ದೇಶದಾದ್ಯಂತ ಇರುವ ಎಲ್ಲಾ ಉದ್ಯೋಗ ಆಕಾಂಕ್ಷಿಗಳಿಗೆ, ಕೇಂದ್ರ ಸರ್ಕಾರದ ಕಡೆಯಿಂದ ಆಗುತ್ತಿರುವ ಮತ್ತೊಂದು ನೇಮಕಾತಿ ಬಗ್ಗೆ ವಿವರವನ್ನು ಈ ಲೇಖನದ ಮೂಲಕ ತಿಳಿಸಿ ಕೊಡುತ್ತಿದ್ದೇವೆ. ಸಮಾಧಾನಕರ ಸಂಗತಿ ಏನೆಂದರೆ SSLC ಉತ್ತೀರ್ಣ ಆಗಿದ್ದರೂ ಸಾಕು ಆ ಅಭ್ಯರ್ಥಿಗಳು ಕೂಡ ಈ ಹುದ್ದೆ ಪಡೆಯಬಹುದಾಗಿದೆ.
ಕೇಂದ್ರ ಸರ್ಕಾರದ ರೈಲ್ವೆ ಇಲಾಖೆಯ ಭಾಗವಾಗಿ ಕಾರ್ಯ ನಿರ್ವಹಿಸುವಂತಹ ಅವಕಾಶ ಸಿಗುತ್ತಿತ್ತು ಈ ಬಗ್ಗೆ ಆಸಕ್ತಿ ಇರುವವರಿಗ ಅಧಿಕೃತ ಇಲಾಖೆ ನೋಟಿಫಿಕೇಶನ್ ಆಧಾರಿತವಾಗಿ ಇದು ಯಾವ ಬಗೆಯ ಹುದ್ದೆ, ನಿಮ್ಮ ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ? ಅರ್ಹತಾ ಮಾನದಂಡಗಳೇನು? ಎಲ್ಲಿ ಕಾರ್ಯನಿರ್ವಹಿಸಬೇಕು? ಇತ್ಯಾದಿ ಎಲ್ಲಾ ಅವಶ್ಯಕ ವಿವರಗಳನ್ನು ತಿಳಿಸುತ್ತಿದ್ದೇವೆ. ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ (ನಾರ್ಥ್ ಈಸ್ಟರ್ನ್ ರೈಲ್ವೇ ವಿಭಾಗ)
ಹುದ್ದೆ ಹೆಸರು:- ಅಪ್ರೆಂಟಿಸ್ ಹುದ್ದೆಗಳು
* ಫಿಟ್ಟರ್
* ವೆಲ್ಡರ್
* ಎಲೆಕ್ಟ್ರಿಷಿಯನ್
* ಕಾರ್ಪೆಂಟರ್
* ಪೇಂಟರ್
* ಮಶಿನಿಸ್ಟ್
* ಟರ್ನರ್
* ಮೆಕ್ಯಾನಿಕ್ ಡಿಸೇಲ್
* ಟ್ರಿಮ್ಮರ್
ಒಟ್ಟು ಹುದ್ದೆಗಳ ಸಂಖ್ಯೆ:- 1104 ಹುದ್ದೆಗಳು
ಉದ್ಯೋಗ ಸ್ಥಳ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳು ಭಾರತದಾದ್ಯಂತ ಯಾವುದೇ ಭಾಗದಲ್ಲಿ ಕಾರ್ಯ ನಿರ್ವಹಿಸಲು ತಯಾರಾಗಿರಬೇಕು.
ವೇತನ ಶ್ರೇಣಿ:- ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಆಯ ಟ್ರೇಡ್ ಗಳ ಅನುಗುಣವಾಗಿ ಮಾಸಿಕ ವೇತನ ಶ್ರೇಣಿ ನಿಗದಿಪಡಿಸಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
* ಆಯ ಹುದ್ದೆಗಳಿಗೆ ಅನುಗುಣವಾದ ಟ್ರೇಡ್ ಗಳಲ್ಲಿ ITI ವಿದ್ಯಾಭ್ಯಾಸ ಪೂರ್ತಿ ಗೊಳಿಸಬೇಕು.
ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 15 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿಯು 24 ವರ್ಷಗಳು
* 12 ಜೂನ್ 2024ಕ್ಕೆ 15 ವರ್ಷಗಳನ್ನು ಪೂರೈಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ
* ಆಯ್ದ ಕೆಲವು ವರ್ಗಗಳಿಗೆ ಮೀಸಲಾತಿ ಅನುಗುಣವಾಗಿ ವಯೋಮಿತಿ ಸಡಿಲಿಕೆ ಕೂಡ ಇರುತ್ತದೆ. ಇದರ ವಿವರ ಹೀಗಿದೆ.
1. SC / ST ಅಭ್ಯರ್ಥಿಗಳಿಗೆ 5 ವರ್ಷಗಳು
2. OBC ಅಭ್ಯರ್ಥಿಗಳಿಗೆ 3 ವರ್ಷಗಳು
3. PWD ಅಭ್ಯರ್ಥಿಗಳಿಗೆ 10 ವರ್ಷಗಳು
ಅರ್ಜಿ ಸಲ್ಲಿಸುವ ವಿಧಾನ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಟ್ಟು ನೋಟಿಫಿಕೇಶನ್ ಪೂರ್ತಿ ಓದಿ ಅರ್ಥೈಸಿಕೊಳ್ಳಿ
* https://apprentice.rrcner.net/ ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಿ.
* ಅರ್ಜಿ ಸಲ್ಲಿಸಲು ಸೂಚಿಸಿರುವ ಫಾರ್ಮೆಟ್ ಓಪನ್ ಆಗುತ್ತದೆ ಇದರಲ್ಲಿ ಅಭ್ಯರ್ಥಿಯ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ ನೀಡಿರುವ ಸೂಚನೆಯ ಪ್ರಕಾರವಾಗಿ ಭಾವಚಿತ್ರ, ಸಹಿ ಇತ್ಯಾದಿಗಳನ್ನು ಕೂಡ ಸ್ಕ್ಯಾನ್ ಮಾಡಿ ಸರಿಯಾದ ವಿಧಾನದಲ್ಲಿ ಅಪ್ಲೋಡ್ ಮಾಡಿ
* ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವಯೋಮಿತಿ ಮಾನದಂಡಗಳು ಹಾಗೂ ವಯೋಮಿತಿ ಸಡಿಲಿಕೆಗೆ ಸಂಬಂಧಿಸಿದ ದಾಖಲೆ ಪತ್ರಗಳ ಕಾಪಿಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
* ಅಭ್ಯರ್ಥಿಯ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿರುತ್ತದೆ, ಆನ್ಲೈನಲ್ಲಿ ಅರ್ಜಿ ಶುಲ್ಕ ಪಾವತಿಸಿ ರಸೀದಿ ಸಂಖ್ಯೆಯನ್ನು ನಮೂದಿಸಿ
* ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ತಿಗೊಂಡ ಮೇಲೆ ತಪ್ಪದೇ ಅರ್ಜಿ ಸ್ವೀಕೃತಿ ಪ್ರತಿ ಪಡೆದುಕೊಳ್ಳಿ ಈ ನೇಮಕಾತಿ ಪ್ರಕ್ರಿಯೆ ಪೂರ್ತಿಕೊಳ್ಳುವವರೆಗೂ ಇದರ ಅಗತ್ಯತೆ ಇರುತ್ತದೆ
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ ಅಥವಾ UPI ಆಧಾರಿತ ಆಪ್ ನಲ್ಲಿ ಪಾವತಿ ಮಾಡಬಹುದು
• SC/ST, ಮಹಿಳಾ, PWD ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇರುವುದಿಲ್ಲ
• ಉಳಿದ ಎಲ್ಲಾ ಅಭ್ಯರ್ಥಿಗಳಿಗೆ – ರೂ. 100
ಆಯ್ಕೆ ಪ್ರಕ್ರಿಯೆ:-
* ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ನಿಗದಿಪಡಿಸಿರುವ ಶೈಕ್ಷಣಿಕ ವಿದ್ಯಾರ್ಥಿಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ತಯಾರಿಸಿ, ಆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 12 ಜೂನ್ 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 11 ಜುಲೈ, 2024
* ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ – 11 ಜುಲೈ, 2024.