Ration card
ಸರ್ಕಾರಿ ಯೋಜನೆಯ (Government scheme) ಫಲಾನುಭವಿಗಳಾಗಲು ರೇಷನ್ ಕಾರ್ಡ್(Ration card) ಬಹಳ ಮುಖ್ಯವಾಗಿದೆ. ಈ ಒಂದು ರೇಷನ್ ಕಾರ್ಡ್ ಇದ್ದರೆ, ಕರ್ನಾಟಕದ (Karnataka) ಕಾಂಗ್ರೆಸ್ (Congress) ಸರ್ಕಾರ ಜಾರಿಗೆ ತಂದಿರುವಂತ ಐದು ಪಂಚ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವುದರ ಜೊತೆಗೆ ವಾರ್ಷಿಕವಾಗಿ ಸಾವಿರಾರು ರೂಪಾಯಿಗಳನ್ನು ಪಡೆಯಬಹುದು.
ಆದರೆ, ರಾಜ್ಯದಲ್ಲಿ ಅನರ್ಹ ರೇಷನ್ ಕಾರ್ಡ್ಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆಯು ವೇಗ ನೀಡಿದೆ. ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು (Department of food and civil supplies) ಕುಟುಂಬ ತಂತ್ರಾಂಶದ ಮೊರೆ ಹೋಗಿದ್ದು, ರಾಜ್ಯದಲ್ಲಿ ಒಟ್ಟು 22,62,413 ಅನರ್ಹ ರೇಷನ್ ಕಾರ್ಡ್ಗಳು (Ration card) ಇರುವುದನ್ನು ತಂತ್ರಾಂಶದ ಮೂಲಕ ಪತ್ತೆ ಮಾಡಿದೆ.
ಹೌದು, ರಾಜ್ಯ ಅಥವಾ ಕೇಂದ್ರ ಸರ್ಕಾರದ ಯಾವುದೇ ಯೋಜನೆಯ ಲಾಭ ಪಡೆಯಲು ರೇಷನ್ ಕಾರ್ಡ್ ಮುಖ್ಯವಾಗಿದೆ. ಆದರೆ, ಅನರ್ಹ ರೇಷನ್ ಕಾರ್ಡ್ ಅನ್ನು ರದ್ದುಪಡಿಸುವ ಕಾರ್ಯಕ್ಕೆ ವೇಗ ನೀಡಿರುವ ಆಹಾರ ಇಲಾಖೆ ಅನರ್ಹ ಪಡಿತರ ಚೀಟಿಗಳ ಪತ್ತೆಗೆ ಕುಟುಂಬ ತಂತ್ರಾಂಶದ ಮೊರೆ ಹೋಗಿದ್ದು, ರಾಜ್ಯದಲ್ಲಿ ಒಟ್ಟು 22,62,413 ಅನರ್ಹ ಅಂತ್ಯೋದಯ, ಬಿಪಿಎಲ್ ಕಾರ್ಡ್ಗಳು ಇರುವುದನ್ನ ಪತ್ತೆ ಮಾಡಿದೆ.
ಈ ಸುದ್ದಿ ಓದಿ:- NABARD Recruitment: ನಬಾರ್ಡ್ ಬ್ಯಾಂಕ್ ಆಫೀಸ್ ಅಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! ವೇತನ 35,000/-
14 ಮಾನದಂಡಗಳನ್ನು ಮುಂದಿಟ್ಟುಕೊಂಡು ರೇಷನ್ ಕಾರ್ಡ್ ರದ್ದು
ಸರ್ಕಾರ ನಿಗದಿಪಡಿಸಿದ ಮಾನದಂಡಗಳಾದ ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷಕ್ಕಿಂತಲೂ ಹೆಚ್ಚಿರುವವರು, ವೈಟ್ ಬೋರ್ಡ್‌ನ ನಾಲ್ಕು ಚಕ್ರದ ವಾಹನ ಉಳ್ಳವರು, ಆದಾಯ ತೆರಿಗೆ ಪಾವತಿಸುವವರು, ಹಳ್ಳಿಯಲ್ಲಿ3 ಹೆಕ್ಟೇರ್ ಒಣಭೂಮಿ, ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು.
ನಗರ ಪ್ರದೇಶಗಳಲ್ಲಿ 1000 ಚದರ ಅಡಿ ವಿಸ್ತೀರ್ಣದ ಸ್ವಂತ ಮನೆ ಹೊಂದಿರುವವರು ಹಾಗೂ ಸರ್ಕಾರಿ, ಅರೆಸರ್ಕಾರಿ ಉದ್ಯೋಗದಲ್ಲಿರುವವರು ಸೇರಿದಂತೆ 14 ಮಾನದಂಡಗಳನ್ನು ಮುಂದಿಟ್ಟುಕೊಂಡು ರೇಷನ್ ಕಾರ್ಡ್ ರದ್ದುಪಡಿಸುವ ಪ್ರಕ್ರಿಯೆಗೆ ಆಹಾರ ಇಲಾಖೆಯು ಮುಂದಾಗಿದೆ.
10,97,621 ಅನರ್ಹ ಬಿಪಿಎಲ್ ಕಾರ್ಡ್
ಸರ್ಕಾರಿ ನಿಯಮಗಳಿಗೆ ವಿರುದ್ಧವಾಗಿ ಪಡೆದ ಅನರ್ಹ ಪಡಿತರ ಚೀಟಿಗಳ ವಿವರ ನೀಡುವಂತೆ ಆಹಾರ ಇಲಾಖೆಯು ಇ- ಆಡಳಿತ ಕೇಂದ್ರಕ್ಕೆ ಈಗಾಗಲೇ ಮನವಿ ಮಾಡಿದ್ದು, ಇ- ಆಡಳಿತ ಕೇಂದ್ರದ ತಂತ್ರಾಂಶದಿಂದ ದೊರೆತ ಮಾಹಿತಿಯ ಅನ್ವಯ 10,97,621 ಬಿಪಿಎಲ್ ಹಾಗೂ 10,54,368 ಅಂತ್ಯೋದಯ ಕಾರ್ಡ್ ಗಳು ಪತ್ತೆಯಾಗಿದ್ದು, 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು ಹೊಂದಿದ್ದಾರೆ ಎಂದು ಇ- ಆಡಳಿತ ಕೇಂದ್ರ ತಿಳಿಸಿದೆ.
ಈ ಸುದ್ದಿ ಓದಿ:- Labor Card ಕಾರ್ಮಿಕ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ನಿಮಗೆ ಸಿಗಲಿದೆ 60,000 ಸಹಾಯಧನ.!
4272 ಪಡಿತರ ಚೀಟಿಗಳೊಂದಿಗೆ ಕೆಜಿಐಡಿ ಜೋಡಣೆ
1,06,152 ರೇಷನ್ ಕಾರ್ಡ್ ಗಳನ್ನು ಆದಾಯ ತೆರಿಗೆ ಪಾವತಿದಾರರು ಪಡೆದುಕೊಂಡಿದ್ದು, ಆದರಲ್ಲಿ, 4272 ಪಡಿತರ ಚೀಟಿಗಳೊಂದಿಗೆ ಕೆಜಿಐಡಿ ಹೆಚ್.ಆರ್.ಎಂ.ಎಸ್.ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ- ಆಡಳಿತ ಕೇಂದ್ರ ಪತ್ತೆ ಮಾಡಿದೆ. ಇದೇ ಸಂದರ್ಭದಲ್ಲಿ ಹತ್ತು ದಿನಗಳ ಒಳಗೆ ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸಬೇಕು ಎಂದು ಎಲ್ಲಾ ಜಿಲ್ಲೆಗಳ ಜಂಟಿ ಮತ್ತು ಉಪ ನಿರ್ದೇಶಕರಿಗೆ ಆಹಾರ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ?
ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆಯೇ ಎಂದು ತಿಳಿದುಕೊಳ್ಳಲು ಮೊದಲಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವೆಬ್ಸೈಟ್ಗೆ ತೆರಳಿ, ಇ- ಸ್ಟೇಟಸ್ ನಲ್ಲಿ ರದ್ದು ಮಾಡಿರುವ ಅಥವಾ ತಡೆಹಿಡಿಯಲಾದ ರೇಷನ್ ಕಾರ್ಡ್ ಎನ್ನುವದರ ಮೇಲೆ, ಕ್ಲಿಕ್ ಮಾಡ ಬೇಕು? ಆ ನಂತರದಲ್ಲಿ ನಿಮ್ಮ ಜಿಲ್ಲೆ ಮತ್ತು ಗ್ರಾಮವನ್ನು ಆಯ್ದು ಕೊಂಡು ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದು ಮಾಡಿದರೆ, ನಿಮ್ಮ ರೇಷನ್ ಕಾರ್ಡ್ ರದ್ದಾಗಿದ್ಯೋ ಇಲ್ವೋ ಎನ್ನುವ ಮಾಹಿತಿ ಕಂಡುಕೊಳ್ಳಬಹುದು.
ವಾರ್ಷಿಕ 1.20 ಲಕ್ಷ ಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರ, ಮನೆಯಲ್ಲಿ ಕಾರು ಹೊಂದಿರುವ, ಆದಾಯ ತೆರಿಗೆ ಪಾವತಿಸುವವರು, ಏಳೂವರೆ ಎಕರೆ ಒಣ ಅಥವಾ ನೀರಾವರಿ ಭೂಮಿ ಹೊಂದಿರುವವರು, ಅನುದಾನಿತ- ಅನುದಾನರಹಿತ ಕಾಲೇಜು ನೌಕರರು, ನೊಂದಾಯಿತ ಗುತ್ತಿಗೆದಾರರು.
ಬಹುರಾಷ್ಟ್ರೀಯ ಕಂಪನಿ, ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವವರು, ಸ್ವಂತಕ್ಕಾಗಿ ಒಂದು ಆಟೋ ರೀಕ್ಷಾ ಹೊರತುಪಡಿಸಿ 100 ಸಿಸಿ ಮೇಲಟ್ಟ ಇಂಧನ ಚಾಲಿತ ದ್ವಿಚಕ್ರ, ತ್ರಿಚಕ್ರ, ಕಾರು ಹೊಂದಿರುವುದು ಸೇರಿ 14 ಮಾನದಂಡ ಮುಂದಿಟ್ಟುಕೊಂಡು ಬಿಪಿಎಲ್ ಕಾರ್ಡ್ ರದ್ದುಪಡಿಸುವ ಪ್ರಕ್ರಿಯೆಗೆ ಇಲಾಖೆ ಮುಂದಾಗಿದೆ.