ಕರೆಯುವರು.

ಪೋಡಿ ನಕ್ಷೆ ಜಮೀನಿಗೆ ಅಗತ್ಯ ಏಕೆ?

ಕುಟುಂಬದ ಸದಸ್ಯರ ಪಾಲುಗಾರಿಕೆ, ಭೂ ಆಸ್ತಿಯ ಕೆಲವು ಭಾಗ ಮಾರಾಟ, ದಾನಪತ್ರ, ನಿವೇಶನಕ್ಕೆ ಬಳಕೆ, ಭೂ ಪರಿವರ್ತನೆ ಹೀಗೆ ಹಲವಾರು ಚಟುವಟಿಕೆಗಳಿಗೆ ಪೋಡಿ ನಕ್ಷೆ ತುಂಬಾ ಅವಶ್ಯಕವಾಗಿದೆ. ಒಂದು ಸರ್ವೇ ನಂಬರಿನಲ್ಲಿ ಹಲವರ ಹೆಸರಿದ್ದರೆ ಮುಂದೆ ಸರ್ಕಾರದಿಂದ ಸೌಲಭ್ಯ ಪಡೆಯುವುದಕ್ಕೆ ತೊಂದರಯಾಗುತ್ತದೆ. ಬ್ಯಾಂಕಿನಲ್ಲಿ ಸಾಲ ಸೌಲಭ್ಯವೂ ಸಿಗುವುದಿಲ್ಲ. ಜಮೀನು ಮಾರಾಟ ಸಂದರ್ಭದಲ್ಲಿಯೂ ತೊಡಕಾಗುವ ಸಾಧ್ಯತೆ ಇರುತ್ತದೆ.

ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ಲೈನ್ ವ್ಯವಸ್ಥೆಯನ್ನು ಮಾಡಿದೆ. ರೈತರು ಸ್ವತಃ ಅವರೆ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ತಯಾರಿಸಿಕೊಳ್ಳಬಹುದು. ಸಹೋದರರು, ಸಂಬಂಧಿಕರು ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನ ಭಾಗ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿದೆ.

ಮೊಬೈಲ್ ನಲ್ಲಿ ಪೋಡಿ ನಕ್ಷೆ ಪಡೆಯುವುದೇಗೆ?

ರೈತರು ಆನ್​ಲೈನ್ ಮೂಲಕ ಪೋಡಿ ನಕ್ಷೆ ಪಡೆಯಲು ಈ https://bhoomojini.karnataka.gov.in/Service27 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆಯಪ್ ಪೇಜ್ ಓಪನ್ ಆಗುತ್ತದೆ ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು.

ನಂತರ ಮೊಬೈಲ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿದ ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ಹಾಗೂ ಪಹಣಿಯಲ್ಲಿ ಹೆಸರು ಒಂದೇ ರೀತಿಯಿದ್ದರೆ ಸಮಸ್ಯೆಯಾಗುವುದಿಲ್ಲ. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಪೋಡಿ ನಕ್ಷೆ ಸಿಗುತ್ತದೆ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment