Ration Card
ರಾಜ್ಯ(State)ದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್(BPL card) ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್(card) ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೆ, ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್(APL Card) ಗೆ ವರ್ಗಾವಣೆ(transfer) ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ(V. Muniappa) ತಿಳಿಸುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.
ಹೌದು, ರಾಜ್ಯದಲ್ಲಿ ನಕಲಿ ದಾಖಲೆ(Fake document)ಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಅನರ್ಹರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಆದರೆ, ಇದೀಗ ಈ ನಿರ್ಧಾರವನ್ನು ಬದಲಿಸಿ ಅಂತಹವರಿಗೆ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದರೆ, ಆ ಶುಭ ಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಪಡದ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುದಾಗಿತ್ತು. ಆದರೆ, ಇದೀಗ ಸರ್ಕಾರ ಈ ನಿರ್ಧಾರವನ್ನು ಬದಲಿಸಿ ಒಂದು ಅವಕಾಶ ನೀಡಿದೆ.
ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆಯಾಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆಯಾಗಲಿದೆ ಎಂದರು.
ಅದರಲ್ಲೂ ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇ.80ರಷ್ಟು ಬಡತನವಿದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲಿಸಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.
APL ಕಾರ್ಡ್ ಅನ್ನು BPL ಕಾರ್ಡ್ ಗೆ ವರ್ಗಾವಣೆ ಮಾಡುವುದು ಹೇಗೆ?
ಸಾಮಾನ್ಯವಾಗಿ BPL ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಯಾರಾದರೂ ಸರ್ಕಾರಿ ಕೆಲಸಕ್ಕೆ ಸೇರಿದರೆ ಆ ಕುಟುಂಬದ ಬಿಪಿಎಲ್ ಕಾರ್ಡ್ ಅನ್ನು APL ಗೆ ವರ್ಗಾಯಿಸುತ್ತಾರೆ. ಈ ಸಂದರ್ಭದಲ್ಲಿ ಒಮ್ಮೆ APL ಕಾರ್ಡ್ ಗೆ ವರ್ಗಾವಣೆ ಆದ ನಂತರ ಮತ್ತೇ BPL ಗೆ ಮರಳಿ ವರ್ಗಾಯಿಸಲು ಸಾಧ್ಯವಿಲ್ಲ. ಆದರೆ ಮತ್ತೇ BPL ಕಾರ್ಡ್ ಅನ್ನು ಪಡೆಯುವ ಸರಳ ವಿಧಾನವನ್ನು ತಿಳಿಯೋಣ.
– ಹಂತ 1: ಮೊದಲನೇ ದಾಗಿ ನಿಮ್ಮ APL ಕಾರ್ಡ್ ಅನ್ನು ರದ್ದು ಪಡಿಸಲು ತಾಲೂಕ ಕಚೇರಿಯಲ್ಲಿ ಒಂದು ಲಿಖಿತ ಅರ್ಜಿ ಸಲ್ಲಿಸಬೇಕು. ಈ ಕೆಳಗಿಂನಂತೆ. ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು. ಉದಾಹರಣೆಗೆ ಮಗಳು ಸರ್ಕಾರಿ ನೌಕರಿಯಲ್ಲಿದ್ದು ಮದುವೆಯಾಗಿ ಗಂಡನ ಮನೆಗೆ ಹೋದ ನಂತರ ಲಗ್ನಪತ್ರಿಕೆಯನ್ನು ಲಗತ್ತಿಸುವುದು.
ಅಥವಾ ಮಗನು ಸರ್ಕಾರಿ ನೌಕರಿಯಲ್ಲಿದ್ದು ಮದುವೆಯಾಗಿ ಬೇರೆ ಮನೆ ಮಾಡಿಕೊಂಡು ಇದ್ದಾಗ ಮಗನ ಲಗ್ನ ಪತ್ರಿಕೆ ಅಥವಾ ಸಹೋದರ ಸಹೋದರಿಯ ಲಗ್ನ ಪತ್ರಿಕೆ ಲಗತ್ತಿಸುವುದು.
– ಹಂತ 2 : ತಾಲೂಕ ಅಧಿಕಾರಿಗಳು 1 ವಾರದಲ್ಲಿ ನಿಮ್ಮ ಅರ್ಜಿ & ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ನಿಮ್ಮ APL ಕಾರ್ಡ್ ಅನ್ನು ರದ್ದು ಪಡಿಸುತ್ತಾರೆ.
– ಹಂತ 3 : ನಂತರ ನೀವು ಅಗತ್ಯ ದಾಖಲೆಗಳೊಂದಿಗೆ ಹೊಸ BPL ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.