Ration Card:
ದೇಶದಲ್ಲಿ ಪ್ರಮುಖ ದಾಖಲೆಗಲ್ಲಿ ಪಡಿತರ ಚೀಟಿ(Ration Card)ಯೂ ಕೂಡ ಒಂದಾಗಿದೆ. ಪಡಿತರ ಚೀಟಿ ಹೊಂದಿರುವವರಿಗೆ ಪ್ರಮುಖ ಮಾಹಿತಿಯೊಂದು ಹೊರಬಿದ್ದಿದೆ. ಹೌದು, ಒಂದು ವೇಳೆ ಪಡಿತರ ಚೀಟಿದಾರರು ಸೆಪ್ಟೆಂಬರ್(September) ಅಂತ್ಯದೊಳಗೆ ಈ ಕೆಲಸ ಮಾಡದಿದ್ದರೆ ರೇಷನ್ ನೀಡುವುದನ್ನು ನಿಲ್ಲಿಸಲಾಗಿತ್ತದೆ ಎಂದು ರಾಜ್ಯ ಸರ್ಕಾರ (State Govt) ಎಚ್ಚರಿಕೆ ಸಂದೇಶ(Warning message)ವನ್ನು ರವಾನಿಸಿದೆ. ಈ ಬಗ್ಗೆ ಇಂದಿನ ಈ ಲೇಖನದಲ್ಲಿ ಸಂಪೂರ್ಣವಾಗಿ ನೋಡೋಣ ಬನ್ನಿ…
ರಾಜ್ಯ ಸರ್ಕಾರದಿಂದ ಪಡಿತರ ಚೀಟಿಗೆ ಕುಟುಂಬ ಸದಸ್ಯರ(family members) ಇ-ಕೆವೈಸಿ(E-KYC) ಕಡ್ಡಾಯ ಮಾಡಲಾಗಿದೆ. ಹೀಗಿದ್ದರೂ ಇನ್ನೂ ಕೆಲವರು ಇ-ಕೆವೈಸಿ ಮಾಡಿಲ್ಲ. ಇಂತಹವರು ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳದಿದ್ದರೆ, ಇಂತಹ ಪಡಿತರ ಚೀಟಿಗಳಿಗೆ ರೇಷನ್ ನೀಡುವುದನ್ನು ಮುಂದಿನ ತಿಂಗಳಿನಿಂದ ನಿಲ್ಲಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
ಈ ಬಗ್ಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ(Department of Food, Civil Supplies and Consumer Affairs)ಯು ಮಾಹಿತಿ ನೀಡಿದೆ. ಎಲ್ಲಾ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕುಟುಂಬದ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.
ಈ ಸುದ್ದಿ ಓದಿ:- HSRP ನಂಬರ್ ಪ್ಲೇಟ್ ಇಲ್ಲದಿದ್ರೂ ದಂಡ ಬೀಳಬಾರದು ಅಂದ್ರೆ ತಕ್ಷಣವೇ ಈ 2 ಕೆಲಸ ಮಾಡಿ.!
ಸೆಪ್ಟೆಂಬರ್ ಅಂತ್ಯದೊಳಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7ರಿಂದ ರಾತ್ರಿ 9ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳಬೇಕಾಗುತ್ತದೆ. ಇದರ ಮೇಲೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ರೇಷನ್ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.
ಈ ಹಿಂದೆ, ಆಧಾರ್ ಬಯೋಮೆಟ್ರಿಕ್ ಪರಿಶೀಲನೆಯನ್ನು ಬಳಸಿಕೊಂಡು ಇ-ಕೆವೈಸಿ ಅನ್ನು ಪೂರ್ಣಗೊಳಿಸಲು ಪಡಿತರ ಚೀಟಿದಾರರು ತಮ್ಮ ರಾಜ್ಯದ ಸ್ಥಳೀಯ ಸರ್ಕಾರಿ ಪಡಿತರ ಅಂಗಡಿಗೆ ಭೇಟಿ ನೀಡಬೇಕಾಗಿತ್ತು. ಆದರೆ ಈಗ ನೀವು ನಿಮ್ಮ ಸ್ವಂತ ರಾಜ್ಯವನ್ನು ಹೊರತುಪಡಿಸಿ ಬೇರೆ ರಾಜ್ಯದಲ್ಲಿ ವಾಸಿಸುತ್ತಿದ್ದರೆ, ನೀವು ಇ-ಕೆವೈಸಿಗಾಗಿ ನಿಮ್ಮ ತವರು ರಾಜ್ಯಕ್ಕೆ ಹಿಂತಿರುಗುವ ಅಗತ್ಯವಿಲ್ಲ.
ಬದಲಾಗಿ ನಿಮ್ಮ ಪ್ರಸ್ತುತ ವಾಸಸ್ಥಳದಲ್ಲಿರುವ ಯಾವುದೇ ಸರ್ಕಾರಿ ಪಡಿತರ ಅಂಗಡಿಗೆ ನೀವು ಭೇಟಿ ನೀಡಬಹುದು ಮತ್ತು ಆಧಾರ್ ಬಯೋಮೆಟ್ರಿಕ್ ಪರಿಶೀಲನೆಯನ್ನು ಬಳಸಿಕೊಂಡು ಅಲ್ಲಿ e-KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದಾಗಿದೆ. ಇ-ಕೆವೈಸಿ ಪ್ರಕ್ರಿಯೆಯು ಹಳೆಯ ಕುಟುಂಬದ ಮಾಹಿತಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಸಹ ಪರಿಹರಿಸುತ್ತದೆ. ಪಡಿತರ ಚೀಟಿಯಲ್ಲಿ ಪಟ್ಟಿ ಮಾಡಲಾದ ಎಲ್ಲಾ ಕುಟುಂಬ ಸದಸ್ಯರು ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಗತ್ಯವಿದೆ ಎಂದು ತಿಳಿಸಿದೆ.
ಈ ಸುದ್ದಿ ಓದಿ:- LPG ಸಿಲಿಂಡರ್ ಬಳಸುತ್ತಿರುವವರಿಗೆ ಸಿಕ್ಕಿತು ಮತ್ತೊಂದು ಸೌಲಭ್ಯ.!
ಅರ್ಜಿ ಸಲ್ಲಿಕೆಗೆ ಯಾವೆಲ್ಲ ದಾಖಲೆಗಳು ಬೇಕು: ಪ್ರಮುಖ ದಾಖಲೆಗಳಲ್ಲಿ ರೇಷನ್ ಕಾರ್ಡ್ ಕೂಡ ಒಂದಾಗಿದೆ. ಇನ್ನು ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿನಿಸಿ.
ಲೋಕಸಭೆ ಚುನಾವಣೆ ಬಳಿಕ ಹೊಸ ಪಡಿತರ ಚೀಟಿಗೆ ಅವಕಾಶವನ್ನು ಕಲ್ಪಿಸಲಾಗಿತ್ತು. ಆದರೆ ಸರ್ವರ್ ಡೌನ್ ಆಗಿದ್ದರಿಂದ ಹೆಚ್ಚಿನ ಜನ ಅರ್ಜಿ ಸಲ್ಲಿಸದೇ ವಂಚಿತರಾಗಿದ್ದರು. ಇದೀಗ ಹೊಸ ರೇಷನ್ ಪಡಿತರ ಚೀಟಿ ನಿರೀಕ್ಷೆಯಲ್ಲಿರುವವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಈಗ ಮತ್ತೆ ಅವಕಾಶ ಕಲ್ಪಿಲಾಗಿದೆ.
ahara.kar.nic.inಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾ ಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ ಈ ರೇಷನ್ ಕಾರ್ಡ್‌ಗಳ ಅರ್ಜಿಯನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಹೊಸ ರೇಷನ್ ಕಾರ್ಡ್‌ಗಳ ವಿತರಣೆಯನ್ನು ಸೆಪ್ಟೆಂಬರ್ ಎರಡನೇ ವಾರದಲ್ಲಿ ಮಾಡಲಾಗುತ್ತದೆ.
ಈ ಸುದ್ದಿ ಓದಿ:- Land ಸರ್ಕಾರಿ ಜಮೀನಿನಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಭರ್ಜರಿ ಸುದ್ದಿ.! ನಿಮಗೆ ಸಿಗಲಿದೆ ಹಕ್ಕು ಪತ್ರ.!
ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 15ರಿಂದ 30ರೊಳಗೆ ಯಾವುದಾದರೂ ಒಂದು ದಿನದಲ್ಲಿ ಅವಕಾಶ ಮಾಡಿಕೊಡಲಾಗುತ್ತದೆ ಎಂದು ತಿಳಿದುಬಂದಿದೆ.
ಅರ್ಜಿ ಸಲ್ಲಿಕೆಗೆ ಯಾವೆಲ್ಲಾ ಅರ್ಹತೆಗಳೇನು.?
* ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
* ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರುವವರು ಅರ್ಜಿ ಸಲ್ಲಿಸಬಹುದಾಗಿದೆ.
* ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಬಹುದು.
* ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತ ಆಗಿರಲಿದೆ.
ಯಾವೆಲ್ಲಾ ದಾಖಲೆಗಳು ಬೇಕು.?
* ವೋಟರ್ ಐಡಿ
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಡ್ರೈವಿಂಗ್ ಲೈಸೆನ್ಸ್
* ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
* ಮೊಬೈಲ್ ಸಂಖ್ಯೆ
* ಸ್ವಯಂ ಘೋಷಿತ ಪ್ರಮಾಣ ಪತ್ರ