Railway Recruitment: ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನ ವೇತನ:- 35,400/-

Railway Recruitment:

ಸರ್ಕಾರಿ ಸಂಸ್ಥೆಗಳಲ್ಲಿ ಒಂದಾದ ರೈಲ್ವೆ ನೇಮಕಾತಿ ಮಂಡಳಿ(Railway Recruitment Board) ಈ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹೌದು, ಭಾರತೀಯ ರೈಲ್ವೆ(Indian Railway) ಇಲಾಖೆಯಲ್ಲಿ ಖಾಲಿ ಇರುವ 7,951 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಸುದ್ದಿ ಓದಿ:- Swavalambi Sarathi Scheme: ಸ್ವಂತ ವಾಹನ ಖರೀದಿಗೆ ಸರ್ಕಾರದಿಂದ 4 ಲಕ್ಷ ಸಹಾಯಧನ.!

ಈ ನೇಮಕಾತಿ ಅಧಿಸೂಚನೆಯಡಿ 7,934 ಜೂನಿಯರ್ ಎಂಜಿನಿಯರ್, ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಮತ್ತು ಕೆಮಿಕಲ್ ಮತ್ತು ಮೆಟಲರ್ಜಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 13 ಕೆಮಿಕಲ್ ಸೂಪರ್ವೈಸರ್, ರಿಸರ್ಚ್ ಮತ್ತು ಮೆಟಲರ್ಜಿಕಲ್ ಸೂಪರ್ವೈಸರ್/ರಿಸರ್ಚ್( (Junior Engineer, Depot Material Superintendent and Chemical & Metallurgical Assistant)-) ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ.

WhatsApp Group Join Now
Telegram Group Join Now

ರೈಲ್ವೆ ಇಲಾಖೆಯ ಈ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ನೇಮಕಾತಿಗೆ ನಿಗದಿಪಡಿಸಿರುವಂತಹ ಪ್ರಮುಖ ದಿನಾಂಕಗಳು ಹಾಗೂ ಇತರೆ ಅವಶ್ಯಕ ಮಾಹಿತಿಗಳನ್ನು ಇಲ್ಲಿ ನೀಡಲಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಾಗೂ ಉದ್ಯೋಗ ನಿರೀಕ್ಷೆಯಲ್ಲಿರುವಂತಹ ಅಭ್ಯರ್ಥಿಗಳು ಈ ಲೇಖನವನ್ನು ಓದಿ ನಂತರ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ಅರ್ಹತೆ

ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಸಂಬಂಧಿತ ವಿಭಾಗದಲ್ಲಿ ಡಿಪ್ಲೊಮಾ ಅಥವಾ ಪದವಿಯನ್ನು ಪೂರ್ಣಗೊಳಿಸಿರಬೇಕು. ಆಗ ಮಾತ್ರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತದೆ.
ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಬಿಸಿಎ/ಬಿಟೆಕ್ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು. ಡಿಪ್ಲೊಮಾ ಪೂರ್ಣಗೊಳಿಸಿದವರು ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 36 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಯುರ್‌ & ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಸಂಬಳ

ಈ ಸರ್ಕಾರಿ ಕೆಲಸಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 35,400 ರೂ. ಸರ್ಕಾರವು ನೀಡುವ ಇತರ ಪ್ರಯೋಜನಗಳು ಸಹ ಅನ್ವಯವಾಗುತ್ತವೆ.

ಶುಲ್ಕ…

ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಈ ಸರ್ಕಾರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಶುಲ್ಕವನ್ನು ಪಾವತಿಸಬೇಕಾಗುತ್ತದೆ.

– ಒಬಿಸಿ – 500
– ಮಹಿಳೆಯರು ಮತ್ತು ಎಸ್ಸಿ / ಎಸ್ಟಿ – 250

ಪರೀಕ್ಷೆ ವಿಧಾನ…

ಈ ಸರ್ಕಾರಿ ಉದ್ಯೋಗಗಳಿಗೆ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಆಧಾರದ ಮೇಲೆ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಪ್ರಮಾಣಪತ್ರ ಪರಿಶೀಲನೆಗೆ ಒಳಪಡಿಸಲಾಗುತ್ತದೆ ಮತ್ತು ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದವರಿಗೆ ಉದ್ಯೋಗ ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ:-

ಹೆಸರು ನೋಂದಾಯಿಸಿ ಲಾಗಿನ್‌ ಆಗಿ.
ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.
ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://indianrailways.gov.in ಗೆ ಭೇಟಿ ನೀಡಿ ಅಥವಾ ಹೆಲ್ಪ್‌ಲೈನ್‌ ನಂಬರ್‌: Helpline No: 9592001188, 01725653333ಕ್ಕೆ ಕರೆ ಮಾಡಿ.

ಸರ್ಕಾರಿ ಯೋಜನೆ, ಸರ್ಕಾರಿ ಉದ್ಯೋಗಗಳು,ಮತ್ತು ಖಾಸಗಿ ಕಂಪನಿ ಉದ್ಯೋಗದ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ Kannada Trend News WhatsApp ಗ್ರೂಪ್ ಮತ್ತು ಟೆಲಿಗ್ರಾಮ್ ಚಾನಲ್‌ಗೆ ಜಾಯಿನ್ ಆಗಿರಿ
WhatsApp Group Join Now
Telegram Group Join Now

Leave a Comment