Ration card
ರೇಷನ್ ಕಾರ್ಡ್(Ration card) ನಮ್ಮ ಹಕ್ಕುಗಳನ್ನು ಸುರಕ್ಷಿತಗೊಳಿಸುವ ಒಂದು ಪ್ರಮುಖ ದಾಖಲೆ(Record)ಯಾಗಿದೆ. ಸರ್ಕಾರದ ವಿವಿಧ ಯೋಜನೆ(scheme)ಗಳ ಲಾಭ ಪಡೆಯಲು ಇದು ಅಗತ್ಯವಾಗಿರುತ್ತದೆ. ಆದರೆ, ಕಾಲಕಾಲಕ್ಕೆ ನಮ್ಮ ವೈಯಕ್ತಿಕ ಮಾಹಿತಿ(Personal information)ಯಲ್ಲಿ ಬದಲಾವಣೆಗಳಾಗುವುದು ಸಹಜ.
ಹೆಸರು ಬದಲಾವಣೆ(Name change), ವಿಳಾಸ ಬದಲಾವಣೆ (Change of address) ಅಥವಾ ಕುಟುಂಬದಲ್ಲಿ ಹೊಸ ಸದಸ್ಯರ ಸೇರ್ಪಡೆ(Addition of new members)ಯಂತಹ ಕಾರಣಗಳಿಂದಾಗಿ ರೇಷನ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡುವ ಅಗತ್ಯ ಬರುತ್ತದೆ. ಈ ಬದಲಾವಣೆಗಳನ್ನು ಸರಳವಾಗಿ ಮಾಡಿಕೊಳ್ಳಲು ಸರ್ಕಾರವು ಹಲವಾರು ಅವಕಾಶಗಳನ್ನು ನೀಡುತ್ತದೆ.
ಇದೀಗ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಆಗಸ್ಟ್ 10 ರವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಇದೇ ತಿಂಗಳ ಆಗಸ್ಟ್ 10 ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.
ಈ ಸುದ್ದಿ ಓದಿ:- Post Office RD scheme: ಕೇವಲ 5 ಸಾವಿರ ಹೂಡಿಕೆ ಮಾಡಿ 8 ಲಕ್ಷ ಪಡೆಯಿರಿ.!
ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. https://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.
ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ?
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
– ಅರ್ಜಿ ಸಲ್ಲಿಸಲು ಮೊದಲು ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
– ಮುಖ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
– ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
– ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.
– ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್‌ಮಿಟ್ ಮಾಡಿ.
– ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನೆಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.
ಯಾವೆಲ್ಲಾ ಮಾಹಿತಿಗಳನ್ನು ತಿದ್ದುಪಡಿ ಮಾಡಬಹುದು?
– ಹೆಸರು: ಹೆಸರಿನಲ್ಲಿನ ತಪ್ಪುಗಳನ್ನು ಸರಿಪಡಿಸುವುದು ಅಥವಾ ಹೊಸದಾಗಿ ವಿವಾಹವಾದ ಮಹಿಳೆಯ ಹೆಸರನ್ನು ಸೇರಿಸುವುದು
– ವಿಳಾಸ: ನಿಮ್ಮ ವಿಳಾಸ ಬದಲಾದರೆ ಅದನ್ನು ಕೂಡಲೇ ರೇಷನ್ ಕಾರ್ಡ್ ನಲ್ಲಿ ನವೀಕರಿಸಬೇಕು.
– ಕುಟುಂಬ ಸದಸ್ಯರು: ಹೊಸದಾಗಿ ಮಗು ಜನಿಸಿದರೆ ಅಥವಾ ಕುಟುಂಬದಲ್ಲಿ ಹೊಸ ಸದಸ್ಯರು ಸೇರಿದರೆ ಅವರನ್ನು ರೇಷನ್ ಕಾರ್ಡ್ ನಲ್ಲಿ ಸೇರಿಸಬೇಕು.
– ಮೃತರ ಹೆಸರು: ಕುಟುಂಬದಲ್ಲಿ ಯಾರಾದರೂ ನಿಧನರಾದರೆ ಅವರ ಹೆಸರನ್ನು ರೇಷನ್ ಕಾರ್ಡ್ ನಿಂದ ತೆಗೆಯಬೇಕು.
ತಿದ್ದುಪಡಿಗೆ ಬೇಕಾಗುವ ದಾಖಲೆಗಳು
– ರೇಷನ್ ಕಾರ್ಡ್ ನ ಮೂಲ ಪ್ರತಿ
– ಆಧಾರ್ ಕಾರ್ಡ್
– ವಿಳಾಸ ಪುರಾವೆ (ಬಿಲ್, ಪಾಸ್ಪೋರ್ಟ್ ಇತ್ಯಾದಿ)
– ಜನನ ಪ್ರಮಾಣ ಪತ್ರ (ಹೊಸ ಸದಸ್ಯರನ್ನು ಸೇರಿಸುವಾಗ)
– ವಿವಾಹ ಪ್ರಮಾಣ ಪತ್ರ (ವಿವಾಹವಾದ ಮಹಿಳೆಯ ಹೆಸರನ್ನು ಸೇರಿಸುವಾಗ)
– ಮರಣ ಪ್ರಮಾಣ ಪತ್ರ (ಮೃತರ ಹೆಸರನ್ನು ತೆಗೆಯುವಾಗ)