RTO Recruitment:
ರಾಜ್ಯದಾದ್ಯಂತ ಇರುವ ಎಲ್ಲಾ ಸರ್ಕಾರಿ ಹುದ್ದೆ ನಿರೀಕ್ಷಕರಿಗೆ ಮತ್ತೊಂದು ಅವಕಾಶ ಸಿಗುತ್ತದೆ. ರಾಜ್ಯ ಸಾರಿಗೆ ಇಲಾಖೆಯಲ್ಲಿ (Transport Department) ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು ಹುದ್ದೆಗಳ (Motor Vehicle inspector) ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ(KPSC) ಪರೀಕ್ಷೆ ನಡೆಸಲಾಗುತ್ತಿದ್ದು ರಾಜ್ಯದಲ್ಲಿರುವ ಎಲ್ಲಾ ಪ್ರತಿಭಾವಂತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪ್ರಯತ್ನ ಪಡಬಹುದಾಗಿದೆ.
ಎಲ್ಲ ಸರ್ಕಾರಿ ಹುದ್ದೆ ನಿಯಮಗಳಂತೆ ಈ ಹುದ್ದೆಗಳಿಗೂ ಕೂಡ ಪರೀಕ್ಷೆಗಳನ್ನು ನಡೆಸಿ ನಿಗದಿಪಡಿಸಿರುವ ಮಾನದಂಡದ ಮೇಲೆ ಅರ್ಹತೆ ಪಡೆದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯದ ಯುವ ಜನತೆಗೆ ಅನುಕೂಲತೆ ಮಾಡಿಕೊಡುವ ಸಲುವಾಗಿ ನಾವು ಸಹ ಈ ಲೇಖನದಲ್ಲಿ ನೇಮಕಾತಿ ಕುರಿತಂತೆ ಇಲಾಖೆ ಹೊರಡಿಸಿರುವ ಪ್ರಕಟಣೆಯಲ್ಲಿರುವ ಪ್ರಮುಖ ಸಂಗತಿಗಳಾದ.
ಹುದ್ದೆ ವಿವರ, ಶೈಕ್ಷಣಿಕ ವಿದ್ಯಾರ್ಹತೆ ಹಾಗೂ ವಯೋಮಿತಿ ಮಾನದಂಡಗಳು, ವಯೋಮಿತಿ ಸಡಲಿಕೆ, ಅರ್ಜಿ ಶುಲ್ಕ, ಆಯ್ಕೆ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಪ್ರಮುಖ ದಿನಾಂಕಗಳು ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. ಸಾಮಾನ್ಯವಾಗಿ ಪ್ರತಿಯೊಬ್ಬ ಯುವಕ ಅಥವಾ ಯುವತಿಗೂ ಕೂಡ ತಾನು ಸರ್ಕಾರಿ ಹುದ್ದೆ ಹೊಂದಬೇಕು ಎನ್ನುವ ಪ್ರಬಲವಾದ ಇಚ್ಛೆ ಇರುತ್ತದೆ.
ಸರ್ಕಾರಿ ಹುದ್ದೆ ಹೊಂದುವುದರಿಂದ ಒಂದು ಉದ್ಯೋಗ ಭದ್ರತೆ ಹಾಗೂ ಸಾಕಷ್ಟು ಸವಲತ್ತುಗಳು ಸಿಗುತ್ತವೆ ಮತ್ತು ಇದೊಂದು ಪ್ರತಿಷ್ಠೆಯ ವಿಚಾರ ಎನ್ನುವುದು ಕೂಡ ಈ ಹಂಬಲಕ್ಕೆ ಕಾರಣವಾಗಿದೆ ಹಾಗಾಗಿ ತಪ್ಪದೆ ಈ ಉದ್ಯೋಗ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ
ನೇಮಕಾತಿ ಸಂಸ್ಥೆ:- ಕರ್ನಾಟಕ ಲೋಕಸೇವಾ ಆಯೋಗ (KPSC)
ಉದ್ಯೋಗ ಸಂಸ್ಥೆ:- ಸಾರಿಗೆ ಇಲಾಖೆ
ಹುದ್ದೆ ಹೆಸರು:- ಮೋಟಾರು ವಾಹನ ನಿರೀಕ್ಷಕರು
ಒಟ್ಟು ಹುದ್ದೆಗಳ ಸಂಖ್ಯೆ:- 76 ಹುದ್ದೆಗಳು
ವೇತನ ಶ್ರೇಣಿ:-
* ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂ.33,450 ರಿಂದ ರೂ.62,600 ವೇತನ ನಿಗದಿಪಡಿಸಲಾಗಿದೆ
* ಇದರೊಂದಿಗೆ ಇನ್ನಿತರೆ ಸರ್ಕಾರಿ ಸೌಲಭ್ಯಗಳು ಕೂಡ ಸಿಗುತ್ತವೆ
ಉದ್ಯೋಗ ಸ್ಥಳ:-
ಈ ಹುದ್ದೆಗಳಿಗೆ ಆಯ್ಕೆ ಆಗುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯದಾದ್ಯಂತ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸಲು ಸಿದ್ಧರಾಗಿರಬೇಕು
ಶೈಕ್ಷಣಿಕ ವಿದ್ಯಾರ್ಹತೆ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ SSLC ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು
* ಇದರೊಂದಿಗೆ ಮೂರು ವರ್ಷಗಳ ಡಿಪ್ಲೋಮೋ ಇನ್ ಆಟೋಮೊಬೈಲ್ ಇಂಜಿನಿಯರಿಂಗ್ ಅಥವಾ ಮೆಕ್ಯಾನಿಕಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು
* ಜೊತೆಗೆ ಲಘು ಮೋಟಾರು ವಾಹನ ಮತ್ತು ಮೋಟರ್ ಸೈಕಲ್ ವಾಹನ ಚಾಲನ ಪರವಾನಗಿ ಹೊಂದಿರಬೇಕು
ವಯೋಮಿತಿ:-
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 35 ವರ್ಷಗಳು
ವಯೋಮಿತಿ ಸಡಿಲಿಕೆ:-
* 2A, 2B, 3A, 3B ವರ್ಗದ ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ
* SC / ST ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ
ಅರ್ಜಿ ಸಲ್ಲಿಸುವ ವಿಧಾನ:-
* ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಮೂಲಕವೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು.
* ವೆಬ್ಸೈಟ್ ವಿಳಾಸ
https://kpsc.kar.nic.in
* ಅಧಿಕೃತ ವೆಬ್ಸೈಟ್ ಗೆ ತೆರಳಿ ಮೋಟಾರ್ ವಾಹನ ನಿರೀಕ್ಷಕರು ಹುದ್ದೆಗಳ ಅರ್ಜಿ ಲಿಂಕ್ ಇರುವ ಕಡೆ ಸರ್ಚ್ ಮಾಡಿ ಅದನ್ನು ಕ್ಲಿಕ್ ಮಾಡುವ ಮೂಲಕ ಮುಂದುವರಿಯಬೇಕು.
* ಅರ್ಜಿ ಫಾರಂನಲ್ಲಿ ವಿವರಗಳನ್ನು ತುಂಬಿಸಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ, ಕೊನೆಯಲ್ಲಿ ಪೂರಕ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಕೆ ಯಶಸ್ವಿ ಆದಮೇಲೆ ತಪ್ಪದೇ ಅರ್ಜಿ ಸ್ಪೀಕೃತಿ ಪ್ರತಿ ಪಡೆದುಕೊಳ್ಳಬೇಕು.
ಆಯ್ಕೆ ವಿಧಾನ:-
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಶುಲ್ಕ:-
* ಅರ್ಜಿ ಶುಲ್ಕವನ್ನು ಆನ್ಲೈನಲ್ಲಿಯೇ ಕ್ರೆಡಿಟ್ ಕಾರ್ಡ್ / ಡೆಬಿಟ್ ಕಾರ್ಡ್ ಅಥವಾ ನೆಟ್ ಬ್ಯಾಂಕಿಂಗ್ / UPI ಆಪ್ ಮೂಲಕ ಪಾವತಿ ಮಾಡಬಹುದು
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600
* 2A, 2B, 3A, 3B ಅಭ್ಯರ್ಥಿಗಳಿಗೆ ರೂ.300
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
* SC / ST, ಪ್ರವರ್ಗ – 1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು:-
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 22 ಏಪ್ರಿಲ್, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 03 ಜುಲೈ 2024.