ರಾಜ್ಯ(State)ದಲ್ಲಿ ಶೀಘ್ರವೇ 400 ಪಶು ವೈದ್ಯರ ನೇಮಕಾತಿ(Recruitment of Veterinarians)ಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿ.!
ಹೌದು, ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಮೈಸೂರಿನಲ್ಲಿ ಮಾತನಾಡಿದ ಅವರು ‘ ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಮನವಿಗೆ ಸ್ಪಂದಿಸಿ ರಾಜ್ಯಾದ್ಯಂತ 200 ಪಶುಚಿಕಿತ್ಸಾಲಯ ಕಟ್ಟಡಗಳನ್ನು ಮಂಜೂರು ಮಾಡಿದ್ದಾರೆ. ಕ್ಷೇತ್ರದಲ್ಲಿ ಈ ಪಶು ಚಿಕಿತ್ಸಾಲಯ ಕಟ್ಟಡಗಳನ್ನು ಪೂರ್ಣಗೊಳಿಸಲಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ ಈಗಾಗಲೇ ಮೈಸೂರು ಜಿಲ್ಲೆಗೆ 12 ಪಶು ಚಿಕಿತ್ಸಾಲಯ ಕಟ್ಟಡಗಳು ಲಭ್ಯವಾಗಿದೆ ಎಂದು ತಿಳಿಸಿದರು.
ನಮ್ಮ ಕರ್ನಾಟಕ ರಾಜ್ಯದಲ್ಲಿ ಪಶು ವೈದ್ಯರ ಕೊರತೆಯನ್ನು ನೀಗಿಸಲು ಶೀಘ್ರದಲ್ಲಿಯೇ 400 ಮಂದಿ ವೈದ್ಯರ ನೇಮಕಕ್ಕೆ ಸಂಬಂಧಿಸಿದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನ ಸಚಿವ ಕೆ ವೆಂಕಟೇಶ್ ಅವರು ತಿಳಿಸಿದ್ದಾರೆ. ಜೊತೆಗೆ ಪಶು ಚಿಕಿತ್ಸಾಲಯಗಳಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯದಲ್ಲಿ ಕಟ್ಟಡ ಕೊರತೆ ನೀಗಿಸಲು ರಾಜ್ಯಾದ್ಯಂತ 200 ಕಟ್ಟಡಗಳ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ತಿಳಿಸಿದ್ದಾರೆ.
ಈ ಸುದ್ದಿ ಓದಿ:- Today Gold Rate: ಚಿನ್ನದ ಬೆಲೆಯಲ್ಲಿ 4500 ರೂಪಾಯಿ ಇಳಿಕೆ.!
”ಪಶುಸಂಗೋಪನಾ ಇಲಾಖೆ ಬರಗಾಲ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ, ರಾಜ್ಯಾದ್ಯಂತ 400 ಕೋಟಿ ವೆಚ್ಚದಲ್ಲಿ ರೈತರಿಗೆ ಮೇವಿನ ಬಿತ್ತನೆ ಬೀಜಗಳನ್ನು ವಿತರಣೆ ಮಾಡಿದೆ. ಜಿಲ್ಲೆಯಲ್ಲಿ 1.9 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್‌ಗಳನ್ನು ವಿತರಿಸಲಾಗಿದ್ದು, ಹೀಗಾಗಿ ಬರಗಾಲದ ಪರಿಸ್ಥಿತಿಯಲ್ಲಿಯೂ ಹಾಲಿನ ಉತ್ಪಾದನೆ ಹೆಚ್ಚಾಗಿತ್ತು ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಪಶುವೈದ್ಯರ ಕೊರತೆ ನೀಗಿಸಲು 400 ಪಶು ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ,” ಎಂದು ಹೇಳಿದರು.
ಶಾಸಕ ದರ್ಶನ್ ಧ್ರುವನಾರಾಯಣ್ ಮಾತನಾಡಿ, ”ನಂಜನಗೂಡು ತಾಲೂಕಿಗೆ 3 ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳ ಅಗತ್ಯವಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಡಲಾಗಿತ್ತು. ಸದ್ಯ ಕಂದೇಗಾಲ ಗ್ರಾಮದಲ್ಲಿ ಆಸ್ಪತ್ರೆ ತೆರೆಯಲಾಗಿದ್ದು, ಮುಂಬರುವ ದಿನಗಳಲ್ಲಿ ತಾಲೂಕಿನ ಕುರಹಟ್ಟಿ ಹಾಗೂ ದೇವರಸನಹಳ್ಳಿಯಲ್ಲಿ ಪಶು ಆಸ್ಪತ್ರೆ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿದರು.
ಇನ್ನೂ, ಪಶುಸಂಗೋಪನೆ ಇಲಾಖೆಯಲ್ಲಿ 400 ಪಶು ವೈದ್ಯಾಧಿಕಾರಿಗಳ ನೇಮಕ ಮಾಡಿಕೊಳ್ಳಲು ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಿದ್ದು, ನೇಮಕ ಪ್ರಕ್ರಿಯೆ ವಿಳಂಬವಾಗಿರುವುದರಿಂದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಈ ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ ಎಂದು ಸಚಿವ ಕೆ. ವೆಂಕಟೇಶ್ ಹೇಳಿದರು.
ಈ ಸುದ್ದಿ ಓದಿ:- Gas: ಗೃಹಿಣಿಯರಿಗೆ ಗುಡ್ ನ್ಯೂಸ್ LPG ಸಿಲಿಂಡರ್ ಬೆಲೆಯಲ್ಲಿ 300 ರೂಪಾಯಿ ಇಳಿಕೆ.!
ವೆಂಕಟೇಶ್ ಮಾತಿಗೆ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಪ್ರಶ್ನೆಗೆ ಉತ್ತರಿಸಿದ ಅವರು, ಉಡುಪಿ ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆಗೆ ಒಟ್ಟು 357 ಹುದ್ದೆಗಳು ಮಂಜೂರಾಗಿದ್ದು, 77 ಹುದ್ದೆಗಳಷ್ಟೇ ಭರ್ತಿಯಾಗಿವೆ. ಇನ್ನೂ 280 ಹುದ್ದೆಗಳು ಖಾಲಿ ಇವೆ. ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದರಿಂದ ಈ ಹುದ್ದೆಗಳು ಭರ್ತಿಯಾಗಲಿವೆ ಎಂದರು.
ಮಧ್ಯಪ್ರವೇಶಿಸಿದ ಶಾಸಕ ಕೊಡ್ಗಿ, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಶು ವೈದ್ಯರ ಕೊರತೆ ಹೆಚ್ಚಿದೆ. ಆದ್ದರಿಂದ ಗುತ್ತಿಗೆ ಆಧಾರದಲ್ಲಿ ನೇಮಿಸುವ ವೈದ್ಯರನ್ನಾದರೂ ನಮ್ಮ ಕ್ಷೇತ್ರಕ್ಕೆ ನೀಡಬೇಕು ಎಂದರು. ಉತ್ತರಿಸಿದ ಸಚಿವರು, ಕುಂದಾಪುರದಲ್ಲಿ 2 ಪಶು ಆಸ್ಪತ್ರೆ, 10 ಪಶು ಚಿಕಿತ್ಸಾಲಯ, 8 ಪ್ರಾಥಮಿಕ ಪಶು ಚಿಕಿತ್ಸಾಲಯಗಳಿಗೆ ಒಟ್ಟು 79 ಹುದ್ದೆಗಳು ಮಂಜೂರಾಗಿದ್ದು 65 ಹುದ್ದೆಗಳು ಖಾಲಿ ಇವೆ.
ಜಾನುವಾರು ಅಧಿಕಾರಿಯಿಂದ ಜಾನುವಾರು ಅಭಿವೃದ್ಧಿ ಅಧಿಕಾರಿಯಾಗಿ, ಹಿರಿಯ ಪಶುವೈದ್ಯಕೀಯ ಪರೀಕ್ಷಕರನ್ನು ಜಾನುವಾರು ಅಧಿಕಾರಿಯಾಗಿ ಮುಂಭಡ್ತಿ ನೀಡಲಾಗಿದೆ. ಖಾಲಿ ಹುದ್ದೆಗಳನ್ನು ಪ್ರಭಾರ ವ್ಯವಸ್ಥೆ ಮೂಲಕ ನಡೆಸಲಾಗುತ್ತಿದ್ದು, ಹೊರಗುತ್ತಿಗೆ ಆಧಾರದ ಮೇಲೆ 13 ಮಂದಿ ಡಿ ದರ್ಜೆ ನೌಕರರು ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದರು