Ration Card
ಬಿಪಿಎಲ್ ರೇಷನ್ ಕಾರ್ಡ್(BPL Ration Card) ಹೊಂದಿರುವವರಿಗೆ ಬಿಗ್ ಶಾಕ್ ಎದುರಾಗಿದೆ. ಹೌದು, ಅನರ್ಹ ಬಿಪಿಎಲ್ ಕಾರ್ಡ್(Ineligible BPL Card)ಗಳನ್ನು ಕೈಬಿಟ್ಟು ಅರ್ಹ ಫಲಾನುಭವಿಗಳಿಗೆ(eligible beneficiaries) ಬಿಪಿಎಲ್ ಕಾರ್ಡ್‌ಗಳನ್ನು ಒದಗಿಸಲು ತ್ವರಿತವಾಗಿ ಕ್ರಮ(action) ಕೈಗೊಳ್ಳಬೇಕು.
ಜನರನ್ನು ಅನಗತ್ಯವಾಗಿ ಅಲೆದಾಡಿಸಬಾರದು. ಅವರ ಸಮಸ್ಯೆ(problem), ದೂರು(complaint)ಗಳನ್ನು ಆಲಿಸಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ(CM Siddaramaiah) ಅವರು ತಿಳಿಸಿದ್ದಾರೆ.
ಕಳೆದ ಜುಲೈ ತಿಂಗಳು 8 ನೇ ತಾರೀಖಿನಂದು ವಿಧಾನ ಸೌಧದಲ್ಲಿ ರಾಜ್ಯದ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯದರ್ಶಿ ಅಭ್ಯರ್ಥಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯನವರು ಅನರ್ಹ ಬಿಪಿಎಲ್ ರೇಷನ್ ಕಾರ್ಡ್(Ineligible BPL Ration Card) ಗಳನ್ನು ರದ್ದುಗೊಳಿಸುವಂತೆ ಕಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಇದರ ಸಂಪೂರ್ಣ ವಿವರವನ್ನು ಕೆಳಗಡೆ ನೀಡಲಾಗಿದೆ.
ಕರ್ನಾಟಕ ರಾಜ್ಯದಲ್ಲಿ ಶೇಕಡಾ 80ರಷ್ಟು BPL ಕಾರ್ಡ್ಗಳನ್ನು ಹೊಂದಿದ್ದು, 4.37 ಕೋಟಿ ಜನರು ಬಿಪಿಎಲ್ ರೇಷನ್ ಕಾರ್ಡ್ ಸೌಲಭ್ಯವನ್ನು ಪಡೆಯುತ್ತಿದ್ದಾರೆ. 2.95 ಲಕ್ಷ ಹೊಸ ರೇಷನ್ ಕಾರ್ಡ್ ಗಳು ಅರ್ಜಿ ಸಲ್ಲಿಕೆ ಆಗಿದೆ, ಹೊಸ ರೇಷನ್ ಕಾರ್ಡ್ ಹಂಚಿಕೆ ಬಾಕಿ ಇದ್ದು ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಿ ಹೊಸ ರೇಷನ್ ಕಾರ್ಡ್ ಗಳನ್ನು ಉಪಯೋಗ ಪಡೆಯುವ ಜನರಿಗೆ ನೀಡಲಾಗುವುದು ಎಂದು ಮಾಹಿತಿಯನ್ನು ನೀಡಿದ್ದಾರೆ.
ಹೌದು, ಇದರ ಬೆನ್ನಲ್ಲೇ ಕಾರ್ಯ ಪ್ರವೃತ್ತಿರಾದ ಹಿಂದಿನ ಆರು ತಿಂಗಳು ಒಮ್ಮೆ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪತ್ತೆ ಹಚ್ಚಿ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಮಾಹಿತಿಯನ್ನು ನೀಡಿದ್ದು. ಆಹಾರ ಇಲಾಖೆಯು 20 ಲಕ್ಷಕ್ಕೂ ಹೆಚ್ಚು BPL ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದ್ದು ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆ ಎಂದು ಚೆಕ್ ಮಾಡಿಕೊಳ್ಳಲು ಕೆಳಗೆ ನೀಡಿರುವ ಹಂತಗಳನ್ನು ಪಾಲನೆ ಮಾಡಿ.
ಅನರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಸಿಎಂ ಸಿದ್ದರಾಮಯ್ಯನವರಿಂದ (CM Siddaramaih) ಮಹತ್ವದ ಸೂಚನೆ
ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ, ಅವುಗಳನ್ನು ಪತ್ತೆ ಹಚ್ಚಿ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದು, ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಆದರೆ, ಕೆಲವರು ಕಾರ್ಡ್ ಹೊಂದಲು ಅನರ್ಹರಾದರೂ ಅದನ್ನು ಇಟ್ಟುಕೊಂಡಿದ್ದಾರೆ. ಈ ಕಾರಣದಿಂದ ಅವುಗಳನ್ನು ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಲವಾರು ಇಲಾಖೆಯಿಂದ ಬಿಪಿಎಲ್ ಕಾರ್ಡುದಾರರ ಹೆಸರಿನ ಮಾಹಿತಿ ಕಲೆಹಾಕಲಾಗುತ್ತಿದೆ
ಬಿಪಿಎಲ್ ಕಾರ್ಡುದಾರರ ಹೆಸರಿನಲ್ಲಿ ವಾಹನಗಳು ಇದೆಯಾ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡುತ್ತಿದ್ದು, ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡುತ್ತಿದೆ. ಇನ್ನು ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಸರ್ಕಾರಿ ನೌಕರಿ, ಸರ್ಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ.
ರಾಜ್ಯದಲ್ಲಿ ಎಷ್ಟು ಕಾರ್ಡ್ ರದ್ದಾಗುತ್ತೆ?
ಬಿಪಿಎಲ್ ಕಾರ್ಡ್ ಹೊಂದಿರುವವರಲ್ಲಿ ಹಲವರು ಜೀವನೋಪಾಯಕ್ಕಾಗಿ ಒಂದು ವಾಣಿಜ್ಯ ವಾಹನ ಹೊರತುಪಡಿಸಿ ಅದಕ್ಕಿಂತ ಹೆಚ್ಚು ವಾಹನ ಹೊಂದಿರುವುದು ಕಂಡುಬಂದಿದೆ. ಸರ್ಕಾರ ನಿಗದಿಪಡಿಸಿದ ಮಿತಿಗಿಂತ ಹೆಚ್ಚಿನ ಆದಾಯ, ಭೂಮಿ ಹೊಂದಿರುವವರು ಕೂಡ ಪಡಿತರ ಸೌಲಭ್ಯ ಪಡೆಯುತ್ತಿದ್ದಾರೆ. ಅಂತಹ 20 ಲಕ್ಷಕ್ಕೂ ಅಧಿಕ ಬಿಪಿಎಲ್ ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.
ಯಾರೆಲ್ಲ ಬಿಪಿಎಲ್ ಕಾರ್ಡ್ ರದ್ದಾಗಳಿವೆ ?
- – ವೈಟ್ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಇದ್ದರೆ ಕಾರ್ಡ್ ರದ್ದು
– ಐಟಿ ರಿಟರ್ನ್ಸ್ ಮಾಡುತ್ತಿದ್ದರೆ ಬಿಪಿಎಲ್ ಕಾರ್ಡ್ ರದ್ದು
– ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಇದ್ದವರ ಕಾರ್ಡ್ ರದ್ದು
– ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಹೊಂದಿರುವವರ ಕಾರ್ಡ್ ರದ್ದು
– ಪ್ರತಿ ಮಾಹೆ 150 ಯುನಿಟ್‌ಗಳಿಂಗಿತಲೂ ಹೆಚ್ಚಿನ ವಿದ್ಯುಚ್ಛಕ್ತಿಯನ್ನು ಬಳಕೆ ಮಾಡುವ ಕುಟುಂಬದ ಕಾರ್ಡು ರದ್ದು.
– ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷಕ್ಕಿಂತಲೂ ಹೆಚ್ಚಿದ್ದರೆ ಕಾರ್ಡು ರದ್ದು.
ರದ್ದಾದ ರೇಷನ್ ಕಾರ್ಡ್ ಪಟ್ಟಿ ಚೆಕ್ ಮಾಡುವುದು ಹೇಗೆ?
- ಮೊದಲು ಕೆಳಗಡೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ: https://ahara.kar.nic.in/Home/EServices
– ಮುಂದಿನ ಹಂತದಲ್ಲಿ ಈ ರೇಷನ್ ಕಾರ್ಡ್ ಮೇಲೆ ಕ್ಲಿಕ್ ಮಾಡಿ. ನಂತರದಲ್ಲಿ ಶೋ ಕ್ಯಾನ್ಸಲ್ಡ್/ಸಸ್ಪೆಂಡೆಡ್ ರೇಷನ್ ಕಾರ್ಡ್ ಮೇಲೆ ಕ್ಲಿಕ್ ಮಾಡಿ.
– ನಂತರದಲ್ಲಿ ನಿಮ್ಮ ಜಿಲ್ಲೆ ಮತ್ತು ತಾಲೂಕು, ತಿಂಗಳು, ವರ್ಷ ಆಯ್ಕೆ ಮಾಡಿಕೊಳ್ಳಿ ಮತ್ತೆ ಗೋ ಕ್ಲಿಕ್ ಮಾಡಿ.
– ನಂತರದಲ್ಲಿ ನಿಮಗೆ ಒಂದು ಪಟ್ಟಿ ದೊರೆಯುತ್ತದೆ ಅದರಲ್ಲಿ ರೇಷನ್ ಕಾರ್ಡ್ ಗಳು ರದ್ದಾದ ಲಿಸ್ಟನ್ನು ಸಂಪೂರ್ಣವಾಗಿ ನೀಡಿರುತ್ತಾರೆ.