Post Office Recruitment: ಅಂಚೆ ಇಲಾಖೆಯಲ್ಲಿರುವ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ಅರ್ಜಿ‌ಸಲ್ಲಿಸುವ ಡೈರೆಕ್ಟ್‌ ಲಿಂಕ್‌ ಇಲ್ಲಿದೆ ನೋಡಿ.! ವೇತನ 29,380

Post Office

ಸರ್ಕಾರಿ ಉದ್ಯೋಗ(Govt job) ಬೇಕೆಂದು ಕಾದು ಕುಳಿತಿರುವವರಿಗೆ ಭಾರತೀಯ ಅಂಚೆ ಇಲಾಖೆ (India Post Office) ಗುಡ್‌ನ್ಯೂಸ್‌ ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ (India Post GDS Recruitment 2024).

ಈ ಸುದ್ದಿ ಓದಿ:- KSRTC: ಬಸ್ ದರ ಹೆಚ್ಚಳದ ಬಗ್ಗೆ ಮಹತ್ವದ ಘೋಷಣೆ ನೀಡಿದ ಸಾರಿಗೆ ಸಚಿವರು.!

ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜುಲೈ 15 ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5 ಆಗಿದೆ.

WhatsApp Group Join Now
Telegram Group Join Now

ತಡ ಮಾಡದೇ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ನಿಮ್ಮ ಕನಸಿನ ಸರ್ಕಾರಿ ಉದ್ಯೋಗವನ್ನು ಪಡೆಯಿರಿ. ಇಂದಿನ ಈ ಲೇಖನದಲ್ಲಿ ಹುದ್ದೆಗಳ ಬಗ್ಗೆ ವಿವರವಾಗಿ ತಿಳಿಸಿಕೊಡಲಾಗಿದೆ. ಸಂಪೂರ್ಣವಾಗಿ ಈ ಲೇಖನವನ್ನು ಓದಿ ನಂತ್ರ, ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.

ಕರ್ನಾಟಕದಲ್ಲಿಯೂ ಇದೆ ಹುದ್ದೆ

ಕರ್ನಾಟಕದ ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಈ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇಂಗ್ಲಿಷ್‌ ಮತ್ತು ಗಣಿತ ವಿಷಯವನ್ನು ಒಳಗೊಂಡಿರುವುದು ಕಡ್ಡಾಯ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಆಗಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000 ರೂ. – 29,380 ರೂ. ಮಾಸಿಕ ವೇತನವಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ ಹೀಗಿದೆ…

– ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/Reg_validation.aspx)
ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನಮೂದಿಸಿ.
– ರಚಿಸಲಾದ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
– ಈಗ ಅಪ್ಲಿಕೇಷನ್‌ ಫಾರಂನಲ್ಲಿ ಕಂಡುಬರುತ್ತದೆ.
– ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
– ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
– ನಿಮ್ಮ ಇತ್ತೀಚಿನ ಫೋಟೊ ಮತ್ತು ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
– ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
– ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://indiapostgdsonline.gov.in/ಕ್ಕೆ ಭೇಟಿ ನೀಡಿ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment